ತ್ರಿವಳಿ ತಲಾಖ್ ರದ್ದು; ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು
Team Udayavani, Aug 22, 2017, 11:15 AM IST
ನವದೆಹಲಿ:ಮುಸ್ಲಿಂ ಸಮುದಾಯದಲ್ಲಿರುವ ವಿವಾದಿತ ತ್ರಿವಳಿ ತಲಾಖ್ ಪದ್ಧತಿ ಕುರಿತು ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ ಮಂಗಳವಾರ ಐತಿಹಾಸಿಕ ತೀರ್ಪನ್ನು ಪ್ರಕಟಿಸಿದ್ದು, ತ್ರಿವಳಿ ತಲಾಖ್ ಸಂವಿಧಾನ ಬಾಹಿರ ಎಂದು ಬಹುಮತದ (3:2) ತೀರ್ಪಿನ ಆಧಾರದ ಮೇಲೆ ತ್ರಿವಳಿ ತಲಾಖ್ ಅನ್ನು ರದ್ದುಪಡಿಸಿದೆ.
ಸಿಜೆಐ ನೇತೃತ್ವದ ಪಂಚ ಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಉದಯ್ ಲಲಿತ್, ಕುರಿಯನ್ ಜೋಸೆಫ್ ಹಾಗೂ ರೋಹಿಂಗ್ಟನ್ ಅವರು ಮುಸ್ಲಿಂ ವೈಯಕ್ತಿಕ(ಇದನ್ನೂ ಓದಿ: ನ್ಯಾಯದ ನಿರೀಕ್ಷೆಯಲ್ಲಿ…) ಕಾನೂನಿಗೆ ಸಾಂವಿಧಾನಿಕ ಮಾನ್ಯತೆ ಇಲ್ಲ ಎಂದು ಹೇಳಿ ತ್ರಿವಳಿ ತಲಾಖ್ ಅನ್ನು ರದ್ದುಪಡಿಸಿ ಬಹುಮತದ ತೀರ್ಪು ನೀಡಿದ್ದಾರೆ.
ತ್ರಿವಳಿ ತಲಾಖ್ ಮಾನ್ಯತೆಯನ್ನು ಎತ್ತಿಹಿಡಿದಿದೆ. ಅಲ್ಲದೇ ತ್ರಿವಳಿ ತಲಾಖ್ ಗೆ 6 ತಿಂಗಳ ಕಾಲ ತಡೆಯಾಜ್ಞೆ ನೀಡಿ, ತ್ರಿವಳಿ ತಲಾಖ್ ಕುರಿತು ಸಂಸತ್ 6 ತಿಂಗಳೊಳಗೆ ಕಾನೂನನ್ನು ಜಾರಿಗೆ ತರಬೇಕು ಎಂದು ನಿರ್ದೇಶನ ನೀಡಿದೆ.
ತ್ರಿವಳಿ ತಲಾಖ್ ಕುರಿತಂತೆ ಬೇಸಗೆ ರಜೆಯಲ್ಲಿ ಆರು ದಿನಗಳ ನಿರಂತರ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ನೇತೃತ್ವದ ಪಂಚಸದಸ್ಯ ಪೀಠ, ಮೇ 18ರಂದು ತೀರ್ಪನ್ನು ಕಾಯ್ದಿರಿಸಿತ್ತು.
ತ್ರಿವಳಿ ತಲಾಖ್ ಕುರಿತಂತೆ ಮುಖ್ಯ ನ್ಯಾಯಮೂರ್ತಿ ಜೆಎಸ್ ಖೇಹರ್ ಹಾಗೂ ನ್ಯಾ.ಅಬ್ದುಲ್ ನಜೀರ್ ಅವರು ತ್ರಿವಳಿ ತಲಾಖ್ ಮಾನ್ಯತೆಯನ್ನು ಎತ್ತಿಹಿಡಿದಿದ್ದರು, ಜಸ್ಟೀಸ್ ರೋಹಿಂಟನ್ ನಾರಿಮನ್, ಉದಯ್ ಲಲಿತ್ ಹಾಗೂ ಜೋಸೆಫ್ ಕುರಿಯನ್ನು ತ್ರಿವಳಿ ತಲಾಖ್ ಅನ್ನು ಅಸಾಂವಿಧಾನಿಕ ಎಂದು ತೀರ್ಪು ನೀಡಿ, ಮುಂದಿನ 6 ತಿಂಗಳೊಳಗೆ ತ್ರಿವಳಿ ತಲಾಖ್ ಅನ್ನು ನಿಷೇಧಿಸಿ ಕಾನೂನನ್ನು ಜಾರಿಗೊಳಿಸಬೇಕು ಎಂದು ನಿರ್ದೇಶನ ನೀಡಿದೆ. ಅಲ್ಲಿಯವರೆಗೆ ತ್ರಿವಳಿ ತಲಾಖ್ ಜಾರಿಯಲ್ಲಿ ಇರುವುದಿಲ್ಲ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandiben Patel: ವಿಮಾನ ಅನ್ವೇಷಿಸಿದ್ದು ರೈಟ್ ಸೋದರರಲ್ಲ, ಋಷಿ ಭಾರದ್ವಾಜ: ರಾಜ್ಯಪಾಲೆ
Manipur: ಖಾಲಿ ಶವಪೆಟ್ಟಿಗೆ ಹಿಡಿದು ನ್ಯಾಯಕ್ಕಾಗಿ ಪ್ರತಿಭಟನೆ
Divorce: 29 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಎ.ಆರ್.ರೆಹಮಾನ್
ಮಣಿಪುರವನ್ನು ರಕ್ಷಿಸಿ: ರಾಷ್ಟ್ರಪತಿಗೆ ಖರ್ಗೆ ಪತ್ರ
Chennai: ಕೃಷ್ಣಗೆ ಎಂ.ಎಸ್.ಸುಬ್ಬುಲಕ್ಷ್ಮಿಪ್ರಶಸ್ತಿ ನೀಡಿಕೆಗೆ ಮದ್ರಾಸ್ ಹೈಕೋರ್ಟ್ ತಡೆ
MUST WATCH
ಹೊಸ ಸೇರ್ಪಡೆ
Anandiben Patel: ವಿಮಾನ ಅನ್ವೇಷಿಸಿದ್ದು ರೈಟ್ ಸೋದರರಲ್ಲ, ಋಷಿ ಭಾರದ್ವಾಜ: ರಾಜ್ಯಪಾಲೆ
bomb cyclone: ಶೀಘ್ರ ಅಮೆರಿಕ ಕರಾವಳೀಲಿ “ಬಾಂಬ್ ಸೈಕ್ಲೋನ್’ ಸ್ಫೋಟ!
Manipur: ಖಾಲಿ ಶವಪೆಟ್ಟಿಗೆ ಹಿಡಿದು ನ್ಯಾಯಕ್ಕಾಗಿ ಪ್ರತಿಭಟನೆ
Mangaluru: ಅಕಾಡೆಮಿ ಯಕ್ಷಗಾನ ಕಲಾವಿದರಿಗೆ ಶಕ್ತಿ ತುಂಬುವ ಕೆಲಸ ಮಾಡಲಿ: ಡಾ.ಶಿವರಾಮ ಶೆಟ್ಟಿ
Kaup: ಉದ್ಯಾವರ: ಮಹಿಳೆ ಮಲಗಿದ ಸ್ಥಿತಿಯಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.