ಪೊಲೀಸರು ಪ್ರೇಮಲತಾ ವಿಚಾರಣೆ ನಡೆಸಲಿ: ಡಾ| ಸ್ವಾಮಿ
Team Udayavani, Sep 19, 2017, 10:10 AM IST
ಹೊಸದಿಲ್ಲಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಲ್ಲಿ ಹೊಸನಗರದ ಶ್ರೀರಾಮಚಂದ್ರಾಪುರ ಮಠಾಧೀಶ ರಾಘವೇಶ್ವರ ಸ್ವಾಮೀಜಿ ಕೈವಾಡ ಇದೆ ಎಂಬ ಹಿನ್ನೆಲೆ ಗಾಯಕಿ ಪ್ರೇಮಲತಾ ದಿವಾಕರ್ ಆರೋಪ ಮಾಡಿದ್ದಕ್ಕೆ ಕೇಂದ್ರದ ಮಾಜಿ ಸಚಿವ ಡಾ| ಸುಬ್ರಮಣಿಯನ್ ಸ್ವಾಮಿ ಆಕ್ಷೇಪಿಸಿದ್ದಾರೆ. ಇಂಥ ಗುರುತರ ಆರೋಪ ಇದ್ದಿದ್ದರೆ ಮೊದಲ ದಿನವೇ ಎಸ್‌ಐಟಿಗೆ ಮಾಹಿತಿ ನೀಡಬಹುದಾಗಿತ್ತು. ಇದೀಗ ವಿಳಂಬವಾಗಿ ಆರೋಪ ಮಾಡಿದ್ದರ ಹಿಂದೆ ಏನಿದೆ ಎಂದು ಪ್ರಶ್ನಿಸಿದ್ದಾರೆ. ಅದೇನಿದ್ದರೂ ಪೊಲೀಸರು ಅವರನ್ನು ವಿಚಾರಣೆ ನಡೆಸಬೇಕು. ಆ ಮೂಲಕ ಸತ್ಯಾಂಶ ತಿಳಿದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಹೊಸದಿಲ್ಲಿಯಲ್ಲಿ ‘ಟೈಮ್ಸ್ ನೌ’ ಜತೆಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಹಿಂದೂ ಧಾರ್ಮಿಕ ನಾಯಕರ ವಿರುದ್ಧ ಆಧಾರ ರಹಿತವಾದಂಥ ಆರೋಪ ಮಾಡಲಾಗುತ್ತಿದೆ. ಅದರಲ್ಲಿ ಅಂತಾರಾಷ್ಟ್ರೀಯ ಸಂಚೂ ಇದೆ ಎಂದು ಡಾ.ಸ್ವಾಮಿ ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.