ಇನ್ನು ಸುಪ್ರಿಂ ಕೋರ್ಟಿಗೆ ಎ4 ಹಾಳೆಯ ಎರಡೂ ಬದಿಯಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯ
Team Udayavani, Mar 13, 2020, 1:24 PM IST
ಹೊಸದಿಲ್ಲಿ: ಸುಪ್ರೀಂ ಕೋರ್ಟ್ನಲ್ಲಿ ಎ. 1ರಿಂದ ಎ4 ಗಾತ್ರದ ಹಾಳೆಯ ಎರಡೂ ಬದಿಯಲ್ಲಿ ಮುದ್ರಿಸಲಾದ ಅರ್ಜಿಗಳು ಹಾಗೂ ಅಫಿಡವಿಟ್ಗಳನ್ನು ಮಾತ್ರ ಸ್ವೀಕರಿಸಲಾಗುವುದು. ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಹಾಗೂ ಏಕರೂಪತೆ ತರಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೋಬ್ಡೆ ಜ. 14ರಂದು ಈ ಕುರಿತು ಸುಪ್ರೀಂ ಕೋರ್ಟ್ ರಿಜಿಸ್ಟ್ರಾರ್ ಅವರಿಗೆ ನಿರ್ದೇಶನ ನೀಡಿದ್ದರು.
ವಕೀಲರು ಎ4 ಸೈಜ್ನ ಹಾಳೆಗಳನ್ನು ಮಾತ್ರ ಬಳಸುವಂತೆ ಹೊರಡಿಸಿರುವ ಸುತ್ತೋಲೆಯನ್ನು ಸುಪ್ರೀಂಕೋರ್ಟ್ನ ವೆಬ್ಸೈಟ್ನಲ್ಲಿ ಗುರುವಾರ ಪ್ರಕಟಿಸಲಾಗಿದೆ. ಪ್ರಸ್ತುತ ಎ4 ಸೈಟ್ಗಿಂತ ಹೆಚ್ಚು ಗಾತ್ರದ ಹಾಳೆಗಳನ್ನು ಬಳಸಲಾಗುತ್ತಿದೆ. ಹಾಳೆಯ ಒಂದು ಬದಿಯನ್ನು ಖಾಲಿ ಬಿಡಲಾಗುತ್ತಿತ್ತು. ಇನ್ನು ಮುಂದೆ ಎರಡೂ ಬದಿಯನ್ನೂ ಬಳಸಿಕೊಳ್ಳಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.