Varanasi: ಮಸೀದಿ ತೆರವುಗೊಳಿಸುವಂತೆ ವಿದ್ಯಾರ್ಥಿಗಳಿಂದ ಪ್ರತಿಭಟನೆ, ಉದ್ವಿಗ್ನ ಸ್ಥಿತಿ
Team Udayavani, Dec 7, 2024, 3:02 PM IST
ವಾರಣಾಸಿ: ಇಲ್ಲಿನ ಉದಯ್ ಪ್ರತಾಪ್ ಕಾಲೇಜಿನ ಆವರಣದಲ್ಲಿರುವ ಮಸೀದಿಯನ್ನು ತೆರವುಗೊಳಿಸುವಂತೆ ವಿದ್ಯಾರ್ಥಿಗಳ ದೊಡ್ಡ ಗುಂಪೊಂದು ಕಾಲೇಜು ಆವರಣದಲ್ಲಿ ಪ್ರತಿಭಟನೆಗೆ ಮುಂದಾಗಿದ್ದು ಇದೀಗ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನೇಮಿಸಲಾಗಿದೆ.
ಕಾಲೇಜಿನ ಹೊರ ಭಾಗದಲ್ಲಿ ನೂರಾರು ವಿದ್ಯಾರ್ಥಿಗಳ ಗುಂಪು ಸೇರಿದ್ದು ಜೈ ಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುತ್ತಾ ಕಾಲೇಜು ಆವರಣ ಪ್ರವೇಶಿಸಲು ಮುಂದಾದಾಗ ಪೊಲೀಸರು ವಿದ್ಯಾರ್ಥಿಗಳನ್ನು ತಡೆದಿದ್ದಾರೆ ಅಲ್ಲದೆ ಪೊಲೀಸರು ವಿದ್ಯಾರ್ಥಿಗಳ ನಡುವೆ ನೂಕುನುಗ್ಗಲು ನಡೆದಿದ್ದು ಕೆಲ ಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣಗೊಂಡಿತ್ತು ಈ ವೇಳೆ ಮಾತನಾಡಿದ ವಿದ್ಯಾರ್ಥಿ ಮುಖಂಡ ವಿವೇಕಾನಂದ ಸಿಂಗ್ ‘ಮಸೀದಿ ನಿರ್ಮಿಸಿರುವ ಜಾಗ ವಕ್ಫ್ ಗೆ ಸೇರದಿದ್ದರೆ ಅದನ್ನು ಕಾಲೇಜು ಆವರಣದಿಂದ ಹೊರಕ್ಕೆ ಹಾಕುವಂತೆ ಆಗ್ರಹಿಸಿದರು.
ನಮಾಜ್ ಗೆ ಪ್ರತಿಯಾಗಿ ಹನುಮಾನ್ ಚಾಲೀಸಾ:
ಪ್ರತಿಭಟನೆ ವೇಳೆ ಮಾತನಾಡಿದ ವಿವೇಕಾನಂದ ಸಿಂಗ್ ಒಂದು ವೇಳೆ ಮಸೀದಿಯಲ್ಲಿ ನಮಾಜ್ ಮುಂದುವರಿದರೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಾದ ನಾವು ಹನುಮಾನ್ ಚಾಲೀಸಾ ಪಠಿಸುತ್ತೇವೆ ಎಂದು ಹೇಳಿದ್ದಾರೆ.
In #UttarPradesh‘s #Varanasi, Hindu students protested outside #UdayPratapCollege against Friday prayers, raised slogans of ‘#JaiShriRam,’ and called for the demolition of the dargah and mosque. pic.twitter.com/4rLUMbrHvu
— Hate Detector 🔍 (@HateDetectors) December 6, 2024
ಪೊಲೀಸ್ ಬಿಗಿ ಭದ್ರತೆ:
ಸ್ಥಳದಲ್ಲಿ ಪರಿಸ್ಥಿತಿ ಉಲ್ಬಣಗೊಳ್ಳುತ್ತಿದ್ದಂತೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು ಜೊತೆಗೆ ಕಾಲೇಜು ಆವರಣಕ್ಕೆ ಹೊರಗಿನವರ ಪ್ರವೇಶವನ್ನು ನಿಷೇಧಿಸಲಾಗಿದ್ದು ವಿದ್ಯಾರ್ಥಿಗಳು ಕಾಲೇಜು ಆವರಣ ಪ್ರವೇಶಿಸಬೇಕಾದರೆ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ ಎಂದು ಎಸಿಪಿ ವಿದುಷ್ ಸಕ್ಸೇನಾ ಹೇಳಿದ್ದಾರೆ.
ಮಸೀದಿ ಸಮಿತಿಯ ಹೇಳೋದೇನು
ಮಸೀದಿಯ ಸ್ಥಿತಿ ಏನಾಗಿದೆ ಎಂಬುದನ್ನು ತಿಳಿಸುವಂತೆ ಈ ಹಿಂದೆ ಉತ್ತರ ಪ್ರದೇಶ ವಕ್ಫ್ ಮಂಡಳಿಗೆ ಪತ್ರ ಬರೆದಿರುವುದಾಗಿ ಮಸೀದಿ ಸಮಿತಿಯ ಕಾರ್ಯದರ್ಶಿ ಮೊಹಮ್ಮದ್ ಯಾಸಿನ್ ಹೇಳಿದ್ದಾರೆ. “ಮಸೀದಿಯನ್ನು ವಕ್ಫ್ ಆಸ್ತಿ ಎಂದು ಘೋಷಿಸುವ 2018 ರ ನೋಟಿಸ್ ಅನ್ನು ಜನವರಿ 18, 2021 ರಂದು ರದ್ದುಗೊಳಿಸಲಾಗಿದೆ ಎಂದು ಉತ್ತರ ಪ್ರದೇಶ ವಕ್ಫ್ ಮಂಡಳಿ ತಿಳಿಸಿದೆ. ಈಗ ನಡೆಯುತ್ತಿರುವ ವಿವಾದಕ್ಕೆ ಯಾವುದೇ ಕಾರಣವಿಲ್ಲ” ಎಂದು ಯಾಸಿನ್ ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
MUST WATCH
ಹೊಸ ಸೇರ್ಪಡೆ
Bidar: ಬಂದ್ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.