ಪಶ್ಚಿಮ ಬಂಗಾಳ ಬಿಜೆಪಿ ನಾಯಕರ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
Team Udayavani, Feb 25, 2022, 9:45 PM IST
ನವದೆಹಲಿ: ಸ್ಥಳೀಯ ಚುನಾವಣೆ ವೇಳೆ ಕೇಂದ್ರೀಯ ಪಡೆಗಳನ್ನು ನಿಯೋಜಿಸಬೇಕೆಂದು ಕೋರಿ ಪಶ್ಚಿಮ ಬಂಗಾಳ ಬಿಜೆಪಿ ನಾಯಕರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.
ಫೆ.27ರಂದು ನಡೆಯಲಿರುವ 108 ನಗರಪಾಲಿಕೆಗಳ ಚುನಾವಣೆ ವೇಳೆ ಪ್ರತಿ ಪಾಲಿಕೆಯ ಪರಿಸ್ಥಿತಿಯನ್ನು ರಾಜ್ಯ ಚುನಾವಣಾ ಆಯುಕ್ತರು ಪರಿಶೀಲನೆ ನಡೆಸಬೇಕು ಎಂದು ಇತ್ತೀಚೆಗೆ ಕಲ್ಕತ್ತಾ ಹೈಕೋರ್ಟ್ ನಿರ್ದೇಶನ ನೀಡಿತ್ತು. ಅದನ್ನು ಪ್ರಶ್ನಿಸಿ ಹಾಗೂ ಕೇಂದ್ರೀಯ ಪಡೆಗಳನ್ನು ಪಾಲಿಕೆ ಚುನಾವಣೆ ವೇಳೆ ನಿಯೋಜಿಸಬೇಕು ಎಂದು ಕೋರಿ ಬಿಜೆಪಿ ನಾಯಕರು ಸುಪ್ರೀಂ ಮೆಟ್ಟಿಲೇರಿದ್ದರು. ಈ ಹಿಂದಿನ ಹಂತಗಳ ಮತದಾನದ ವೇಳೆ ವ್ಯಾಪಕ ಹಿಂಸಾಚಾರ ಮತ್ತು ಅಕ್ರಮಗಳು ನಡೆದಿವೆ.
ಇದನ್ನೂ ಓದಿ :ಶಾಲೆಯಿಂದ ಮನೆಗೆ ಬರುತ್ತಿದ್ದ ವಿದ್ಯಾರ್ಥಿನಿಯ ಬರ್ಬರ ಹತ್ಯೆ : ಕಾರಣ ನಿಗೂಢ
ಹೀಗಾಗಿ ಕೇಂದ್ರೀಯ ಪಡೆಗಳನ್ನು ನಿಯೋಜಿಸಿ ನ್ಯಾಯಸಮ್ಮತ ಚುನಾವಣೆಗೆ ಅವಕಾಶ ಕಲ್ಪಿಸಬೇಕು ಎಂದೂ ಅರ್ಜಿದಾರರು ಕೋರಿದ್ದರು. ಆದರೆ, ಈ ಅರ್ಜಿಯನ್ನು ನಾವು ಪರಿಗಣಿಸಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.