ಹಣ ವಂಚನೆ: ರಜನೀಕಾಂತ್ ಪತ್ನಿ ವಿರುದ್ಧ ವಿಚಾರಣೆಗೆ ಸುಪ್ರೀಂ ಆದೇಶ
Team Udayavani, Jul 10, 2018, 7:00 PM IST
ಚೆನ್ನೈ : ಸೂಪರ್ ಸ್ಟಾರ್ ರಜನೀಕಾಂತ್ ಅವರ ಪತ್ನಿ ಲತಾ ರಜನೀಕಾಂತ್ ಅವರನ್ನು ವಂಚನೆ ಆರೋಪಕ್ಕೆ ಸಂಬಂಧಿಸಿ ವಿಚಾರಣೆಗೆ ಗುರಿಪಡಿಸಲು ಸರ್ವೋಚ್ಚ ನ್ಯಾಯಾಲಯ ಇಂದು ಮಂಗಳವಾರ ಆದೇಶಿಸಿದೆ.
ರಜನೀಕಾಂತ್ ಪತ್ನಿ ಲತಾ ಅವರು ಜಾಹೀರಾತು ಸಂಸ್ಥೆಯೊಂದಕ್ಕೆ 6.20 ಕೋಟಿ ರೂ. ಬಾಕಿ ಇರಿಸಿಕೊಂಡಿದ್ದಾರೆ ಎನ್ನಲಾಗಿದ್ದು ಆ ಪ್ರಕರಣದಲ್ಲಿ ಲತಾ ಅವರ ವಿರುದ್ಧ ತನಿಖೆ ನಡೆಯಲಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ರಂಜನ್ ಗೊಗೋಯಿ ನೇತೃತ್ವದ ಪೀಠ, ಲತಾ ಅವರ ತನಿಖೆಗೆ ಆದೇಶಿಸಿದೆ.
ಇದಕ್ಕೂ ಮೊದಲು ಕರ್ನಾಟಕ ಹೈಕೋರ್ಟ್ ಈ ಪ್ರಕರಣದಲ್ಲಿ ಲತಾ ವಿರುದ್ಧದ ವಿಚಾರಣೆಗೆ ತಡೆ ನೀಡಿತ್ತು. ಇದು ಹಣ ವಂಚನೆ ಪ್ರಕರಣ ಅಲ್ಲ; ಬದಲು ಒಪ್ಪಂದದ ಉಲ್ಲಂಘನೆ ಮಾತ್ರವೇ ಆಗಿದೆ ಎಂದು ಹೈಕೋರ್ಟ್ ಹೇಳಿತ್ತು.
ಆ ಬಳಿಕ ಈ ವಿವಾದ ಸುಪ್ರೀಂ ಮೆಟ್ಟಲೇರಿತ್ತು. ಕರ್ನಾಟಕ ಹೈಕೋರ್ಟ್ ಆದೇಶವನ್ನು ಸದ್ಯ ಸವೋಚ್ಚ ನ್ಯಾಯಾಲಯ ರದ್ದು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಪತ್ನಿಯನ್ನು ಕೊಂದು ದೇಹವನ್ನು ತುಂಡರಿಸಿ ಕುಕ್ಕರ್ ನಲ್ಲಿ ಬೇಯಿಸಿದ ನಿವೃತ್ತ ಯೋಧ
Mumbai: ಸೈಫ್ ಮೇಲೆ ಹಲ್ಲೆಗೆ ಬಳಸಿದ್ದ ಚಾಕುವಿನ ಮೂರನೇ ಭಾಗ ಬಾಂದ್ರಾ ಕೆರೆ ಬಳಿ ಪತ್ತೆ
Holy Dip: ಮಹಾಕುಂಭದಲ್ಲಿ ಸಿಎಂ ಯೋಗಿ ಸಂಪುಟ ಸದಸ್ಯರ ಪವಿತ್ರ ಸ್ನಾನ
Crew Module: ಗಗನಯಾನಕ್ಕೆ ಮಾನವರನ್ನು ಕರೆದೊಯ್ಯುವ ನೌಕೆ ಶ್ರೀಹರಿಕೋಟಾಕ್ಕೆ ರವಾನೆ
Mosque Survey: ಮಥುರಾ ಮಸೀದಿ ಸಮೀಕ್ಷೆ… ಸುಪ್ರೀಂ ತಡೆಯಾಜ್ಞೆ ಮುಂದುವರಿಕೆ
MUST WATCH
ಹೊಸ ಸೇರ್ಪಡೆ
Rohit, Pant, Jaiswal, Gill: ರಣಜಿ ಪುನರಾಗಮನದಲ್ಲಿ ವೈಫಲ್ಯ ಕಂಡ ಟೀಂ ಇಂಡಿಯಾ ಸ್ಟಾರ್ಸ್
UV Fusion: ಸ್ವಾಮಿ ವಿವೇಕಾನಂದರ ಕನಸಿನ ರಾಷ್ಟ್ರನಿರ್ಮಾಣದಲ್ಲಿ ಯುವಜನತೆಯ ಪಾತ್ರ
Tumkur: ತುಮುಲ್ ಅಧ್ಯಕರಾಗಿ ಕೈ ಬೆಂಬಲಿತ ಅಭ್ಯರ್ಥಿ ಗೆಲುವು
Tollywood: ಹಾಲಿವುಡ್‌ಗೆ ಜೂ. ಎನ್‌ಟಿಆರ್ ಎಂಟ್ರಿ? ಖ್ಯಾತ ನಿರ್ದೇಶಕ ಹೇಳಿದ್ದೇನು?
Shiva Rajkumar: ಜ.26ಕ್ಕೆ ಶಿವಣ್ಣ ವಾಪಸ್: ಸ್ವಾಗತಕ್ಕೆ ಅದ್ಧೂರಿ ತಯಾರಿ