ಪಶ್ಚಿಮಬಂಗಾಳ ವಿಧಾನಸಭೆ ಡೆಪ್ಯುಟಿ ಸ್ಪೀಕರ್ ಸುಕುಮಾರ್ ವಿಧಿವಶ
ಡೆಪ್ಯುಟಿ ಸ್ಪೀಕರ್ ಸುಕುಮಾರ್ ಅವರ ನಿಧನದ ವಾರ್ತೆಯನ್ನು ಪಶ್ಚಿಮಬಂಗಾಳ ಸರ್ಕಾರ ಖಚಿತಪಡಿಸಿದೆ.
Team Udayavani, Oct 29, 2020, 1:12 PM IST
ಕೋಲ್ಕತಾ:ಪಶ್ಚಿಮಬಂಗಾಳ ವಿಧಾನಸಭೆಯ ಉಪ ಸಭಾಪತಿ ಮತ್ತು ಜಾರ್ಗಾಮ್ ವಿಧಾನಸಭಾ ಕ್ಷೇತ್ರದ ತೃಣಮೂಲ ಕಾಂಗ್ರೆಸ್ ಶಾಸಕ ಸುಕುಮಾರ್ ಹನ್ಸಡಾ ಗುರುವಾರ ಬೆಳಗ್ಗೆ ನಿಧನರಾಗಿರುವುದಾಗಿ ವರದಿ ತಿಳಿಸಿದೆ.
ಸಾವಿಗೆ ನಿಖರವಾದ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ. ಆದರೆ ಡೆಪ್ಯುಟಿ ಸ್ಪೀಕರ್ ಸುಕುಮಾರ್ ಅವರ ನಿಧನದ ವಾರ್ತೆಯನ್ನು ಪಶ್ಚಿಮಬಂಗಾಳ ಸರ್ಕಾರ ಖಚಿತಪಡಿಸಿದೆ.
ಹನ್ಸಡಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೋವಿಡ್ 19 ಸೋಂಕು ದೃಢಪಟ್ಟಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವರದಿ ಹೇಳಿದೆ. ವಯೋ ಸಂಬಂಧಿ ಕಾಯಿಲೆಯಿಂದ ಡೆಪ್ಯುಟಿ ಸ್ಪೀಕರ್ ಆಗಿದ್ದ ಹೈದರ್ ಅಜೀಜ್ ಅವರು ನಿಧನರಾದ ನಂತರ 2018ರ ಡಿಸೆಂಬರ್ ನಲ್ಲಿ ಹನ್ಸಡಾ ಅವರು ಡೆಪ್ಯುಟಿ ಸ್ಪೀಕರ್ ಆಗಿ ನೇಮಕ ಮಾಡಲಾಗಿತ್ತು.
ಹನ್ಸಡಾ ಅವರು ವೃತ್ತಿಯಲ್ಲಿ ವೈದ್ಯರಾಗಿದ್ದರು. 2011 ಮತ್ತು 2016ರ ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಆದರೆ ಎರಡನೇ ಅವಧಿಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಹನ್ಸಡಾ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡಿರಲಿಲ್ಲವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.