ಸೋಂಕು ಸಂಖ್ಯೆ ಹೆಚ್ಚಾಳವಾದರೆ ಮತ್ತೆ ಕಠಿಣ ನಿಯಮಗಳು ಜಾರಿ: ಮಹಾರಾಷ್ಟ್ರ ಡಿಸಿಎಂ
Team Udayavani, Jan 1, 2022, 11:33 AM IST
ಮುಂಬೈ: ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಾ ಹೋದರೆ ರಾಜ್ಯದಲ್ಲಿ ಮತ್ತೆ ಬಿಗಿ ನಿಯಮಗಳನ್ನು ಜಾರಿ ಮಾಡಬೇಕಾಗುತ್ತದೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದಾರೆ. 10 ಸಚಿವರು, 20 ಶಾಸಕರು ಇದುವರೆಗೆ ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ 8,067 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾದ ಬಳಿಕ ಡಿಸಿಎಂ ಅಜಿತ್ ಪವಾರ್ ಅವರು ಈ ಎಚ್ಚರಿಕೆ ನೀಡಿದ್ದಾರೆ.
“ನಾವು ಇತ್ತೀಚೆಗೆ ವಿಧಾನಸಭೆ ಅಧಿವೇಶನವನ್ನು ಮೊಟಕುಗೊಳಿಸಿದ್ದೇವೆ. ಇಲ್ಲಿಯವರೆಗೆ 10 ಕ್ಕೂ ಹೆಚ್ಚು ಸಚಿವರು ಮತ್ತು 20 ಕ್ಕೂ ಹೆಚ್ಚು ಶಾಸಕರಿಗೆ ಕೋವಿಡ್ ಪಾಸಿಟಿವ್ ಆಗಿದೆ. ಪ್ರತಿಯೊಬ್ಬರೂ ಹೊಸ ವರ್ಷ, ಜನ್ಮದಿನಗಳು ಮತ್ತು ಇತರ ಸಂದರ್ಭಗಳ ಆಚರಣೆಗಳಲ್ಲಿ ಭಾಗವಾಗಲು ಬಯಸುತ್ತಾರೆ. ಹೊಸ ರೂಪಾಂತರ ಒಮಿಕ್ರಾನ್ ವೇಗವಾಗಿ ಹರಡುತ್ತಿದೆ ಎಂದು ನೆನಪಿನಲ್ಲಿಡಿ. ಆದ್ದರಿಂದ ಎಚ್ಚರಿಕೆಯ ಅಗತ್ಯವಿದೆ. ಪ್ರಧಾನಿ ನರೇಂದ್ರ ಮೋದಿ ಅವರೂ ಮನವಿ ಮಾಡಿದ್ದಾರೆ. ಕೆಲವು ರಾಜ್ಯಗಳು ರಾತ್ರಿ ಕರ್ಫ್ಯೂ ಘೋಷಿಸಿವೆ. ಮಹಾರಾಷ್ಟ್ರದಲ್ಲಿ, ಮುಂಬೈ ಮತ್ತು ಪುಣೆಯಲ್ಲಿ ಪ್ರಕರಣಗಳು ಹೆಚ್ಚುತ್ತಿವೆ” ಎಂದು ಅವರು ಪೆರ್ನೆ ಗ್ರಾಮದ ಜಯಸ್ತಂಭ್ ಮಿಲಿಟರಿ ಸ್ಮಾರಕಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರಿಗೆ ತಿಳಿಸಿದರು.
ಇದನ್ನೂ ಓದಿ:ಭ್ರಷ್ಟಾಚಾರ, ಭಯೋತ್ಪಾದನೆ, ಜಾತಿವಾದಕ್ಕೆ ಕಾಂಗ್ರೆಸ್ ಮೂಲ: ಯೋಗಿ ಆದಿತ್ಯನಾಥ್
ಹೆಚ್ಚಿನ ನಿರ್ಬಂಧಗಳನ್ನು ವಿಧಿಸುವ ಸಾಧ್ಯತೆಯ ಕುರಿತು ಮಾತನಾಡಿದ ಪವಾರ್, ಹೆಚ್ಚುತ್ತಿರುವ ರೋಗಿಗಳ ಸಂಖ್ಯೆಯ ಮೇಲೆ ರಾಜ್ಯ ಸರ್ಕಾರವು ನಿಗಾ ಇರಿಸುತ್ತಿದೆ ಎಂದು ಹೇಳಿದರು. “ರೋಗಿಗಳ ಸಂಖ್ಯೆ ಹೆಚ್ಚುತ್ತಲೇ ಇದ್ದರೆ ಕಟ್ಟುನಿಟ್ಟಾದ ನಿರ್ಬಂಧಗಳು ಮಾಡಬೇಕಾಗುತ್ತದೆ. ಕಟ್ಟುನಿಟ್ಟಾದ ನಿರ್ಬಂಧವನ್ನು ತಪ್ಪಿಸಲು ಪ್ರತಿಯೊಬ್ಬರೂ ನಿಯಮಗಳನ್ನು ಅನುಸರಿಸಬೇಕು” ಎಂದು ಡಿಸಿಎಂ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.