ಕಂಬಳ ಕುರಿತು ಪ್ರತಿಕ್ರಿಯೆ ನೀಡಲು ಸುಪ್ರೀಂ ಸೂಚನೆ
Team Udayavani, Dec 8, 2018, 6:55 AM IST
ನವದೆಹಲಿ: ಕಂಬಳಕ್ಕೆ ಅನುಮತಿ ನೀಡಿ ಕರ್ನಾಟಕ ಸರ್ಕಾರ ಹೊರಡಿಸಿರುವ ಕಾನೂನು ಮಾನ್ಯತೆಯನ್ನು ಪ್ರಶ್ನಿಸಿ ಪ್ರಾಣಿ
ದಯಾ ಸಂಘಟನೆ ಪೆಟಾ ಸಲ್ಲಿಸಿರುವ ಅರ್ಜಿಯ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರ ಹಾಗೂ ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ನೋಟಿಸ್ ಹೊರಡಿಸಿದೆ.
ಶುಕ್ರವಾರ ಈ ಅರ್ಜಿಯನ್ನು ನ್ಯಾಯ ಮೂರ್ತಿಗಳಾದ ಮದನ್ ಲೋಕೂರ್ ಹಾಗೂ ದೀಪಕ್ ಗುಪ್ತಾ ಅವರಿದ್ದ ಪೀಠ ವಿಚಾರಣೆಗೆ ಕೈಗೆತ್ತಿಕೊಂಡಿತು. ಕಳೆದ ಫೆಬ್ರವರಿಯಲ್ಲೇ ಈ ಪ್ರಕರಣವನ್ನು ತಮಿಳುನಾಡಿನ ಜಲ್ಲಿಕಟ್ಟು ಹಾಗೂ ಮಹಾರಾಷ್ಟ್ರದ ಎತ್ತಿನ ಗಾಡಿ ರೇಸ್ ವಿರೋಧಿಸಿ ಸಲ್ಲಿಸಲಾದ ಬಾಕಿ ಅರ್ಜಿಗಳೊಂದಿಗೆ ಸೇರಿಸಿತ್ತು.
1960 ರ ಪ್ರಾಣಿಗಳ ಮೇಲಿನ ಹಿಂಸೆ ತಡೆ ಕಾನೂನಿನ ಮೂಲ ಅಂಶಕ್ಕೆ ಕರ್ನಾಟಕ ಹೊರಡಿಸಿರುವ ಕಾನೂನು ವಿರುದ್ಧವಾಗಿದೆ. ಈ ಕಾಯ್ದೆಯಲ್ಲಿ ಪ್ರಾಣಿಗಳ ಮೇಲೆ ಕ್ರೌರ್ಯ ನಡೆಸುವುದನ್ನು ಅನುಮೋದಿಸಲಾಗಿದೆ ಎಂದು ಪೆಟಾ ತನ್ನ ಅರ್ಜಿಯಲ್ಲಿ ಆರೋಪಿಸಿದೆ. ಕಂಬಳಕ್ಕೆ ಅನುಮತಿ ನೀಡಿ ಪ್ರಾಣಿಗಳ ಮೇಲೆ ಹಿಂಸೆ ತಡೆ ಕಾಯ್ದೆ 2017ಕ್ಕೆ ಕರ್ನಾಟಕ ಸರ್ಕಾರ ತಿದ್ದುಪಡಿ ತಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.