ಪಾಲಿಕೆ ಚುನಾವಣೆಯಿಂದಾಗಿ ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಳ – ಸುದೀನ್ ಧವಳೀಕರ್
Team Udayavani, May 8, 2021, 7:56 PM IST
ಪಣಜಿ: ಗೋವಾದಲ್ಲಿ ಕಳೆದ ಕೆಲ ದಿನಗಳ ಹಿಂದೆ ನಡೆದ ಪಾಲಿಕೆ ಚುನಾವಣೆಯಿಂದಾಗಿ ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಾಗಿ ಹರಡುವಂತಾಗಿದೆ. ಕೋವಿಡ್ 3ನೇ ಅಲೆಯ ಭೀಕರತೆಯಿಂದ ತಪ್ಪಿಸಿಕೊಳ್ಳಲು ಮುಂಬರುವ 2 ವರ್ಷಗಳ ಕಾಲ ರಾಜ್ಯದಲ್ಲಿ ಯಾವುದೇ ಚುನಾವಣೆ ನಡೆಸಬಾರದು ಎಂದು ಮಹಾರಾಷ್ಟ್ರವಾಧಿ ಗೋಮಂತಕ ಪಕ್ಷದ ಪ್ರಮುಖ ಸುದೀನ್ ಧವಳೀಕರ್ ಅಭಿಪ್ರಾಯಪಟ್ಟಿದ್ದಾರೆ.
ಪೊಂಡಾದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿನ ಕೋವಿಡ್ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಹರಡಲು ರಾಜ್ಯ ಸರ್ಕಾರವೇ ಹೊಣೆಯಾಗಿದೆ. ಕರೋನಾ ಸೋಂಕು ನಿಯಂತ್ರಿಸಲು ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದರಿಂದಾಗಿ ರಾಜ್ಯದ ಜನತೆ ತಮ್ಮ ಜೀವವನ್ನು ಉಳಿಸಿಕೊಳ್ಳಲು ತಾವೇ ಮುನ್ನೆಚ್ಚರಿಕೆ ತೆಗೆದುಕೊಳ್ಳುವುದು ಅಗತ್ಯವಾಗಿದೆ. ಆಕ್ಸಿಜನ್ ಪೂರೈಕೆಯ ಅಭಾವದಿಂದಾಗಿ ಕರೋನಾ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ. ಇಷ್ಟೇ ಅಲ್ಲದೆಯೇ ಒಂದೇ ಸಿಲಿಂಡರ್‍ನಿಂದ ಹಲವರಿಗೆ ಆಕ್ಸಿಜನ್ ಪೂರೈಕೆ ಮಾಡುವುದರಿಂದ ಆಕ್ಸಿಜನ್ ಕೊರತೆಯಿಂದಾಗಿ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ ಎಂದು ಧವಳೀಕರ್ ಅಭಿಪ್ರಾಯಪಟ್ಟರು.
ಹೊರ ರಾಜ್ಯಗಳಿಂದ ಗೋವಾಕ್ಕೆ ಆಗತ್ಯ ವಸ್ತು ಪೂರೈಕೆ ಮಾಡುವ ವಾಹನ ಚಾಕರಿಗೂ ಕೋವಿಡ್ ತಪಾಸಣೆ ನಡೆಸಬೇಕು. ರಾಜ್ಯದಲ್ಲಿ ಸೂಕ್ತ ಸಮಯದಲ್ಲಿ ಲಾಕ್‍ಡೌನ್ ಮಾಡಲಿಲ್ಲ ಇದರಿಂದಾಗಿ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಹರಡುವಂತಾಗಿದೆ ಎಂದು ಸುದೀನ್ ಧವಳಿಕರ್ ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.