ತ.ನಾಡಿಗೆ ಸುಪ್ರೀಂ ಹಿನ್ನಡೆ
Team Udayavani, Dec 14, 2018, 6:00 AM IST
ಹೊಸದಿಲ್ಲಿ: ಮೇಕೆ ದಾಟು ಅಣೆಕಟ್ಟು ಯೋಜನೆ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ತಮಿಳು ನಾಡಿಗೆ ತೀವ್ರ ಮುಖಭಂಗವಾಗಿದೆ. ಮೇಕೆದಾಟುವಿನಲ್ಲಿ ಅಣೆಕಟ್ಟು ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಲ್ಲಿಸುವಂತೆ ಕೇಂದ್ರ ಜಲ ಆಯೋಗ ನೀಡಿರುವ ಅನುಮತಿಗೆ ತಡೆ ನೀಡಬೇಕು ಎಂಬ ತಮಿಳುನಾಡು ಸರಕಾರದ ಮನವಿಯನ್ನು ಬುಧವಾರ ಸುಪ್ರೀಂಕೋರ್ಟ್ ತಳ್ಳಿ ಹಾಕಿದೆ. ಡಿಪಿಆರ್ ಸಲ್ಲಿಕೆ ಅಂದರೆ ಯೋಜನೆಗೆ ಅನುಮತಿ ನೀಡಿ ದಂತಲ್ಲ ಎಂದು ನ್ಯಾ| ಎ.ಎಂ. ಖಾನ್ವಿಲ್ಕರ್ ಅವರನ್ನೊಳಗೊಂಡ ಪೀಠ ಅಭಿಪ್ರಾಯಪಟ್ಟಿದೆ. ಹೀಗಾಗಿ ಕರ್ನಾಟಕ ನ್ಯಾಯಾಂಗ ನಿಂದನೆ ಎಸಗಿದೆ ಎಂದು ಕೇಸು ಹಾಕಿದ್ದ ತಮಿಳುನಾಡಿಗೆ ಹಿನ್ನಡೆ ಉಂಟಾಗಿದೆ. ಜತೆಗೆ ನಾಲ್ಕು ವಾರಗಳ ಒಳಗಾಗಿ ಪ್ರತಿಕ್ರಿಯೆ ನೀಡುವಂತೆ ಕರ್ನಾಟಕ ಮತ್ತು ಕೇಂದ್ರ ಸರಕಾರಕ್ಕೆ ಸುಪ್ರೀಂ ನೋಟಿಸ್ ನೀಡಿದೆ. ರಾಜ್ಯ ಸರಕಾರದ ಪರವಾಗಿ ವಾದಿಸಿದ ಅಡ್ವೊ ಕೇಟ್ ಜನರಲ್ ಉದಯ ಹೊಳ್ಳ, ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕೇವಲ ಯೋಜನಾ ವರದಿ ಸಿದ್ಧತೆಗೆ ಅನುಮತಿ ಸಿಕ್ಕಿದೆ. ಈ ಸಂದರ್ಭ ನೆರೆ ರಾಜ್ಯದ ಅಭಿಪ್ರಾಯ ಪಡೆಯಲಾಗುತ್ತದೆ ಎಂದಿದ್ದಾರೆ.
ಕೇಂದ್ರದ ಪರವಾಗಿ ವಾದಿಸಿದ ಡಬ್ಲೂ.ಎ. ಖಾದ್ರಿ, ಸುಪ್ರೀಂ ಆದೇಶದನ್ವಯ ಡಿಪಿಆರ್ ಸಲ್ಲಿಸಬಹುದು. ಈ ಬಗ್ಗೆ ಅಭಿಪ್ರಾಯ ಸಲ್ಲಿಸಲು ಸಮಯ ನೀಡಬೇಕು ಎಂದು ನ್ಯಾಯಪೀಠಕ್ಕೆ ಅರಿಕೆ ಮಾಡಿಕೊಂಡರು. ಅಂತಿಮವಾಗಿ ಸುಪ್ರೀಂ ಕೋರ್ಟ್ ಡಿಪಿಆರ್ ಬಗ್ಗೆ ತಿಂಗಳೊಳ ಗಾಗಿ ಉತ್ತರ ನೀಡುವಂತೆ ಕೋರ್ಟ್ ನೋಟಿಸ್ ನೀಡಿತು. ನ. 22ರಂದು ಕೇಂದ್ರ ಜಲ ಆಯೋಗ ಡಿಪಿಆರ್‌ಗಾಗಿ ಅನುಮತಿ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್’
iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
Kumbra ಜಂಕ್ಷನ್‌ನಲ್ಲಿ ಈಗ ಸೆಲ್ಫಿ ಪಾಯಿಂಟ್ ಆಕರ್ಷಣೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.