ಕೊಲಿಜಿಯಂ ನಿರ್ಧಾರ ವೆಬ್‌ಸೈಟಲ್ಲಿ ಲಭ್ಯ
Team Udayavani, Oct 7, 2017, 10:50 AM IST
ಹೊಸದಿಲ್ಲಿ: ದೇಶದ ಹೈಕೋರ್ಟ್, ಸುಪ್ರೀಂಕೋರ್ಟ್‌ಗಳಿಗೆ ಯಾವ ನ್ಯಾಯಮೂರ್ತಿಗಳ ನೇಮಕವಾಯಿತು, ಏಕೆ ನೇಮಕವಾಯಿತು, ಯಾರ ಹೆಸರನ್ನು ತಿರಸ್ಕರಿಸಲಾಯಿತು, ಏಕೆ ತಿರಸ್ಕರಿಸಲಾಯಿತು, ಯಾರನ್ನು ವರ್ಗಾವಣೆ ಮಾಡಲಾಯಿತು ಎಂಬ ಎಲ್ಲ ವಿವರಗಳೂ ಇನ್ನು ಮುಂದೆ ಜನಸಾಮಾನ್ಯರಿಗೆ ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಸಿಗಲಿದೆ.
ಪಾರದರ್ಶಕತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಇವುಗಳನ್ನು ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡುವ ಮಹತ್ವದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಕೈಗೊಂಡಿದೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಕೊಲಿಜಿಯಂನಲ್ಲಿ ಹಿರಿಯ ನ್ಯಾಯಮೂರ್ತಿಗಳಾದ ಜೆ. ಚೆಲಮೇಶ್ವರ್, ರಂಜನ್ ಗೊಗೋಯ್, ಮದನ್ ಬಿ. ಲೋಕೂರ್ ಮತ್ತು ಕುರಿಯನ್ ಜೋಸೆಫ್ ಅವರೂ ಇದ್ದಾರೆ.
ಹೈಕೋರ್ಟ್‌ನ ನ್ಯಾಯಪೀಠಕ್ಕೆ ನ್ಯಾಯಮೂರ್ತಿಗಳ ಭಡ್ತಿ, ಖಾಯಂ ಜಡ್ಜ್ ಆಗಿ ದೃಢೀಕರಣ, ಹೈಕೋರ್ಟ್ ಸಿಜೆ ಆಗಿ ಭಡ್ತಿ, ಜಡ್ಜ್ಗಳ ವರ್ಗಾವಣೆ, ಸುಪ್ರೀಂ ಕೋರ್ಟ್‌ಗೆ ನೇಮಕ ಮತ್ತಿತರ ವಿಚಾರಗಳಿಗೆ ಸಂಬಂಧಿಸಿದ ಶಿಫಾರಸುಗಳನ್ನು ಸರಕಾರಕ್ಕೆ ಕಳುಹಿಸಿದೊಡನೆ ಅವುಗಳನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ನಿರ್ಧರಿಸಲಾಗಿದೆ. ಅ.3ರಂದು ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಅದರಂತೆ, ಅಪ್‌ಲೋಡ್ ಮಾಡುವ ಕಾರ್ಯವೂ ಆರಂಭವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Out of Syllabus Review; ಪ್ರೇಮಿಗಳಿಗೆ ಹೊಸ ಸಿಲೆಬಸ್
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.