Article 370 ವಿಧಿ ರದ್ದು ಪ್ರಶ್ನಿಸಿದ ಅರ್ಜಿ ಜು.11ಕ್ಕೆ ವಿಚಾರಣೆ
Team Udayavani, Jul 4, 2023, 7:20 AM IST
ಹೊಸದಿಲ್ಲಿ: 370ನೇ ವಿಧಿ ಅನ್ವಯ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಜು. 11ರಂದು ಸುಪ್ರೀಂ ಕೋರ್ಟ್ನ ಪಂಚಸದಸ್ಯ ಸಂವಿಧಾನ ಪೀಠವು ವಿಚಾರಣೆ ನಡೆಸಲಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ನೇತೃತ್ವದಲ್ಲಿ, ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್, ನ್ಯಾ| ಸಂಜೀವ್ ಖನ್ನಾ, ನ್ಯಾ. ಬಿ.ಆರ್.ಗವಾಯಿ, ನ್ಯಾ| ಸೂರ್ಯಕಾಂತ್ ಅವರನ್ನೊಳಗೊಂಡ ಪೀಠ ಅರ್ಜಿಗಳನ್ನು ಆಲಿಸಲಿದೆ. ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಭಾರತೀಯ ಆಡಳಿತ ಸೇವೆ (ಐಎಎಸ್) ಅಧಿಕಾರಿ ಶಾ ಫೈಸಲ್ ಅವರ ಅರ್ಜಿಯೂ ಒಂದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2019ರ ಆಗಸ್ಟ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು 370ನೇ ವಿಧಿ ರದ್ದುಗೊಳಿಸುವ ಮೂಲಕ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ತೆಗದುಹಾಕಿತ್ತು. ಬಳಿಕ ಜಮ್ಮು-ಕಾಶ್ಮೀರ ಹಾಗೂ ಲಡಾಖ್ ಅನ್ನು ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.