ಅಯ್ಯಪ್ಪ ಭಕ್ತರಿಗೆ ಬೆಂಬಲ: ಶಾ
Team Udayavani, Oct 28, 2018, 6:00 AM IST
ಕಣ್ಣೂರು: ಶಬರಿಮಲೆ ದೇಗುಲದೊಳಗೆ ಮಹಿಳೆಯರ ಪ್ರವೇಶ ನೀಡಬಾರದು ಎಂದು ಹೋರಾಟ ಮಾಡಿದವರ ಪರವಾಗಿ ನಾವಿದ್ದೇವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಘೋಷಿಸಿದ್ದಾರೆ. ಕೇರಳದಲ್ಲಿರುವ ಎಡಪಕ್ಷಗಳ ಸರ್ಕಾರವು ಅಯ್ಯಪ್ಪ ಭಕ್ತರನ್ನು ಬಲ ಪ್ರಯೋಗದ ಮೂಲಕ ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಆದರೆ ಬಿಜೆಪಿ ಮಾತ್ರ ಇವರೊಂದಿಗೆ ಹೆಬ್ಬಂಡೆಯಂತೆ ನಿಂತಿದೆ ಎಂದು ಅವರು ಹೇಳಿದ್ದಾರೆ. ಕಣ್ಣೂರಿನಲ್ಲಿ ಜಿಲ್ಲಾ ಬಿಜೆಪಿ ಕಚೇರಿ ಉದ್ಘಾಟಿಸಿ ಮಾತನಾಡಿದ ಅಮಿತ್ ಶಾ, ಆರೆಸ್ಸೆಸ್ ಹಾಗೂ ಬಿಜೆಪಿ ಕಾರ್ಯಕರ್ತರೂ ಸೇರಿದಂತೆ 2000 ಕ್ಕೂ ಹೆಚ್ಚು ಭಕ್ತರನ್ನು ಸರ್ಕಾರ ಬಂಧಿಸಿದೆ ಎಂದು ಆರೋಪಿಸಿದ್ದಾರೆ.
“ಸ್ವಾಮಿಯೇ ಶರಣ ಅಯ್ಯಪ್ಪ’ ಎನ್ನುತ್ತ ಭಾಷಣ ಆರಂಭಿಸಿದ ಶಾ, ಪ್ರತಿಭಟನಾಕಾರರನ್ನು ಹತ್ತಿಕ್ಕುವುದನ್ನು ಮುಂದುವರಿಸಿದರೆ ಪಿಣರಾಯಿ ವಿಜಯನ್ ಸರ್ಕಾರ ಭಾರೀ ಬೆಲೆ ತೆರಬೇಕಾಗುತ್ತದೆ. ಸರ್ಕಾರ ಅಗ್ನಿಯೊಂದಿಗೆ ಸರಸವಾಡುತ್ತಿದೆ. ಕೋರ್ಟ್ ಆದೇಶವನ್ನು ಅನುಸರಿಸುವ ಹೆಸರಿನಲ್ಲಿ ನಡೆಸುತ್ತಿರುವ ದೌರ್ಜನ್ಯವನ್ನು ಮುಖ್ಯಮಂತ್ರಿ ನಿಲ್ಲಿಸಬೇಕು ಎಂದು ಅವರು ಕಿಡಿಕಾರಿದ್ದಾರೆ. ಅಲ್ಲದೆ, ದೇವಾಲಯಗಳ ವಿರುದ್ಧ ಕಮ್ಯೂನಿಸ್ಟರು ದಾಳಿ ನಡೆಸುತ್ತಿದ್ದು, ಇದು ವ್ಯವಸ್ಥಿತ ಸಂಚು ಎಂದೂ ಶಾ ಆರೋಪಿಸಿದ್ದಾರೆ.
ವಿಜಯನ್ ಟೀಕೆ:
ಶಾ ಮಾತಿಗೆ ತಿರುಗೇಟು ನೀಡಿರುವ ಸಿಎಂ ಪಿಣರಾಯಿ ವಿಜಯನ್, ಅಮಿತ್ ಶಾ ಅವರ ಹೇಳಿಕೆಯ ಮೂಲಕ ಬಿಜೆಪಿಯ ಅಜೆಂಡಾ ಬಹಿರಂಗವಾಗಿದೆ. ಸುಪ್ರೀಂಕೋರ್ಟ್ ತೀರ್ಪನ್ನೇ ಶಾ ವಿರೋಧಿಸುತ್ತಿದ್ದಾರೆ. ಅವರ ಹೇಳಿಕೆ ಸಂವಿಧಾನ ಹಾಗೂ ಕಾನೂನಿಗೆ ವಿರುದ್ಧವಾಗಿದೆ. ಮೂಲಭೂತ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ಇದು ಎಂದು ವಿಜಯನ್ ಟೀಕಿಸಿದ್ದಾರೆ.
ನಾರಾಯಣ ಗುರು ಆಶ್ರಮಕ್ಕೆ ಭೇಟಿ: ನೂತನವಾಗಿ ನಿರ್ಮಿಸಲಾಗಿರುವ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಥಮ ಪ್ರಯಾಣಿಕರಾದ ಶಾ ಅವರು ಅನಂತರ ಅವರು ತಿರುವನಂತಪುರ ಬಳಿಯ ವರ್ಕಲದಲ್ಲಿ ಶ್ರೀ ನಾರಾಯಣ ಗುರು ಮಹಾಸಮಾಧಿಗೈದ 90ನೇ ವರ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.