ಸ್ವಚ್ಛ ಶಾಲೆ ಪುರಸ್ಕಾರಕ್ಕೆ ಇನ್ನು ಖಾಸಗಿ ಶಾಲೆಗಳ ಪರಿಗಣನೆ
Team Udayavani, Sep 2, 2017, 7:55 AM IST
ಹೊಸದಿಲ್ಲಿ: ರಾಷ್ಟ್ರ ಮಟ್ಟದ “ಸ್ವಚ್ಛ ವಿದ್ಯಾಲಯ ಪುರಸ್ಕಾರ’ ಸ್ಪರ್ಧೆಗೆ ಮುಂದಿನ ಶೈಕ್ಷಣಿಕ ವರ್ಷದಿಂದ ದೇಶದ ಖಾಸಗಿ ಶಾಲೆಗಳನ್ನೂ ಪರಿಗಣಿಸಲು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ನಿರ್ಧರಿಸಿದೆ.
ಈವರೆಗೂ ಕೇವಲ ಸರಕಾರಿ ಶಾಲೆಗಳಿಗೆ ಈ ಪ್ರಶಸ್ತಿ ಕೊಡಲಾಗುತ್ತಿತ್ತು. ಇನ್ನು ಮುಂದೆ ಕೇಂದ್ರ ಮತ್ತು ರಾಜ್ಯ ಸರಕಾರದ ಅಡಿ ಬರುವ ಶಾಲೆಗಳನ್ನೂ ಈ ಪ್ರಶಸ್ತಿಗಾಗಿ ಪರಿಗಣಿಸಲಾಗುತ್ತದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಪ್ರಸಕ್ತ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹೇಳಿದ್ದಾರೆ.
ಅಲ್ಲದೇ, “ಸ್ವಚ್ಛ ವಿದ್ಯಾಲಯ ಪುರಸ್ಕಾರ’ ಸ್ಪರ್ಧೆಯನ್ನು ದೇಶದ ಪ್ರತಿ ಮೂಲೆಯ ಶಾಲೆಗಳಿಗೂ ತಲುಪಿಸಲು ಮತ್ತು ಮಕ್ಕಳನ್ನು ಸ್ವಚ್ಛತಾ ಅಭಿಯಾನ ರಾಯಭಾರಿಗಳನ್ನಾಗಿ ಮಾಡುವ ನಿಟ್ಟಿನಲ್ಲಿ ಯುನಿಸೆಫ್ನ ಸಹಭಾಗಿತ್ವ ಪಡೆಯಲಾಗಿದೆ ಎಂದಿದ್ದಾರೆ. ಸ್ಪರ್ಧೆಯಲ್ಲಿ ಜಯಶಾಲಿಯಾಗುವ ಶಾಲೆಗಳಿಗೆ 50,000 ರೂ. ಬಹುಮಾನ ನೀಡಲಾಗುತ್ತದೆ. ಅದನ್ನು ಅವರು ಶಾಲೆಯ ಸ್ವಚ್ಛತಾ ಚಟುವಟಿಕೆಗೆ ಬಳಸಿಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.