Supreme Court: ಜೈಲುಗಳಲ್ಲಿ ಜಾತಿ ತಾರತಮ್ಯ ನಿಲ್ಲಿಸಿ

ಕರ್ನಾಟಕ ಸೇರಿ 11 ರಾಜ್ಯಗಳಿಗೆ ನ್ಯಾಯಪೀಠ ತಾಕೀತು; 3 ತಿಂಗಳಲ್ಲಿ ನಿಯಮ ಬದಲಿಸಿ ವರದಿ ನೀಡಿ: ಸೂಚನೆ

Team Udayavani, Oct 4, 2024, 6:35 AM IST

Supreme Court: ಜೈಲುಗಳಲ್ಲಿ ಜಾತಿ ತಾರತಮ್ಯ ನಿಲ್ಲಿಸಿ

ಹೊಸದಿಲ್ಲಿ: ಜೈಲುಗಳಲ್ಲಿ ಜಾತಿ ತಾರತಮ್ಯ ನಿಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಮತ್ತು ನ್ಯಾ| ಜೆ.ಬಿ. ಪರ್ದಿವಾಲಾ, ನ್ಯಾ| ಮನೋಜ್‌ ಮಿಶ್ರಾ ಅವರನ್ನೊಳ ಗೊಂಡ ನ್ಯಾಯಪೀಠ ಆದೇಶ ನೀಡಿದೆ.

11 ರಾಜ್ಯಗಳ ಜೈಲು ಕೈಪಿಡಿಯಲ್ಲಿ ಜಾತಿ ತಾರತಮ್ಯ ಮಾಡುವ ನಿಯಮ ಗಳಿರುವುದರ ಬಗ್ಗೆಯೂ ತರಾಟೆಗೆ ತೆಗೆದುಕೊಂಡಿದೆ.

ಜೈಲುಗಳಲ್ಲಿ ಕೆಲಸ ಹಂಚುವಾಗ, ಕೈದಿಗಳನ್ನು ವಿಂಗಡಿಸುವಾಗ ಜಾತಿಯನ್ನು ನೋಡಲಾಗುತ್ತಿದೆ ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ತೀರ್ಪು ನೀಡಿದ ಸುಪ್ರೀಂ ಕೋರ್ಟ್‌ ಇನ್ನು ಮೂರೇ ತಿಂಗಳಲ್ಲಿ ಸಂಬಂಧಪಟ್ಟ ರಾಜ್ಯಗಳು ತಮ್ಮ ಜೈಲುಗಳಲ್ಲಿನ ಕೈಪಿಡಿಯನ್ನು ಬದಲಿಸಿ, ನ್ಯಾಯಾಲಯಕ್ಕೆ ವರದಿ ನೀಡಬೇಕು ಎಂದು ಸೂಚಿಸಿದೆ.

ಯಾವುದೇ ರಾಜ್ಯಗಳ ಕೈಪಿಡಿಯಲ್ಲಿ ಇಂತಹ ಎಲ್ಲ ನಿಯಮಗಳು ಸಂವಿಧಾನಬಾಹಿರ. ಸದಾ ಅಪರಾಧ ಎಸಗುವವರನ್ನು ಅದೇ ರೀತಿಯ ಕಾನೂನಿನಡಿ ನಡೆಸಿಕೊಳ್ಳಬೇಕು. ಒಂದು ವೇಳೆ ಅಂತಹವರನ್ನು ಜಾತಿ ಆಧಾರಿತವಾಗಿ ನಡೆಸಿಕೊಂಡಿದ್ದರೆ ಅದು ಅಸಾಂವಿಧಾನಿಕ ಎಂದು ನ್ಯಾಯಪೀಠ ಹೇಳಿದೆ. ಮಾತ್ರವಲ್ಲ ಸರ್ವೋಚ್ಚ ಪೀಠ ಜೈಲುಗಳಲ್ಲಿ ಜಾತಿ ಆಧಾರಿತವಾಗಿ ನಡೆಯುತ್ತಿರುವ ಘಟನೆಗಳನ್ನು ಸ್ವಪ್ರೇರಿತವಾಗಿ ಗುರುತಿಸಲು ನಿರ್ಧರಿಸಿದೆ.

ಈ ಬಗ್ಗೆ ಒಂದು ನೋಂದಣಿ ಪುಸ್ತಕವನ್ನೇ ತೆರೆಯುವಂತೆ ಸೂಚಿಸಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಲ, ಮಧ್ಯಪ್ರದೇಶ, ಆಂಧ್ರಪ್ರದೇಶ, ಒಡಿಶಾ, ಕೇರಳ, ಮಹಾರಾಷ್ಟ್ರ, ಕರ್ನಾಟಕ ಮತ್ತು ಹಿಮಾಚಲ ಪ್ರದೇಶಗಳ ಜೈಲು ನಿಯಮಾವಳಿಗಳನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿದೆ. ಕೆಲವು ರಾಜ್ಯಗಳ ಬಂದೀಖಾನೆಗಳಲ್ಲಿ ಕಾರ್ಮಿಕರಿಗೆ ಅವರ ಗುರುತಿನ ಆಧಾರದಲ್ಲಿ ಪ್ರತ್ಯೇಕ ಬ್ಯಾರಕ್‌ಗಳಿವೆ. ವಸಾಹತುಶಾಹಿ ಕಾಲದ ಕಾನೂನುಗಳು, ಈಗಲೂ ಪರಿಣಾಮ ಬೀರುತ್ತಿವೆ. ಸಂವಿಧಾನದ ನಿಯಮಗಳು ಸಮಾನತೆಯನ್ನು ಎತ್ತಿಹಿಡಿಯಬೇಕು ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಹೇಳಿದ್ದಾರೆ.

ಯಾಕೆ ಈ ತೀರ್ಪು?
ಜೈಲುಗಳಲ್ಲಿ ಜಾತಿ ನೋಡಿ ಹಲವು ಕೆಲಸ ನೀಡಲಾಗುತ್ತದೆ. ಜತೆಗೆ ಜಾತಿಯ ಆಧಾರದಲ್ಲಿ ಕೊಠಡಿಗಳನ್ನು ನೀಡಲಾಗುತ್ತದೆ ಎಂದು ಆರೋಪಿಸಲಾಗಿತ್ತು. ಬಂಗಾಲದ ಜೈಲುಗಳಲ್ಲಿ ಅಡುಗೆ ಸೇರಿದಂತೆ ಆಯ್ದ ಕೆಲಸಗಳನ್ನು ಮೇಲು ಜಾತಿಯವರೇ ಮಾಡು ತ್ತಾರೆ ಎಂದು ಆರೋಪಿಸಲಾಗಿತ್ತು.

ಟಾಪ್ ನ್ಯೂಸ್

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.