![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, May 12, 2019, 12:34 PM IST
ಕೊಲ್ಕತ್ತಾ: ದೇಶದಲ್ಲಿ ಆರನೇ ಹಂತದ ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಪಶ್ಚಿಮ ಬಂಗಾಳದ ಘಟಾಲ್ ಎಂಬಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಭಾರತೀ ಘೋಷ್ ಅವರ ಕಾರಿನ ಮೇಲೆ ಸ್ಥಳೀಯರು ಕಲ್ಲೆಸೆದ ಘಟನೆ ವರದಿಯಾಗಿದೆ.
ಪಶ್ಚಿಮ ಬಂಗಾಳದ ಘಟಾಲ್ ಲೋಕಸಭಾ ಕ್ಷೇತ್ರದ ಡೊಗಾಚಿನ ಮತಗಟ್ಟೆಯಲ್ಲಿ ಈ ಘಟನೆ ನಡೆದಿದೆ. ಸ್ಥಳೀಯ ಬಿಜೆಪಿ ಅಭ್ಯರ್ಥಿಯಾಗಿರುವ ಭಾರತೀ ಘೋಷ್ ಡೊಗಾಚಿನ ಮತಗಟ್ಟೆಗೆ ಆಗಮಿಸಿದ ವೇಳೆಯಲ್ಲಿ ಸ್ಥಳಿಯರು ಭಾರತೀ ಘೋಷ್ ಅವರ ಕಾರಿನ ಮೇಲೆ ಕಲ್ಲೆಸೆತ ನಡೆಸಿದ್ದಾರೆ. ಘೋಷ್ ಖಾಸಗಿ ಭದ್ರತಾ ಸಿಬ್ಬಂದಿ ಕೂಡಲೇ ಲಾಠಿ ಚಾರ್ಜ್ ನಡೆಸಿದ್ದಾರೆ. ಘಟನೆಯಲ್ಲಿ ಘೋಷ್ ಅವರ ಕಾರು ನುಜ್ಜು ಗುಜ್ಜಾಗಿದೆ.
ಡೋಗಾಚಿನ ಮತಗಟ್ಟೆಯಲ್ಲಿ ಶಾಂತಿಯುತ ಮತದಾನ ನಡೆಯುತ್ತಿತ್ತು, ಆದರೆ ಭಾರತೀ ಘೋಷ್ ಅವರು ಮತದಾನ ಪ್ರಕ್ರಿಯೆಗೆ ಅಡ್ಡಿಪಡಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಆದರೆ ಘಟನೆಯ ಬಗ್ಗೆ ಮಾತನಾಡಿದ ಭಾರತೀ ಘೊಷ್, ಈ ಕೃತ್ಯ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಪಶ್ಚಿಮ ಬಂಗಾಳದ ಒಟ್ಟು 42 ಲೊಕಸಭಾ ಕ್ಷೇತ್ರಗಳ ಪೈಕಿ ಇಂದು ಎಂಟು ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ.
West Bengal: Vehicles in BJP Candidate from Ghatal, Bharti Ghosh’s convoy vandalized. BJP has alleged that TMC workers are behind the attack pic.twitter.com/xdsJNkKhV8
— ANI (@ANI) May 12, 2019
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.