ಪವಾಡ; ಬೆನ್ನಿಗೆ ಉಗ್ರರ ಗುಂಡು ಹೊಕ್ಕರೂ ಹೆಣ್ಣು ಮಗುವಿಗೆ ಜನ್ಮ!
Team Udayavani, Feb 11, 2018, 10:37 AM IST
ಸಂಜ್ವಾನ್: ಜಮ್ಮು ಕಾಶ್ಮೀರದ ಹೊರವಲಯದ ಸಂಜ್ವಾನ್‌ನಲ್ಲಿರುವ ಸೇನಾ ಸಿಬ್ಬಂದಿ ವಸತಿ ನಿಲಯದ ಮೇಲೆ ಶನಿವಾರ ಜೈಶ್ ಎ ಮೊಹಮ್ಮದ್ ಉಗ್ರರು ನಡೆಸಿದ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತುಂಬು ಗರ್ಭಿಣಿಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಬೆನ್ನಿನ ಕೆಳ ಭಾಗಕ್ಕೆ ಗುಂಡು ಹೊಕ್ಕಿ ವಪಾಡ ಸದೃಶವಾಗಿ ಪಾರಾಗಿದ್ದ 35 ವಾರಗಳ ತುಂಬು ಗರ್ಭಿಣಿಯನ್ನು ದಾಳಿ ನಡೆದ ಕೂಡಲೆ ಸೇನಾ ಪಡೆಗಳು ಹೆಲಿಕ್ಯಾಪ್ಟರ್ ಬಳಸಿ ಸೇನಾ ಆಸ್ಪತ್ರೆಗೆ ದಾಖಲಿಸಿದ್ದರು. ಶಸ್ತ್ರ ಚಿಕಿತ್ಸೆ ನಡೆಸಿ ಮಗುವನ್ನು ಹೊರತೆಗೆಯಲಾಗಿದ್ದು, ಹೆಣ್ಣು ಮಗು 2.5 ಕೆ.ಜಿ ತೂಕವಿದ್ದು ಆರೋಗ್ಯವಾಗಿದೆ ಎಂದು ವರದಿಯಾಗಿದೆ. ತಾಯಿಯೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.
ಕ್ಯಾಂಪ್‌ನಲ್ಲಿ ಇನ್ನೂ ಕೆಲ ಉಗ್ರರು ಅಡಗಿರುವ ಸಾಧ್ಯತೆ ಹಿನ್ನಲೆಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ.
ಐವರು ಯೋಧರು ಹುತಾತ್ಮ
ಉಗ್ರರ ದಾಳಿಯಲ್ಲಿ ಸೇರಿ 5 ಯೋಧರು ಇಬ್ಬರು ಜ್ಯೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಹುತಾತ್ಮರಾಗಿದ್ದು, ಇತರ 9 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಸೇನಾ ಮೇಜರ್ ಹಾಗೂ ಸೇನಾ ಸಿಬ್ಬಂದಿ ಪುತ್ರಿಯೂ ಸೇರಿದ್ದಾರೆ. ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
MUST WATCH
ಹೊಸ ಸೇರ್ಪಡೆ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.