ಕ್ರಿಮಿನಲ್ ಹಿನ್ನೆಲೆಯವರ ಮಾಹಿತಿ ಕೊಡಿ: ರಾಜಕೀಯ ಪಕ್ಷಗಳಿಗೆ ಸುಪ್ರೀಂ ತಾಕೀತು
Team Udayavani, Feb 14, 2020, 10:19 AM IST
ಹೊಸದಿಲ್ಲಿ: ಸಂಸತ್ ಮತ್ತು ವಿಧಾನಸಭೆಗಳಿಗೆ ಕ್ರಿಮಿನಲ್ ಹಿನ್ನೆಲೆ ಉಳ್ಳವರು ಹೆಚ್ಚು ಆರಿಸಿ ಬರುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಅಂಥವರನ್ನೇ ಅಭ್ಯರ್ಥಿಗಳಾಗಿ ಆರಿಸಲು ನಿಮಗಿರುವ ಕಾರಣಗಳೇನು ಎಂಬ ಬಗ್ಗೆ ತಿಳಿಸಿ ಎಂದು ಎಲ್ಲ ರಾಜಕೀಯ ಪಕ್ಷಗಳಿಗೆ ಸೂಚಿಸಿದೆ. ಈ ಸಂಬಂಧ ನಿಮ್ಮ ವೆಬ್‌ಸೈಟ್‌ಗಳಲ್ಲಿ, ಟ್ವಿಟರ್ ಮತ್ತು ಫೇಸ್ ಬುಕ್ ಖಾತೆಗಳಲ್ಲಿ ಹಾಗೂ ಪತ್ರಿಕೆಗಳಲ್ಲಿ ಜಾಹೀರಾತಾಗಿ ಮಾಹಿತಿ ಒದಗಿಸುವಂತೆಯೂ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ವಕೀಲ ಮತ್ತು ಬಿಜೆಪಿ ನಾಯಕ ಅಶ್ವಿನಿ ಕುಮಾರ್ ಉಪಾಧ್ಯಾಯ್ ಮತ್ತು ಇತರರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾ| ರೋಹಿಂಗ್ಟನ್ ಫಾಲಿ ನಾರಿಮನ್ ನೇತೃತ್ವದ ನ್ಯಾಯಪೀಠ ಗುರುವಾರ ಈ ನಿರ್ದೇಶನ ನೀಡಿದೆ.
ಸಂಪೂರ್ಣ ವಿವರ ಕೊಡಿ
ಕ್ರಿಮಿನಲ್ ಕೇಸುಗಳಲ್ಲಿ ಭಾಗಿಯಾಗಿರುವ ಶಾಸಕ ಅಥವಾ ಸಂಸದರು ನಿಮ್ಮಲ್ಲಿ ಎಷ್ಟಿದ್ದಾರೆ, ಇನ್ನೂ ಎಷ್ಟು ಮಂದಿ ವಿರುದ್ಧ ಪ್ರಕರಣಗಳು ಬಾಕಿ ಇವೆ, ಕ್ರಿಮಿನಲ್ ಕೇಸು ಬಾಕಿ ಇದ್ದ ಹೊರತಾಗಿಯೂ ಅವರಿಗೆ ನೀವು ಟಿಕೆಟ್ ನೀಡಿದ್ದೇಕೆ- ಈ ಕುರಿತು ಮಾಹಿತಿ ನೀಡಿ ಎಂದು ಕೋರ್ಟ್ ಸೂಚಿಸಿದೆ.
ರಾಜಕೀಯ ಅಪರಾಧೀಕರಣ ಹೆಚ್ಚುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಪೀಠ, ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳು ಇದ್ದರೂ ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಿದ್ದೇಕೆ ಎಂದು ಪ್ರಶ್ನಿಸಿದೆ. ಅಲ್ಲದೆ ಕ್ರಿಮಿನಲ್ ಕೇಸು ಇರುವ, ಆಯ್ಕೆಯಾದ ಜನಪ್ರತಿನಿಧಿಗಳ ಮಾಹಿತಿಯನ್ನು 48 ತಾಸುಗಳ ಒಳಗಾಗಿ ಪಕ್ಷದ ವೆಬ್‌ಸೈಟ್, ಸಾಮಾಜಿಕ ಜಾಲತಾಣಗಳು, ಒಂದು ಸ್ಥಳೀಯ ಪತ್ರಿಕೆ ಹಾಗೂ ರಾಷ್ಟ್ರೀಯ ಪತ್ರಿಕೆಯಲ್ಲಿ ಪ್ರಕಟಿಸಬೇಕು. ಹಾಗೆಯೇ ಇಂಥ ಅಭ್ಯರ್ಥಿಗಳನ್ನು ಸ್ಪರ್ಧೆಗೆ ಆಯ್ಕೆ ಮಾಡಿದ 72 ತಾಸುಗಳ ಒಳಗಾಗಿ ಚುನಾವಣ ಆಯೋಗಕ್ಕೆ ವರದಿ ಸಲ್ಲಿಸಬೇಕು ಎಂದು ಆದೇಶಿಸಿದೆ.
ಮೊದಲೇ ಉಲ್ಲಂಘನೆ
ಸುಪ್ರೀಂ ಕೋರ್ಟ್ ನಿರ್ದೇಶನದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, ಕರ್ನಾಟಕದಲ್ಲಿ ಗಣಿ ಅಕ್ರಮದಲ್ಲಿ ಮೊಕದ್ದಮೆ ಎದುರಿಸುತ್ತಿರುವ ಸಚಿವ ಆನಂದ್ ಸಿಂಗ್‌ಗೆ ಅರಣ್ಯ ಖಾತೆ ನೀಡಲಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನ ಬರುವ ಮೊದಲೇ ಪ್ರಧಾನಿ ಮೋದಿ ಅದನ್ನು ಉಲ್ಲಂಘಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಬಿಜೆಪಿ ಸ್ವಾಗತ
ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಬಿಜೆಪಿ ಸ್ವಾಗತಿಸಿದೆ. ಚುನಾವಣ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಈ ನಿರ್ದೇಶನ ಮತ್ತಷ್ಟು ಬಲಪಡಿಸಿದೆ. ಜತೆಗೆ ಎಲ್ಲ ಅಂಶಗಳನ್ನು ಗಮನದಲ್ಲಿರಿಸಿಕೊಂಡು ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಕುರಿತು ಮತದಾರರನ್ನು ಜಾಗೃತಗೊಳಿಸಿದೆ ಎಂದು ಬಿಜೆಪಿ ವಕ್ತಾರ ನಳಿನ್ ಕೊಹ್ಲಿ ಹೇಳಿದ್ದಾರೆ.
ಗೆಲ್ಲುವ ಅಂಶವೇ ಪ್ರಧಾನವಲ್ಲ
ಚುನಾವಣೆಯಲ್ಲಿ ನಿಗದಿತ ಅಭ್ಯರ್ಥಿಗಳು ಗೆಲ್ಲಲೇಬೇಕು. ಹಿಂದಿನ ಚುನಾವಣೆಯಲ್ಲಿ ಜಯ ಸಾಧಿಸಿದ್ದಾರೆ ಎಂಬ ಅಂಶಗಳು ಪ್ರಧಾನವಾಗ ಕೂಡದು. ಅವರು ಸಮಾಜಕ್ಕಾಗಿ ನೀಡಿರುವ ಕೊಡುಗೆ ಏನು ಎಂಬುದು ಅವರ ಸಾಧನೆ ನಿರ್ಧರಿಸುವ ಅಂಶವಾಗಬೇಕು ಎಂದು ಸುಪ್ರೀಂ ಕೋರ್ಟ್ ಕಟುವಾಗಿ ಅಭಿಪ್ರಾಯಪಟ್ಟಿದೆ. ಒಂದೊಮ್ಮೆ ರಾಜಕೀಯ ಪಕ್ಷಗಳು ಮಾಹಿತಿ ನೀಡದಿದ್ದರೆ ಮತ್ತು ಈ ನಿರ್ದೇಶನವನ್ನು ಜಾರಿಗೊಳಿಸಲು ವಿಫಲವಾದರೆ ಅದನ್ನು ನ್ಯಾಯಾಂಗ ನಿಂದನೆ ಎಂದು ಚುನಾವಣಾ ಆಯೋಗ ಪರಿಗಣಿಸಬೇಕು ಎಂದೂ ಹೇಳಿದೆ.
ನಿರ್ದೇಶನಗಳು
1. ರಾಜ್ಯ, ರಾಷ್ಟ್ರ ಮಟ್ಟದ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ವಿರುದ್ಧ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಮಾಹಿತಿಯನ್ನು (ಅಪರಾಧಗಳ ಸ್ವರೂಪ, ಆರೋಪ ಸಾಬೀತು, ವಿಚಾರಣೆ ನಡೆಸುತ್ತಿರುವ ನ್ಯಾಯಾಲಯ ಮತ್ತು ಕೇಸು ಸಂಖ್ಯೆ) ತಮ್ಮ ವೆಬ್‌ಸೈಟ್‌ಗಳಲ್ಲಿ ವಿವರವಾಗಿ ಪ್ರಕಟಿಸಬೇಕು.
2. ಚುನಾವಣೆ ಗೆಲುವು ಹೊರತಾಗಿ ಅಭ್ಯರ್ಥಿಯು ಸ್ಪರ್ಧೆಗೆ ಅರ್ಹ ಎಂದು ಪರಿಗಣಿಸಲು ಇರುವ ಕಾರಣಗಳೇನು?- ಈ ಮಾಹಿತಿಯನ್ನು ಒಂದು ಸ್ಥಳೀಯ ಪತ್ರಿಕೆ, ಒಂದು ರಾಷ್ಟ್ರೀಯ ಪತ್ರಿಕೆ, ಫೇಸ್‌ಬುಕ್, ಟ್ವಿಟರ್ ರೀತಿಯ ಸಾಮಾಜಿಕ ಜಾಲತಾಣಗಳಲ್ಲಿನ ಪಕ್ಷಗಳ ಅಧಿಕೃತ ವೇದಿಕೆಯಲ್ಲಿ ಪ್ರಕಟಿಸಬೇಕು.
3. ಅಭ್ಯರ್ಥಿಯನ್ನು ಸ್ಪರ್ಧೆಗೆ ಆಯ್ಕೆ ಮಾಡಿದ 48 ತಾಸುಗಳ ಒಳಗಾಗಿ ಅಥವಾ ನಾಮಪತ್ರ ಸಲ್ಲಿಕೆ ಆರಂಭವಾದ ಮೊದಲ ದಿನಕ್ಕೆ 2 ವಾರ ಮುಂಚಿತವಾಗಿ ಈ ಮಾಹಿತಿ ಪ್ರಕಟಗೊಳ್ಳಬೇಕು
4. ಪ್ರಸ್ತುತ ನಿರ್ದೇಶನದಲ್ಲಿ ಸೂಚಿಸಿರುವ ಅಂಶಗಳನ್ನು ಅಭ್ಯರ್ಥಿಯನ್ನು ಆಯ್ಕೆ ಮಾಡಿದ 72 ತಾಸುಗಳ ಒಳಗಾಗಿ ಚುನಾವಣ ಆಯೋಗಕ್ಕೆ ಸಲ್ಲಿಸಬೇಕು.
5. ನ್ಯಾಯಾಲಯದ ನಿರ್ದೇಶನದ ಅನುಸಾರ ಮಾಹಿತಿ ನೀಡಲು ರಾಜಕೀಯ ಪಕ್ಷಗಳು ವಿಫಲವಾದರೆ, ಅದನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಲಿದ್ದು, ಚುನಾವಣ ಆಯೋಗ ಅದನ್ನು ಕೂಡಲೇ ಕೋರ್ಟ್‌ಗಮನಕ್ಕೆ ತರಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ
ರಾಜಸ್ಥಾನದಲ್ಲಿ ಮತ್ತೊಂದು ಬೋರ್ ವೆಲ್ ದುರಂತ… 150 ಅಡಿ ಆಳದಲ್ಲಿ ಸಿಲುಕಿದ 3 ವರ್ಷದ ಬಾಲಕಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Champions Trophy: ಕೊನೆಗೂ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆಗೊಳಿಸಿದ ಐಸಿಸಿ
Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.