ಐಐಟಿ ಪ್ರವೇಶ ಪ್ರಕ್ರಿಯೆ, ಕೌನ್ಸೆಲಿಂಗ್ಗೆ ಸುಪ್ರೀಂ ತಡೆ
Team Udayavani, Jul 8, 2017, 8:37 AM IST
ಹೊಸದಿಲ್ಲಿ: ಐಐಟಿ-ಜಂಟಿ ಪ್ರವೇಶ ಪರೀಕ್ಷೆ (ಜೆಇಇ)ಯ ರ್ಯಾಂಕ್ ಪಟ್ಟಿ ಗೊಂದಲದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ ಹಾಗೂ ಕೌನ್ಸೆಲಿಂಗ್ ನಡೆಸದಂತೆ ದೇಶದ ಎಲ್ಲಾ ಐಐಟಿಗಳಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ರ್ಯಾಂಕ್ ಪಟ್ಟಿ ಮತ್ತು ಹೆಚ್ಚುವರಿ ಅಂಕ ನೀಡುವ ಕುರಿತಾಗಿ ಸುಪ್ರೀಂ ಕೋರ್ಟ್ ಅಂತಿಮ ಆದೇಶ ನೀಡುವವರೆಗೂ ಪ್ರವೇಶ ಪ್ರಕ್ರಿಯೆ ನಡೆಸಬಾರದು ಎಂದು ನ್ಯಾ| ದೀಪಕ್ ಮಿಶ್ರಾ ಮತ್ತು ಎ.ಎಂ. ಖನ್ವೀಳ್ಕರ್ ನೇತೃತ್ವದ ನ್ಯಾಯಪೀಠ ಐಐಟಿಗಳಿಗೆ ಸೂಚಿಸಿದೆ. ವಿಚಾರಣೆಯನ್ನು ಜು.10ರಂದು ನಡೆಸಲಾಗುವುದು ಎಂದು ಪೀಠ ಹೇಳಿದೆ. ಅಲ್ಲದೇ ಪ್ರವೇಶ ಕೌನ್ಸೆಲಿಂಗ್ ಮತ್ತು ಪ್ರವೇಶಕ್ಕೆ ಸಂಬಂಧಿಸಿ ಯಾರಾದರೂ ಅರ್ಜಿ ಸಲ್ಲಿಸಿದರೆ ಅದನ್ನು ಸ್ವೀಕರಿಸದಂತೆ ಎಲ್ಲ ಹೈಕೋರ್ಟ್ ಗಳಿಗೂ ಆದೇಶಿಸಿದೆ. ಜೊತೆಗೆ, ಐಐಟಿ ಜೆಇಇ-2017ರ ರ್ಯಾಂಕ್ ಪಟ್ಟಿ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳಲ್ಲಿ ವಿಲೇವಾರಿ ಯಾಗದಿರುವ ಅರ್ಜಿಗಳ ಕುರಿತು ಮಾಹಿತಿ ನೀಡುವಂತೆ ಸೂಚಿಸಿದೆ. ಈ ಬಾರಿಯ ಜೆಇಇ ಪರೀಕ್ಷೆಯಲ್ಲಿ ಅಸಮರ್ಪಕ ಪ್ರಶ್ನೆಗಳನ್ನು ಕೇಳಲಾಗಿತ್ತು
ಎಂದು ಹಲವಾರು ಐಐಟಿ ಅಭ್ಯರ್ಥಿಗಳು ಕೋರ್ಟ್ ಮೊರೆ ಹೋಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್ಪೋರ್ಟ್ ಎಷ್ಟು ಸದೃಢ?
Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.