ಗಾಂಧಿ ಹತ್ಯೆ ಮರುತನಿಖೆ: ಅಮಿಕಸ್ ಕ್ಯೂರಿ ನೇಮಕ
Team Udayavani, Oct 7, 2017, 10:35 AM IST
ಹೊಸದಿಲ್ಲಿ: ಮಹಾತ್ಮ ಗಾಂಧಿ ಅವರ ಹತ್ಯೆ ಪ್ರಕರಣದ ಮರುತನಿಖೆ ನಡೆಸುವಂತೆ ಸಲ್ಲಿಸಲಾದ ಮನವಿಗೆ ಸುಪ್ರೀಂಕೋರ್ಟ್ ಶುಕ್ರವಾರ ಒಂದಿಷ್ಟು ಮಹತ್ವದ ಪ್ರಶ್ನೆಗಳನ್ನು ಎತ್ತಿದೆ. ಅಲ್ಲದೆ, ಅದಕ್ಕೆ ಸಂಬಂಧಿಸಿ ಅಮಿಕಸ್ ಕ್ಯೂರಿಯನ್ನು ನೇಮಕ ಮಾಡಿದೆ.
15 ನಿಮಿಷ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಬಳಿಕ ಈ ಬಗ್ಗೆ ಮಾಹಿತಿ ನೀಡಿದೆ. ಹಿರಿಯ ನ್ಯಾಯವಾದಿ ಹಾಗೂ ಮಾಜಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಅಮರೇಂದರ್ ಶರಣ್ ಅವರನ್ನು ಅಮಿಕಸ್ ಕ್ಯೂರಿಯನ್ನಾಗಿ ನೇಮಕ ಮಾಡಿರುವುದಾಗಿ ತಿಳಿಸಿದೆ. “ಕಾನೂನಿನ ವ್ಯಾಪ್ತಿಯಲ್ಲಿ ಏನನ್ನೂ ಮಾಡಲು ಸಾಧ್ಯವಾಗುವುದಿಲ್ಲ’ ಎಂಬರ್ಥದಲ್ಲೂ ನ್ಯಾಯಪೀಠ ಮಾತನಾಡಿದೆ. ಬಳಿಕ ಮಾತನಾಡಿದ ಅಮ್ರಿಂದರ್ ಶರಣ್, ಪ್ರಕರಣದ ಎಲ್ಲಾ ಮಾಹಿತಿಗಳ ಮೌಲ್ಯಮಾಪನ ನಡೆಸುವುದಾಗಿ ಹೇಳಿದ್ದಾರೆ. ಮುಂಬಯಿ ಮೂಲದ ಅಭಿನವ್ ಭಾರತ್ನ ಟ್ರಸ್ಟಿ ಆಗಿರುವ ಡಾ|ಪಂಕಜ್ ಫಡ್ನಿಸ್ ಎಂಬವರು ಅರ್ಜಿದಾರರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.