ಆಧಾರ್ ಮಾನ್ಯತೆ ತೀರ್ಪು ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
Team Udayavani, Jan 21, 2021, 7:10 AM IST
ಹೊಸದಿಲ್ಲಿ: ಆಧಾರ್ನ ಸಾಂವಿಧಾನಿಕ ಮಾನ್ಯತೆ ಬಗ್ಗೆ 2018ರಲ್ಲಿ ನೀಡಿದ ತೀರ್ಪನ್ನು ಮತ್ತೂಮ್ಮೆ ಪರಿಶೀಲಿಸಬೇಕು ಎಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ತಿರಸ್ಕರಿ ಸಿದೆ. ನ್ಯಾ| ಎ.ಎಂ.ಖಾನ್ವಿಲ್ಕರ್ ನೇತೃತ್ವದ ನ್ಯಾಯಪೀಠ 4:1ರ ಅನುಪಾತದಲ್ಲಿ ತೀರ್ಪು ಮರು ಪರಿಶೀಲನೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಪರಿಗಣಿಸಲು ನಿರಾಕರಿಸಿತು. ಪೀಠದಲ್ಲಿದ್ದ ನ್ಯಾ| ಡಿ.ವೈ.ಚಂದ್ರಚೂಡ್ ವಜಾಗೊಳಿಸುವ ನಿರ್ಧಾ ರಕ್ಕೆ ಆಕ್ಷೇಪ ಮಾಡಿದ್ದಾರೆ. ವಿಸ್ತೃತ ನ್ಯಾಯ ಪೀಠ ಆಧಾರ್ ಬಗೆಗಿನ ಅರ್ಜಿಗಳನ್ನು ವಿಚಾರಣೆ ಮಾಡುವ ವರೆಗೆ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ ಎಂದು ತೀರ್ಪಿನಲ್ಲಿ ಉಲ್ಲೇಖೀಸಿದ್ದಾರೆ. 2ಸಿಬಿಎಸ್ಇ, ನೀಟ್, ಜೆಇಇ, ಯುಜಿಸಿ ಪರೀಕ್ಷೆಗಳಿಗೆ, ಶಾಲೆಗ ಳಿಗೆ ಮಕ್ಕಳನ್ನು ಸೇರಿಸುವ ಮತ್ತು ಉಚಿತ ವಾಗಿ ಶಿಕ್ಷಣ ಪಡೆಯುವ ವ್ಯವಸ್ಥೆಗೆ ಆಧಾರ್ ಕಡ್ಡಾಯವಲ್ಲ ಎಂದು ನ್ಯಾಯಪೀಠ ಅಭಿಪ್ರಾಯ ಪಟ್ಟಿದೆ.
2018ರ ಸೆ.16ರಂದು ಸುಪ್ರೀಂ ಕೋರ್ಟ್ ಆಧಾರ್ನ ಸಾಂವಿಧಾನಿಕ ಮಾನ್ಯತೆಯನ್ನು ಎತ್ತಿಹಿಡಿದಿತ್ತು. ಜತೆಗೆ ಸಂಸತ್ನಲ್ಲಿಯೂ ಅದನ್ನು ಹಣಕಾಸಿನ ಮಸೂದೆ ಎಂದು ಪರಿಗಣಿಸಿ ಅಂಗೀಕರಿಸಲಾಗಿತ್ತು. ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ, ಪ್ಯಾನ್ ಕಾರ್ಡ್ಗೆ ಆಧಾರ್ ಕಡ್ಡಾಯ ಎಂದು ಅಂದಿನ ಸಿಜೆಐ ನ್ಯಾ| ದೀಪಕ್ ಮಿಶ್ರಾ ನೇತೃತ್ವದ ಪೀಠ ತೀರ್ಪು ನೀಡಿತ್ತು. ಬ್ಯಾಂಕ್ ಖಾತೆ ತೆರೆಯಲು, ಮೊಬೈಲ್ ಸಂಪರ್ಕ ಸೇರಿದಂತೆ ಹಲವು ವ್ಯವಸ್ಥೆಗಳಿಗೆ ಆಧಾರ್ ಕಡ್ಡಾಯವಲ್ಲ ಎಂದು ತೀರ್ಪಿನಲ್ಲಿ ಉಲ್ಲೇಖೀಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.