ಸುಕ್ಮಾ ಸಿಆರ್ಪಿಎಫ್ ಯೋಧರ ಹತ್ಯೆ: 4 ನಕ್ಸಲ್ ಉಗ್ರರ ಸೆರೆ
Team Udayavani, May 4, 2017, 12:05 PM IST
ಹೊಸದಿಲ್ಲಿ : ಕಳೆದ ತಿಂಗಳಲ್ಲಿ ಛತ್ತೀಸ್ಗಢದ ಸುಕ್ಮಾದಲ್ಲಿ 25 ಸಿಆರ್ಪಿಎಫ್ ಯೋಧರನ್ನು ನಕ್ಸಲರು ಹತ್ಯೆಗೈದ ಘಟನೆಗೆ ಸಂಬಂಧಿಸಿ ಪೊಲೀಸರು ಎಡ-ಉಗ್ರವಾದದ ವಿರುದ್ಧ ನಡೆಸಿರುವ ಬೃಹತ್ ಕಾರ್ಯಾಚರಣೆಯಲ್ಲಿ ನಾಲ್ವರು ಮಾವೋ ಉಗ್ರರನ್ನು ಬಂಧಿಸಲಾಗಿದೆ ಎಂದು ಟೈಮ್ಸ್ ನೌ ವರದಿ ತಿಳಿಸಿದೆ.
ಕಳೆದ ಮಾರ್ಚ್ 11ರಂದು ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲೇ ನಕ್ಸಲರು 12 ಮಂದಿ ಅರೆಸೈನಿಕ ದಳದ ಸಿಬಂದಿಗಳನ್ನು ಹತ್ಯೆಗೈದಿದ್ದರು.
ಆ ಬಳಿಕ ನಕ್ಸಲ್ ಉಗ್ರರು ಅದೇ ತಾಣದಲ್ಲಿ 25 ಮಂದಿ ಸಿಆರ್ಪಿಎಫ್ ಯೋಧರನ್ನು ಹತ್ಯೆಗೈದಿದ್ದರು. ಆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ನಕ್ಸಲ್ ಪಿಡುಗನ್ನು ನಿರ್ವಹಿಸುವ ನೀತಿಯನ್ನು ಪರಿಷ್ಕರಿಸಲಾಗುವುದು ಎಂದು ಹೇಳಿದ್ದರು.
ನಕ್ಸಲ್ ನಿಗ್ರಹದ ನಿರ್ಣಾಯಕ ಸಭೆಯಲ್ಲಿ ಛತ್ತೀಸ್ಗಢ, ಜಾರ್ಖಂಡ್, ಒಡಿಶಾ, ಪಶ್ಚಿಮ ಬಂಗಾಲ, ಬಿಹಾರ, ಮಹಾರಾಷ್ಟ್ರ, ತೆಲಂಗಾಣ, ಉತ್ತರ ಪ್ರದೇಶ, ಮಧ್ಯ ಪ್ರದೇಶ ಮತ್ತು ಆಂಧ್ರ ಪ್ರದೇಶದ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ ಎಂದು ಗೃಹ ಸಚಿವಾಲಯದ ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.