ಕಾವೇರಿ ಸ್ಕೀಮ್ ಕರಡು ನಿಯಮಕ್ಕೆ ಸುಪ್ರೀಂ ಒಪ್ಪಿಗೆ
Team Udayavani, May 19, 2018, 6:00 AM IST
ಹೊಸದಿಲ್ಲಿ: ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಮೇ 15ರಂದು ಸಲ್ಲಿಸಿದ್ದ ಕರಡು ನಿಯಮಕ್ಕೆ ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ. ಹೀಗಾಗಿ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ನಡುವೆ ನೀರು ಹಂಚಿಕೆ ಸುಗಮವಾಗಲಿದೆ. ಇದೇ ವೇಳೆ, ಕರ್ನಾಟಕ ಮತ್ತು ಕೇರಳ ಸಲ್ಲಿ ಸಿದ್ದ ಸಲಹೆಗಳನ್ನು ಮುಖ್ಯ ನ್ಯಾಯ ಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠ ತಿರಸ್ಕರಿಸಿದೆ. ಜತೆಗೆ ಮುಂಗಾರು ಹಂಗಾಮಿನ ಮೊದಲೇ ಸ್ಕೀಮ್ ಜಾರಿ ಮಾಡುವಂತೆ ಸೂಚಿಸಿದೆ.
ಸ್ಕೀಮ್ ಮೂಲಕ ಕಾವೇರಿ ನ್ಯಾಯ ಮಂಡಳಿಯ ಆದೇಶ ಜಾರಿಗೊಳಿಸಿ ದಂತಾಗಿದೆ ಎಂದು ನ್ಯಾಯಪೀಠ ಶುಕ್ರವಾರ ಅಭಿಪ್ರಾಯಪಟ್ಟಿದೆ. ಇದೇ ವೇಳೆ ಕೇಂದ್ರ ಸರಕಾರದ ವಿರುದ್ಧ ತಮಿಳುನಾಡು ಸರಕಾರದ ಪರ ವಕೀಲ ಶೇಖರ ನಾಫೆ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಕೇಂದ್ರ ಸರಕಾರ ಸಲ್ಲಿಸಿರುವ ಸ್ಕೀಮ್‌ನ ಕರಡು ನಿಯಮಗಳು ಫೆ.16ರಂದು ತಾನು ನೀಡಿರುವ ತೀರ್ಪು ಮತ್ತು ಅಂತಾರಾಜ್ಯ ನದಿ ನೀರು ಹಂಚಿಕೆ ಕಾಯ್ದೆ ಸೆಕ್ಷನ್ “6ಎ’ಗೆ ಅನ್ವಯವಾಗಿಯೇ ಇದೆ ಎಂದು ಸಿಜೆಐ ಮಿಶ್ರಾ ನೇತೃತ್ವದ ಪೀಠ ಹೇಳಿದೆ. ಹೀಗಾಗಿ ಅದನ್ನು ಸಂಸತ್‌ನ ಮುಂಗಾರು ಅಧಿವೇಶನದಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳಬೇಕು ಎಂದು ನ್ಯಾಯಪೀಠ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.