Women’s Day; ರಾಜ್ಯಸಭೆಗೆ ಸುಧಾಮೂರ್ತಿ ನಾಮನಿರ್ದೇಶನ: ನಾರೀ ಶಕ್ತಿ ಎಂದ ಪ್ರಧಾನಿ ಮೋದಿ
Team Udayavani, Mar 8, 2024, 2:02 PM IST
ಹೊಸದಿಲ್ಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇನ್ಫೋಸಿಸ್ ಫೌಂಡೇಶನ್ ನ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿ ಆದೇಶಿಸಿದ್ದಾರೆ. ಅಂತಾರಾಷ್ಟ್ರೀಯ ಮಹಿಳಾ ದಿನದಂದು ಘೋಷಣೆ ಬಂದಿರುವುದು ವಿಶೇಷ.
ಸುಧಾಮೂರ್ತಿ ಅವರನ್ನು ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ದೇಶದ ‘ನಾರಿ ಶಕ್ತಿ’ಗೆ ಪ್ರಬಲವಾದ ಸಾಕ್ಷಿಯಾಗಿದೆ ಎಂದು ಹೇಳಿದರು.
“ಭಾರತದ ರಾಷ್ಟ್ರಪತಿಗಳು ಶ್ರೀಮತಿ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಸಂತೋಷ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾಜೀ ಅವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮಗೆ ಪ್ರಬಲವಾದ ಸಾಕ್ಷಿಯಾಗಿದೆ. ‘ನಾರಿ ಶಕ್ತಿ’, ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯವನ್ನು ಉದಾಹರಿಸುತ್ತದೆ. ಅವರ ಸಂಸದೀಯ ಅವಧಿ ಫಲಪ್ರದವಾಗಲಿ ಎಂದು ಹಾರೈಸುತ್ತೇನೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
I am delighted that the President of India has nominated @SmtSudhaMurty Ji to the Rajya Sabha. Sudha Ji’s contributions to diverse fields including social work, philanthropy and education have been immense and inspiring. Her presence in the Rajya Sabha is a powerful testament to… pic.twitter.com/lL2b0nVZ8F
— Narendra Modi (@narendramodi) March 8, 2024
ಕಲೆ, ಸಾಹಿತ್ಯ, ವಿಜ್ಞಾನ ಮತ್ತು ಸಾಮಾಜಿಕ ಸೇವೆಗಳಿಗೆ ನೀಡಿದ ಕೊಡುಗೆಗಳಿಗಾಗಿ ಭಾರತದ ರಾಷ್ಟ್ರಪತಿಗಳು ಸಂಸತ್ತಿನ ಮೇಲ್ಮನೆಗೆ 12 ಸದಸ್ಯರನ್ನು ನಾಮನಿರ್ದೇಶನ ಮಾಡುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
MUST WATCH
ಹೊಸ ಸೇರ್ಪಡೆ
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.