ನಗರ ಪ್ರದೇಶಗಳಲ್ಲಿ ಹೈಸ್ಕೂಲ್ ಪ್ರಾಯದಲ್ಲೇ ‘ಸೆಕ್ಸ್’ ಅನುಭವ !


Team Udayavani, Feb 13, 2019, 9:09 AM IST

sex-chart-13-2.jpg

ನಮ್ಮ ದೇಶದಲ್ಲಿ ‘ಸೆಕ್ಸ್’ ಅಥವಾ ಲೈಂಗಿಕತೆಯ ಬಗ್ಗೆ ಮುಕ್ತವಾಗಿ ಮಾತನಾಡುವುದೇ ಅಪರಾಧ ಎನ್ನುವಂತಹ ಸ್ಥಿತಿ ಇದೆ. ಆದರೆ ಕಾಲ ಬದಲಾದಂತೆ ಮತ್ತು ಮಾಹಿತಿ ತಂತ್ರಜ್ಞಾನ ಮನೆ ಮನೆಗಳಿಗೆ ತಲುಪುತ್ತಿರುವಂತೆ ಇತ್ತೀಚಿನ ದಿನಗಳಲ್ಲಿ ನಿಧಾನವಾಗಿ ನಮ್ಮ ಯುವಜನಾಂಗ ‘ಸೆಕ್ಸ್’ ಕುರಿತಾದ ಮಡಿವಂತಿಕೆಯಿಂದೆ ದೂರ ಸರಿಯುತ್ತಿದೆ ಮಾತ್ರವಲ್ಲದೆ ಪಾಶ್ಚಿಮಾತ್ಯ ದೇಶಗಳಲ್ಲಿರುವಂತೆ ವಿವಾಹ ಪೂರ್ವ ಲೈಂಗಿಕ ಚಟುವಟಿಕೆಗಳನ್ನು ಸಹಜವಾಗಿ ಒಪ್ಪಿಕೊಳ್ಳುವ ಮನಸ್ಥಿತಿ ನಮ್ಮಲ್ಲೂ ಮೂಡಿಬರುತ್ತಿದೆ.

ಇದಕ್ಕೆ ಪುಷ್ಠಿ ನೀಡುವಂತೆ, ‘ವಿಟಮಿನ್ ಸ್ತ್ರೀ’ ಎಂಬ ಯೂ ಟ್ಯೂಬ್ ಚಾನೆಲ್ ನಮ್ಮ ದೇಶದ ನಗರ ಪ್ರದೇಶಗಳಲ್ಲಿ ಸಮೀಕ್ಷೆಯೊಂದನ್ನು ನಡೆಸಿತ್ತು. ಈ ಸಮೀಕ್ಷೆಯಿಂದ ಹೊರಬಿದ್ದ ಮಾಹಿತಿಗಳು ಬಹಳ ಕುತೂಹಲಕರವಾಗಿತ್ತು ಮಾತ್ರವಲ್ಲದೇ ಇವತ್ತಿನ ವಿದ್ಯಾರ್ಥಿ ಸಮುದಾಯ ಮತ್ತು ಯುವಸಮೂಹ ಯಾವ ರೀತಿಯಲ್ಲಿ ಅಂತರ್ಜಾಲ ಮಾಧ್ಯಮ ಪ್ರಭಾವಕ್ಕೊಳಪಟ್ಟಿದೆ ಎಂಬ ಅಂಶವನ್ನೂ ಇದು ಹೊರಗೆಡಹಿದೆ. ಈ ಸಮೀಕ್ಷೆಯಿಂದ ಹೊರಬಿದ್ದ ಒಂದು ಕುತೂಹಲಕಾರಿ ಮಾಹಿತಿಯೆಂದರೆ ನಮ್ಮ ದೇಶದ ನಗರ ಪ್ರದೇಶಗಳಲ್ಲಿ ವಾಸಿಸುವ ಅಪ್ರಾಪ್ತರಲ್ಲಿ 46 ಪರ್ಸಂಟೇಜ್ ಜನ ತಮ್ಮ 13ನೇ ವರ್ಷದಲ್ಲಿಯೇ ‘ಸೆಕ್ಸ್’ ವಿಚಾರಗಳ ಕುರಿತು ತಿಳಿದುಕೊಂಡಿರುತ್ತಾರೆ ಎಂಬುದು. ಇಷ್ಟು ಮಾತ್ರವಲ್ಲದೇ ಇನ್ನೊಂದು ಆತಂಕಕಾರಿ ವಿಚಾರವೆಂದರೆ ಇವರಲ್ಲಿ ಹೆಚ್ಚಿನ ಸಂಖ್ಯೆಯ ಅಪ್ರಾಪ್ತರು ತಾವು ಅಸುರಕ್ಷಿತ ಲೈಂಗಿಕ ಚಟುವಟಿಕೆಗಳನ್ನು ನಡೆಸಿರುವುದಾಗಿ ಒಪ್ಪಿಕೊಂಡಿದ್ದಾರೆ. ಇನ್ನು, ನಗರ ಪ್ರದೇಶದಲ್ಲಿರುವ 50 ಪ್ರತಿಶತದಷ್ಟು ಅಪ್ರಾಪ್ತರು 14 ರಿಂದ 18 ವರ್ಷ ಪ್ರಾಯದಲ್ಲೇ ತಮ್ಮ ಲೈಂಗಿಕ ಪಾವಿತ್ರ್ಯತೆಯನ್ನು (ವರ್ಜಿನಿಟಿ) ಕಳೆದುಕೊಳ್ಳುತ್ತಿದ್ದಾರೆ ಎಂಬ ಅಂಶವೂ ಈ ಸಮೀಕ್ಷೆಯಿಂದ ಬಯಲಾಗಿದೆ.

 

ಕಳೆದ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ಈ ಆನ್ ಲೈನ್ ಸಮೀಕ್ಷೆಯನ್ನು ನಡೆಸಲಾಗಿತ್ತು. ಸುಮಾರು 2,500 ಜನರನ್ನು ಸಂಪರ್ಕಿಸಿ ಮಾಹಿತಿಗಳನ್ನು ಪಡೆದುಕೊಳ್ಳಲಾಗಿತ್ತು. ಇವರಲ್ಲಿ 235 ಜನರು ತಮ್ಮನ್ನು ಉಭಯಲಿಂಗ ರತಿಗಳೆಂದು (ಹೆಣ್ಣು, ಗಂಡು ಇಬ್ಬರೊಂದಿಗೂ ಲೈಂಗಿಕ ಚಟುವಟಿಕೆ ನಡೆಸುವವರು) ಹೇಳಿಕೊಂಡಿದ್ದರೆ, 66 ಜನ ತಾವು ಸಲಿಂಗಿಗಳೆಂಬುದನ್ನು ಒಪ್ಪಿಕೊಂಡಿದ್ದಾರೆ.

ಸಮೀಕ್ಷೆಗೊಳಪಟ್ಟ ಹೆಚ್ಚಿನ ವ್ಯಕ್ತಿಗಳು ತಾವು ಸೆಕ್ಸ್ ವಿಚಾರಗಳನ್ನು ತಮ್ಮ ಗೆಳೆಯರ ಮೂಲಕ ಕಲಿಯುತ್ತೇವೆ ಎಂದು ಹೇಳಿದ್ದರೆ, ಇನ್ನು ಕೆಲವರು ತಾವು ಆಶ್ಲೀಲ ವಿಡಿಯೋಗಳ ಮೂಲಕ ‘ಸೆಕ್ಸ್’ ಮಾಹಿತಿಗಳನ್ನು ಕಲಿತುಕೊಳ್ಳುತ್ತಾರೆ ಎಂಬುದು ಈ ಸಮೀಕ್ಷೆಯಿಂದ ಬಯಲಾಗಿದೆ. ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಲೈಂಗಿಕ ಶಿಕ್ಷಣ ವಿಚಾರ ಇಲ್ಲವೇ ಇಲ್ಲ ಅನ್ನುವಷ್ಟು ವಿರಳವಾಗಿರುವಾಗ ಸುಮಾರು 30 ಪ್ರತಿಶತದಷ್ಟು ಅಪ್ರಾಪ್ತರು ‘ಸೆಕ್ಸ್’ ಅನ್ನು ಈ ಮೇಲೆ ತಿಳಿಸಿದ ಮೂಲಗಳಿಂದಲೇ ಕಲಿತುಕೊಳ್ಳುತ್ತಾರೆ.

ಇನ್ನು ಶಾಲೆಗಳಲ್ಲಿ ಲೈಂಗಿಕ ಶಿಕ್ಷಣ ಪಠ್ಯಕ್ರಮವನ್ನು ಅಳವಡಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಹಾಗೂ ತರಬೇತಿ ಮಂಡಳಿಯು (NCERT) ಸದ್ಯದಲ್ಲಿಯೇ ಪರಿಷ್ಕೃತ ಪಠ್ಯಕ್ರಮವನ್ನು ಪರಿಚಯಿಸಲಾಗುವುದು ಎಂದು ಜೂನ್ 2018ರಲ್ಲಿ ಹೇಳಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ. ಈ ಎಲ್ಲಾ ಅಂಶಗಳನ್ನು ಅವಲೋಕಿಸಿದಾಗ ನಮ್ಮ ದೇಶದ ಅಪ್ರಾಪ್ತ ವಯಸ್ಸಿನವರ ಮೇಲೆ ಅಂತರ್ಜಾಲ ಮತ್ತು ಬದಲಾಗಿರುವ ಸಾಮಾಜಿಕ ಸನ್ನಿವೇಶಗಳು ಬಹಳಷ್ಟು ಪ್ರಭಾವವನ್ನು ಬೀರುತ್ತಿವೆ ಎಂಬ ಅಂಶ ಸ್ಪಷ್ಟವಾಗುತ್ತದೆ ಮಾತ್ರವಲ್ಲದೇ ಸಣ್ಣಪ್ರಾಯದಲ್ಲೇ ಮಕ್ಕಳು ಲೈಂಗಿಕ ಆಕರ್ಷಣೆಗೆ ಒಳಗಾಗುತ್ತಿರುವುದರಿಂದ ಲೈಂಗಿಕ ಶಿಕ್ಷಣ ಕುರಿತಾದಂತೆ ಮಕ್ಕಳಲ್ಲಿ ಅರಿವು ಮೂಡಿಸುವ ಕಾರ್ಯ ಆಗಬೇಕಾಗಿರುವುದು ಇಂದಿನ ಜರೂರತ್ತಾಗಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.