Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Team Udayavani, Apr 19, 2024, 10:53 AM IST
ಪಶ್ಚಿಮ ಬಂಗಾಳ: 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 102 ಕ್ಷೇತ್ರಗಳಿಗೆ ಇಂದು (ಶುಕ್ರವಾರ) ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದ್ದು ಈ ನಡುವೆ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ನಡೆದ ವರದಿಯಾಗಿದೆ.
ಪಶ್ಚಿಮ ಬಂಗಾಳದ ಕೂಚ್ ಬೆಹಾರ್‌ನಲ್ಲಿ ಬೆಳಿಗ್ಗೆ ಮತದಾನ ಪ್ರಕ್ರಿಯೆ ನಡೆದ ಕೆಲ ಹೊತ್ತಿನಲ್ಲೇ ಹಿಂಸಾಚಾರ ಭುಗಿಲೆದ್ದಿದ್ದು, ಚಂದಮಾರಿಯ ಮತಗಟ್ಟೆಯೊಂದರ ಬಳಿ ಕಲ್ಲು ತೂರಾಟದ ವರದಿಗಳು ಹೊರಹೊಮ್ಮಿವೆ. ಈ ವೇಳೆ ಬಿಜೆಪಿ ಬೂತ್ ಅಧ್ಯಕ್ಷರು ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಾಂದ್ಮಾರಿ ಪ್ರದೇಶದಲ್ಲಿ ಚುನಾವಣೆ ವೇಳೆ ಹಿಂಸಾಚಾರ ಹೊಸದೇನಲ್ಲ. ಈ ಪ್ರದೇಶ ಯಾವಾಗಲೂ ಸೂಕ್ಷ್ಮಪ್ರದೇಶವಾಗಿದ್ದು ಈ ಬಾರಿಯೂ ಮತದಾನದ ದಿನವೇ ಕಲ್ಲು ತೂರಾಟ ನಡೆದಿರುವುದು ಭದ್ರತಾ ವ್ಯವಸ್ಥೆ ಬಗ್ಗೆ ಮತ್ತೊಮ್ಮೆ ಪ್ರಶ್ನೆ ಎಬ್ಬಿಸಿದೆ.
ಕಲ್ಲು ತೂರಾಟ ಹೇಗೆ ಆರಂಭವಾಯಿತು ಮತ್ತು ಇದರಲ್ಲಿ ಭಾಗಿಯಾದವರು ಯಾರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಚುನಾವಣಾ ಆಯೋಗ ಕೂಡ ಈ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಭದ್ರತಾ ಪಡೆಗಳಿಗೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದೆ. ಮತದಾನ ಶಾಂತಿಯುತವಾಗಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಪ್ರತಿಯೊಬ್ಬ ಮತದಾರರು ಯಾವುದೇ ಭಯವಿಲ್ಲದೆ ತಮ್ಮ ಹಕ್ಕು ಚಲಾಯಿಸಲು ಅವಕಾಶ ಮಾಡಿಕೊಡುವುದಾಗಿ ಆಯೋಗ ಹೇಳಿದೆ.
ಇದನ್ನೂ ಓದಿ: Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
West Bengal: Heavy stone pelting in Chandamari Village allegedly to disrupt voting. Further details awaited pic.twitter.com/apOHnKIxBD
— IANS (@ians_india) April 19, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.