ಡ್ಯಾನ್ಸ್‌ ಬಾರ್‌ ಬಿಗಿ ನಿಯಮ ರದ್ದುಗೊಳಿಸಿದ ಸುಪ್ರೀಂ

Team Udayavani, Jan 18, 2019, 12:30 AM IST

36.jpg

ಹೊಸದಿಲ್ಲಿ: ಮಹತ್ವದ ಬೆಳವಣಿಗೆ ಒಂದರಲ್ಲಿ ಮಹಾರಾಷ್ಟ್ರ ಸರಕಾರ‌ ಡ್ಯಾನ್ಸ್‌ ಬಾರ್‌ಗಳ ಮೇಲೆ ವಿಧಿಸಲಾಗಿದ್ದ ಕಠಿನ ನಿಯಮಗಳನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿದ್ದು, ನೃತ್ಯದ ಸ್ಥಳದಲ್ಲಿ ಮದ್ಯದ ಸರಬರಾಜಿಗೆ ಅನುಮತಿ ನೀಡಿದೆ. ಜತೆಗೆ, 2005ರಿಂದೀಚೆಗೆ ಡ್ಯಾನ್ಸ್‌ ಬಾರ್‌ಗಳಿಗೆ ಪರವಾನಿಗೆ ನೀಡದಿರುವ ಸರಕಾರ‌ದ ಕಠಿನ ನಿರ್ಧಾರಕ್ಕೆ ನ್ಯಾಯಮೂರ್ತಿಗಳಾದ ಎ.ಕೆ. ಸಿಕ್ರಿ ಮತ್ತು ಅಶೋಕ್‌ ಭೂಷಣ್‌ ಅವರುಳ್ಳ ಪೀಠ ತಡೆಯೊಡ್ಡಿದೆ. 

ಏನಿದು ಪ್ರಕರಣ?: 2015ರ ಆಗಸ್ಟ್‌ 15ರಂದು ರಾಜ್ಯದಲ್ಲಿ ಎಲ್ಲ ಡ್ಯಾನ್ಸ್‌ ಬಾರ್‌ಗಳನ್ನು ನಿಷೇಧಿಸಿ ಮಹಾರಾಷ್ಟ್ರ ಸರಕಾರ‌ ಆದೇಶ ಹೊರಡಿಸಿತ್ತು. ಪರಿಣಾಮ, ಮಹಾರಾಷ್ಟ್ರದಲ್ಲಿ 700 ಬಾರ್‌ಗಳು ಬಾಗಿಲು ಮುಚ್ಚಿದ್ದವು. ಅಲ್ಲದೆ, ಸುಮಾರು, 70,000ದಷ್ಟು ಬಾರ್‌ ನೃತ್ಯಗಾರ್ತಿಯರು ನಿರುದ್ಯೋಗಿಗಳಾಗಿದ್ದರು. 

ಕಾನೂನು ಸಮರ: ಸರಕಾರ‌ದ ನಿರ್ಧಾರದ ವಿರುದ್ಧ ಮಹಾರಾಷ್ಟ್ರ ಹೊಟೇಲ್‌ ಮತ್ತು ರೆಸ್ಟಾರೆಂಟ್‌ ಮಾಲೀಕರ ಸಂಘ 2006ರಲ್ಲಿ ಬಾಂಬೆ ಹೈಕೋರ್ಟ್‌ ಮೆಟ್ಟಿಲೇರಿತ್ತು. ಆಗ, ಮುಂಬಯಿ ಹೈಕೋರ್ಟ್‌ ಮಹಾರಾಷ್ಟ್ರ ಸರಕಾರ‌ದ ಆದೇಶವನ್ನು ರದ್ದುಗೊಳಿಸಿತ್ತು. ಹಾಗಾಗಿ, ಮಹಾರಾಷ್ಟ್ರ ಸರಕಾರ‌ ಸುಪ್ರೀಂ ಕೋರ್ಟ್‌ ಮೊರೆಹೋಗಿತ್ತು. 

ನ್ಯಾಯಪೀಠ ಹೇಳಿದ್ದೇನು? 
ವಿದ್ಯಾ ಸಂಸ್ಥೆಗಳು ಹಾಗೂ ಧಾರ್ಮಿಕ ಸ್ಥಳಗಳಿಂದ ಡ್ಯಾನ್ಸ್‌ ಬಾರ್‌ಗಳು 1 ಕಿ.ಮೀ. ವ್ಯಾಪ್ತಿಯಾಚೆಗೆ ಇರಬೇಕು ಎಂಬ ನಿಯಮ ರದ್ದು
ಡ್ಯಾನ್ಸ್‌ ಬಾರ್‌ಗಳಲ್ಲಿ ನೃತ್ಯಗಾತಿಯರಿಗೆ ಹಣವನ್ನು ಟಿಪ್ಸ್‌ ರೂಪದಲ್ಲಿ ನೀಡಬಹುದು. ಆದರೆ, ಅವರ ಮೇಲೆ ಹಣವನ್ನು ಎಸೆಯುವಂತಿಲ್ಲ
ಡ್ಯಾನ್ಸ್‌ ಬಾರ್‌ಗಳಲ್ಲಿ ಕುಣಿತದ ಸ್ಥಳ ಮತ್ತು ಮದ್ಯಪಾನದ ಸ್ಥಳ ಬೇರೆಯಾಗಿರಬೇಕೆಂಬ ನಿಯಮ ರದ್ದು
ಭದ್ರತೆಗಾಗಿ ಡ್ಯಾನ್ಸ್‌ ಬಾರ್‌ಗಳಲ್ಲಿ ಸಿಸಿಟಿವಿ ಕೆಮರಾಗಳನ್ನು ಅಳವಡಿಸುವುದು ಕಡ್ಡಾಯವೇನಿಲ್ಲ 
ಡ್ಯಾನ್ಸ್‌ ಬಾರ್‌ ಮಾಲೀಕ ಉತ್ತಮ ಚಾರಿತ್ರ್ಯವುಳ್ಳವನಾಗಿರಬೇಕು ಹಾಗೂ ಯಾವುದೇ ಅಪರಾಧ ಹಿನ್ನೆಲೆ ಇರಬಾರದೆಂಬ ನಿಯಮ ರದ್ದು
ಆದರೆ, ಪ್ರತಿ ಡ್ಯಾನ್ಸ್‌ ಬಾರ್‌ಗಳ ಅವಧಿಯನ್ನು ಸಂಜೆ 6ರಿಂದ ರಾತ್ರಿ 11:30ಕ್ಕೆ ನಿಗದಿಗೊಳಿಸಬಹುದು. 

ಡ್ಯಾನ್ಸ್‌ ಬಾರ್‌ಗಳ ಮಾಲಕರೊಂದಿಗೆ ಅನೈತಿಕ ನಂಟು ಹೊಂದಿರುವ ಮಹಾರಾಷ್ಟ್ರ ಸರಕಾರ‌, ಸುಪ್ರೀಂ ಕೋರ್ಟ್‌ಗೆ ತನ್ನ ವಾದಕ್ಕೆ ಪುಷ್ಟಿ ನೀಡುವಂಥ ದಾಖಲೆಗಳನ್ನು ನೀಡಿಲ್ಲ. ಹಾಗಾಗಿ, ವ್ಯತಿರಿಕ್ತ ತೀರ್ಪು ಬಂದಿದೆ. ಈಗ ಸಿಎಂ ಫ‌ಡ್ನವಿಸ್‌ ಅವರೇ ಡ್ಯಾನ್ಸ್‌ ಬಾರ್‌ಗಳು ಮತ್ತೆ ತಲೆ ಎತ್ತದಂತೆ ಕಠಿಣ ಕ್ರಮ ಕೈಗೊಳ್ಳಬೇಕಿದೆ. 
ನವಾಬ್‌ ಮಲಿಕ್‌, ಎನ್‌ಸಿಪಿ ನಾಯಕ

ಸರಕಾರ‌ದ ಎಲ್ಲ ನಿಬಂಧನೆಗಳನ್ನೂ ಸುಪ್ರೀಂ ಕೋರ್ಟ್‌ ರದ್ದು ಮಾಡಿಲ್ಲ. ಕೆಲವನ್ನು ಉಳಿಸಿಕೊಂಡು, ಕೆಲವನ್ನು ಮಾತ್ರ ವಜಾ ಮಾಡಿದೆ. ಇದೊಂದು ಮಿಶ್ರ ತೀರ್ಪು.
 ದೇವೇಂದ್ರ ಫ‌ಡ್ನವೀಸ್‌, ಮಹಾರಾಷ್ಟ್ರ ಸಿಎಂ

ಸುಪ್ರೀಂ ಕೋರ್ಟ್‌ನಲ್ಲಿ ಮಹಾರಾಷ್ಟ್ರ ಸರಕಾರ‌ಕ್ಕೆ ಹಿನ್ನಡೆ
ಡ್ಯಾನ್ಸ್‌ ಬಾರ್‌ಗಳಿಗೆ ಲೈಸನ್ಸ್‌ ವಿತ ರಿಸದ ಕ್ರಮಕ್ಕೆ ತಡೆ

ಟಾಪ್ ನ್ಯೂಸ್

ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

Divorce: ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

11-alnavar

Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು

6

Mangaluru: ಕರಾವಳಿ ಖಗೋಳ ಉತ್ಸವ; ಉಲ್ಕಾ ತುಣುಕು, ನಕ್ಷತ್ರ ವೀಕ್ಷಣೆ ಅವಕಾಶ

5

Bajpe: ಇನ್ಮುಂದೆ ದೀಪಗಳಿಂದ ಬೆಳಗ‌ಲಿದೆ ವಿಮಾನ ನಿಲ್ದಾಣ ರಸ್ತೆ

ulock

Sandalwood: ಅನ್‌ಲಾಕ್‌ ರಾಘವದಿಂದ ಲಾಕ್‌ ಸಾಂಗ್‌ ಬಂತು

yogaraj bhat song in Manada kadalu movie

Manada Kadalu: ಭಟ್ರು ಬರೆದ ಅನರ್ಥ ಹಾಡು: ಮನದ ಕಡಲಿನಲ್ಲಿ ತುರ್ರಾ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.