ಶಬರಿಮಲೆ ತೀರ್ಪು: ಮರುಪರಿಶೀಲನೆಗೆ ಸು.ಕೋರ್ಟ್ ಒಪ್ಪಿಗೆ
Team Udayavani, Nov 14, 2018, 4:45 AM IST
ಹೊಸದಿಲ್ಲಿ/ತಿರುವನಂತಪುರ: ಹಿಂದೂಗಳ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಎಲ್ಲ ವಯಸ್ಸಿನ ಮಹಿಳೆಯರಿಗೂ ಪ್ರವೇಶಕ್ಕೆ ಅನುಮತಿ ಸಂಬಂಧ ಸೆ.28ರಂದು ತಾನೇ ನೀಡಿದ್ದ ತೀರ್ಪಿನ ಮರುಪರಿಶೀಲನೆ ಮಾಡಲು ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ. ಜ.22ರಂದು ‘ಮುಕ್ತ ನ್ಯಾಯಾಲಯ’ದಲ್ಲೇ ವಿಚಾರಣೆ ನಡೆಸುವುದಾಗಿ ಸಿಜೆಐ ರಂಜನ್ ಗೊಗೊಯ್ ನೇತೃತ್ವದ ಪಂಚ ಪೀಠ ಹೇಳಿದೆ. ಆದರೆ ಸೆ.28ರ ತೀರ್ಪಿಗೆ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದೂ ತಿಳಿಸಿದೆ.
ಸುಪ್ರೀಂನ ಆದೇಶ ಹೊರಬಿದ್ದ ಕೂಡಲೇ ಕೇರಳಾದ್ಯಂತ ಸಂತಸ ಮನೆ ಮಾಡಿದೆೆ. ಅಯ್ಯಪ್ಪ ಸ್ವಾಮಿ ದೇಗುಲದ ಮುಖ್ಯ ತಂತ್ರಿ ಕಂಡರಾರು ರಾಜೀವರಾರು ಪ್ರತಿಕ್ರಿಯಿಸಿ, ಇದೊಂದು ಅತ್ಯುತ್ತಮ ತೀರ್ಮಾನ. ಅಯ್ಯಪ್ಪ ಸ್ವಾಮಿ ನಮಗೆ ಸಹಾಯ ಮಾಡಿದ್ದಾನೆ ಎಂದಿದ್ದಾರೆ. ಮಂಗಳವಾರದ ಆದೇಶವನ್ನು ಸ್ವಾಗತಿಸುವುದಾಗಿ ಹೇಳಿರುವ ಸಾಮಾಜಿಕ ಕಾರ್ಯಕರ್ತ ರಾಹುಲ್ ಈಶ್ವರ್, ಜ.22ರ ವರೆಗೆ ದೇಗುಲಕ್ಕೆ 10ರಿಂದ 50 ವರ್ಷ ವಯಸ್ಸಿನೊಳಗಿನ ಯಾವುದೇ ಮಹಿಳೆಯನ್ನು ಬಿಡದಂತೆ ಬಾಗಿಲಲ್ಲೇ ಕಾಯುತ್ತೇನೆ ಎಂದೂ ಹೇಳಿದ್ದಾರೆ.
ಮಂಗಳವಾರ ಅಪರಾಹ್ನ ಕೊಠಡಿಯಲ್ಲೇ ವಿಚಾರಣೆ ನಡೆಸಿದ ಸಿಜೆಐ ರಂಜನ್ ಗೊಗೊಯ್, ನ್ಯಾಯಮೂರ್ತಿಗಳಾದ ಆರ್.ಎಫ್. ನಾರಿಮನ್, ಎಂ.ಎಂ.ಖಾನ್ವಿಲ್ಕರ್, ಡಿ.ವೈ.ಚಂದ್ರಚೂಡ್ ಮತ್ತು ಇಂದು ಮಲ್ಹೋತ್ರ ಅವರಿದ್ದ ಪಂಚ ಪೀಠವು ರಾಷ್ಟ್ರೀಯ ಅಯ್ಯಪ್ಪ ಭಕ್ತರ ಸಂಘ (ಎನ್‌ಎಡಿಎ), ನಾಯರ್ ಸೇವಾ ಸಮಾಜ (ಎನ್‌ಎಸ್‌ಎಸ್) ಸಹಿತ 49 ಸಂಘಟನೆಗಳು, ವ್ಯಕ್ತಿಗಳು ಸಲ್ಲಿಸಿದ್ದ ಮರುಪರಿಶೀಲನ ಅರ್ಜಿಗಳನ್ನು ಸ್ವೀಕರಿಸಿತು. ಜ.22ರಿಂದ ಸೂಕ್ತ ಪೀಠದಿಂದ ಈ ಬಗ್ಗೆ ವಿಚಾರಣೆ ನಡೆಯಲಿದೆ ಎಂದೂ ಹೇಳಿದೆ. ಆದರೆ ಈ ಬಳಿಕವಷ್ಟೇ ರಿಟ್ ಅರ್ಜಿಗಳನ್ನು ವಿಚಾರಣೆಗೆ ತೆಗೆದುಕೊಳ್ಳುವುದಾಗಿ ತಿಳಿಸಿದೆ.
ಬಿಜೆಪಿ, ಕಾಂಗ್ರೆಸ್ ಸ್ವಾಗತ
ಮಹಿಳೆಯರು ದೇಗುಲ ಪ್ರವೇಶ ಮಾಡದಂತೆ ಪ್ರತಿಭಟನೆ ನಡೆಸಿರುವ ಬಿಜೆಪಿ ಸುಪ್ರೀಂ ಆದೇಶವನ್ನು ಸ್ವಾಗತಿಸಿದೆ. ಕಾಂಗ್ರೆಸ್ ಕೂಡ ತೀರ್ಪನ್ನು ಸ್ವಾಗತಿಸಿದ್ದು, ಕೇರಳ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.
ಪ್ರವೇಶಿಸುವೆ: ತೃಪ್ತಿ; ಬಿಡಲ್ಲ: ರಾಹುಲ್
ದೇಶದಲ್ಲಿನ ವಿವಿಧ ದೇಗುಲಗಳಲ್ಲಿನ ಪ್ರವೇಶಕ್ಕಾಗಿ ಹೋರಾಟ ನಡೆಸುತ್ತಿರುವ ತೃಪ್ತಿ ದೇಸಾಯಿ ಅವರು ನ.17ರಿಂದ ನ.20ರ ಒಳಗೆ ಒಂದು ದಿನ ದೇಗುಲ ಪ್ರವೇಶ ಮಾಡುವುದಾಗಿ ಹೇಳಿಕೊಂಡಿದ್ದಾರೆ. ದೇಗುಲ ಪ್ರವೇಶ ಮಾಡದಂತೆ ಪ್ರತಿಭಟನೆಗಳ ಮೂಲಕ ತಡೆದಿರುವ ಹೋರಾಟಗಾರ ರಾಹುಲ್ ಈಶ್ವರ್ ಇದಕ್ಕೆ ಪ್ರತಿಕ್ರಿಯಿಸಿ, ಜ.22ರವರೆಗೆ ದೇಗುಲದ ಬಾಗಿಲಲ್ಲೇ ಕಾಯುವುದಾಗಿ ಘೋಷಿಸಿದ್ದಾರೆ. ಯಾವುದೇ ಕಾರಣಕ್ಕೂ ಈ ಎರಡು ತಿಂಗಳ ಅವಧಿಯಲ್ಲಿ ಮಹಿಳೆಯರ ಪ್ರವೇಶಕ್ಕೆ ಅನುವುಮಾಡಿಕೊಡುವುದಿಲ್ಲ. ಶಾಂತ ರೀತಿಯಲ್ಲಿ ಪ್ರತಿಭಟಿಸುತ್ತೇವೆ ಎಂದಿದ್ದಾರೆ.
ಕಾನೂನು ತಜ್ಞರೊಂದಿಗೆ ಚರ್ಚೆ
ಸುಪ್ರೀಂ ಆದೇಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇರಳ ಸರಕಾರ, ಕಾನೂನು ತಜ್ಞರೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದೆ. ಸೆ.28ರ ತೀರ್ಪಿಗೆ ತಡೆಯಾಜ್ಞೆ ನೀಡಲು ಸುಪ್ರೀಂ ನಿರಾಕರಿಸಿದೆ. ಆದರೆ ಮರುಪರಿಶೀಲನ ಅರ್ಜಿಗಳ ವಿಚಾರಣೆಗೂ ಅದು ಒಪ್ಪಿಗೆ ನೀಡಿದೆ. ಹೀಗಾಗಿ ಮುಂದೇನು ಮಾಡಬೇಕು ಎಂಬ ಬಗ್ಗೆ ಕಾನೂನು ಪರಿಣತರ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
ನ.17ಕ್ಕೆ ತೆರೆಯಲಿದೆ ಬಾಗಿಲು
ನ.17ರಂದು ಶಬರಿಮಲೆ ದೇಗುಲದ ಬಾಗಿಲು ತೆರೆಯಲಿದೆ. ಮಂಡಲ ಪೂಜೆ ಮತ್ತು ಮಕರ ಸಂಕ್ರಾಂತಿ ಪ್ರಯುಕ್ತ ಎರಡು ತಿಂಗಳುಗಳವರೆಗೆ, ಅಂದರೆ ಜ.21ರವರೆಗೆ ಬಾಗಿಲು ತೆರೆದಿರಲಿದೆ. ಈ ಸಂದರ್ಭದಲ್ಲೇ ದೇಗುಲ ಪ್ರವೇಶಕ್ಕಾಗಿ ಒಟ್ಟು 550 ಮಹಿಳೆಯರು ದರ್ಶನಕ್ಕಾಗಿ ಆನ್‌ಲೈನ್ ಬುಕಿಂಗ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.