ಇ.ಡಿ. ಪ್ರಕರಣದಲ್ಲೂ ಚಿದಂಬರಂಗೆ ನಿರೀಕ್ಷಣಾ ಜಾಮೀನು ನೀಡಲು ಸುಪ್ರೀಂ ನಕಾರ
Team Udayavani, Sep 5, 2019, 11:04 AM IST
ನವದೆಹಲಿ: ಐಎನ್ ಎಕ್ಸ್ ಮೀಡಿಯಾ ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂಗೆ ಕಾನೂನು ಹೋರಾಟದಲ್ಲಿ ಭಾರೀ ಹಿನ್ನಡೆಯಾಗಿದ್ದು, ಇ.ಡಿ. ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡಲು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿದೆ.
ಇ.ಡಿ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪೀಠ, ಇದು ನಿರೀಕ್ಷಣಾ ಜಾಮೀನು ನೀಡುವ ಪ್ರಕರಣವಲ್ಲ ಎಂದು ತಿಳಿಸಿದೆ.
ಆರ್ಥಿಕ ಅಪರಾಧಗಳು ವಿವಿಧ ಮಜಲುಗಳನ್ನು ಹೊಂದಿರುತ್ತದೆ. ಹಣಕಾಸು ಅವ್ಯವಹಾರಗಳ ವಿಚಾರದಲ್ಲಿ ನಿರೀಕ್ಷಣಾ ಜಾಮೀನು ನೀಡುವುದರಿಂದ ತನಿಖೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯವ್ಯಕ್ತಪಡಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಚಿದಂಬರಂ ವಿಚಾರಣಾ ಕೋರ್ಟ್ ನಲ್ಲಿ ರೆಗ್ಯುಲರ್ ಜಾಮೀನಿಗಾಗಿ ಅರ್ಜಿ ಸಲ್ಲಿಸಬಹುದು ಎಂದು ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.