ಅಯೋಧ್ಯೆ ಸಾಧಾರಣ ಭೂ ವಿವಾದ: ಸುಪ್ರೀಂಕೋರ್ಟ್
Team Udayavani, Feb 9, 2018, 9:10 AM IST
ಹೊಸದಿಲ್ಲಿ: ದಶಕಗಳಿಂದ ಚಾಲ್ತಿಯಲ್ಲಿರುವ ರಾಮ ಜನ್ಮಭೂಮಿ- ಬಾಬ್ರಿ ಮಸೀದಿ ವಿವಾದ ಪ್ರಕರಣವು ಸಾಧಾ ರಣ ಭೂವಿವಾದವಾಗಿದ್ದು, ಅದನ್ನು ಸಹಜ ಕಲಾಪದಂ ತೆಯೇ ವಿಚಾರಣೆಗೊಳಪಡಿಸಿ ಇತ್ಯರ್ಥಪಡಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಪ್ರಕರಣದ ಅಂತಿಮ ಹಂತದ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ, ಗುರುವಾರ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಯಿತು. ಈ ವೇಳೆ, ಅಲಹಾಬಾದ್ ಹೈಕೋರ್ಟ್‌ನಲ್ಲಿ ಈ ಪ್ರಕರಣವಿದ್ದಾಗ, ಪ್ರಕರಣದ ಕಕ್ಷಿದಾರರಾಗಿದ್ದವರೇ ಸುಪ್ರೀಂ ಕೋರ್ಟ್ ವಿಚಾರಣೆಯಲ್ಲೂ ಕಕ್ಷಿದಾರರಾಗಿರಬೇಕೆಂದು, ಇತ್ತೀಚೆಗೆ ಪ್ರಕರಣದ ಬಗ್ಗೆ ವಿವಿಧ ನಾಗರಿಕರು, ಸಂಸ್ಥೆಗಳು ಸಲ್ಲಿಸಿರುವ ಮನವಿಗಳನ್ನು ಆನಂತರ ಪರಿಗಣಿಸಲಾಗುವುದು ಎಂದು ನ್ಯಾಯಪೀಠ ಸೂಚಿಸಿತು. ಅಲ್ಲದೆ, ಹೊಸ ಕಕ್ಷಿದಾರರು ಸಲ್ಲಿಸಿರುವ ದಾಖಲೆಗಳನ್ನು ಇಂಗ್ಲೀಷ್‌ಗೆ ತರ್ಜುಮೆ ಮಾಡಿ 2 ವಾರಗಳ ಒಳಗೆ ನೀಡುವಂತೆ ನ್ಯಾಯಪೀಠ ಸೂಚಿಸಿತು. ನಂತರ ಮುಂದಿನ ವಿಚಾರಣೆ ಮಾ.14ಕ್ಕೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ
ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ
INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್: ಕೊನೆಯಲ್ಲಿ ಕಾಡಿದ ಲಿಯಾನ್- ಬೊಲ್ಯಾಂಡ್
Diabetes ನಿರ್ವಹಣೆ; ನಿಮ್ಮ ಊಟದ ಬಟ್ಟಲು ಸಮತೋಲಿತವಾಗಿರಲಿ
Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್ ಆಯುಕ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.