‘ಒಪ್ಪುವ’ ಮಹಿಳೆ ಬಾಡಿಗೆ ತಾಯಿಯಾಗಬಹುದು
Team Udayavani, Feb 6, 2020, 7:53 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Usedg
ಹೊಸದಿಲ್ಲಿ: ಹತ್ತಿರದ ಸಂಬಂಧಿಗಳು ಮಾತ್ರವಲ್ಲದೆ, ಯಾವುದೇ ಒತ್ತಡಗಳಿಗೆ ಒಳಗಾಗದೆ ‘ಒಪ್ಪಿಕೊಳ್ಳುವ’ ಯಾವುದೇ ಮಹಿಳೆಗೆ ಬೇಕಾದರೂ ಬಾಡಿಗೆ ತಾಯಿಯಾಗಲು ಅವಕಾಶ ನೀಡಬಹುದು ಎಂದು ಸಂಸದೀಯ ಸಮಿತಿ ತಿಳಿಸಿದೆ.
ಬಾಡಿಗೆ ತಾಯ್ತನ (ನಿಯಂತ್ರಣ) ಕಾಯ್ದೆ-2019 ಕುರಿತಂತೆ ರಚನೆಯಾಗಿರುವ ರಾಜ್ಯಸಭೆಯ 23 ಸದಸ್ಯರನ್ನು ಒಳಗೊಂಡ ಸಮಿತಿ ಈ ಶಿಫಾರಸು ಮಾಡಿದೆ. ಅಲ್ಲದೆ, ಯಾವುದೇ ಸುರಕ್ಷತೆಗಳಿಲ್ಲದೆ ಲೈಂಗಿಕ ಕ್ರಿಯೆ ನಡೆಸಿದ ಹೊರತಾಗಿಯೂ ದಂಪತಿಗೆ ಮಕ್ಕಳಾಗದಿದ್ದರೆ ‘ಬಂಜೆತನ’ ಎಂದು ಘೋಷಿಸಲು ಇರುವ ಐದು ವರ್ಷಗಳ ಅವಧಿಯನ್ನು ಕಡಿತಗೊಳಿಸಬೇಕು.
ದಂಪತಿ ಮಗುವನ್ನು ಪಡೆಯಲು ಇಷ್ಟು ದೀರ್ಘ ಅವಧಿವರೆಗೆ ಕಾಯುವ ಅಗತ್ಯವಿಲ್ಲ ಎಂದೂ ಸಮಿತಿ ಅಭಿಪ್ರಾಯಪಟ್ಟಿದೆ. ಹಾಗೇ 35ರಿಂದ 45 ವರ್ಷದೊಳಗಿನ ವಿಧವೆ ಅಥವಾ ವಿಚ್ಛೇದಿತ ‘ಭಾರತೀಯ ಒಂಟಿ ಮಹಿಳೆ’ಗೆ ಸಹ ಬಾಡಿಗೆ ತಾಯ್ತನದ ಪ್ರಯೋಜನ ಪಡೆಯುವ ಅವಕಾಶ ನೀಡಬೇಕು. ಹಾಗೇ ಹತ್ತಿರದ ಸಂಬಂಧಿಗಳು ಮಾತ್ರ ಬಾಡಿಗೆ ತಾಯಂದಿರಾಗಬೇಕು ಎನ್ನುವುದರಿಂದ ಹಲವರನ್ನು ಅವಕಾಶ ವಂಚಿತರನ್ನಾಗಿ ಮಾಡಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.