ಸುಶಾಂತ್ ಸಿಂಗ್ ಪ್ರಕರಣ: ರಿಯಾ ಚಕ್ರವರ್ತಿಗೆ ರಕ್ಷಣೆ ಕೊಡಿ: ಮುಂಬೈ ಪೊಲೀಸ್ ಗೆ ಸಿಬಿಐ
ತನ್ನ ಕುಟುಂಬಕ್ಕೆ ರಕ್ಷಣೆ ಕೊಡಬೇಕೆಂದು ಮಾಧ್ಯಮಗಳಿಗೆ ನೀಡಿದ್ದ ಸಂದರ್ಶನದಲ್ಲಿ ರಿಯಾ ಮನವಿ ಮಾಡಿಕೊಂಡಿದ್ದರು.
Team Udayavani, Aug 29, 2020, 2:39 PM IST
ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ಹಿನ್ನಲೆಯಲ್ಲಿ ತನ್ನ ಹಾಗೂ ತನ್ನ ಕುಟುಂಬದವರಿಗೆ ಜೀವ ಬೆದರಿಕೆ ಇದ್ದಿರುವುದಾಗಿ ರಿಯಾ ಚಕ್ರವರ್ತಿ ಆರೋಪಿಸಿದ್ದು, ಈ ನಿಟ್ಟಿನಲ್ಲಿ ರಿಯಾ ಹಾಗೂ ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸುವಂತೆ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ಶನಿವಾರ (ಆಗಸ್ಟ್ 29, 2020) ಮುಂಬೈ ಪೊಲೀಸರಿಗೆ ಪತ್ರ ಬರೆದಿರುವುದಾಗಿ ವರದಿ ತಿಳಿಸಿದೆ.
ರಿಯಾ ಚಕ್ರವರ್ತಿ ಆಕೆಯ ನಿವಾಸದಿಂದ ಡಿಆರ್ ಡಿಒ ಗೆಸ್ಟ್ ಹೌಸ್ ಗೆ ಪ್ರಯಾಣಿಸುವ ವೇಳೆ ಅಗತ್ಯ ಭದ್ರತೆಯನ್ನು ಸಿಬಿಐ ಬೇಡಿಕೆಯಂತೆ ನೀಡಲಾಗುವುದು ಎಂದು ಮುಂಬೈ ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಕೆಲವು ಮಾಧ್ಯಮದವರು ಕೂಡಾ ತನ್ನ ನಿವಾಸದ ಕಂಪೌಂಡ್ ಹಾರಿ ಬಲವಂತವಾಗಿ ಒಳಬರಲು ಪ್ರಯತ್ನಿಸುತ್ತಿದ್ದಾರೆ ಎಂದು ರಿಯಾ ಚಕ್ರವರ್ತಿ ಆರೋಪಿಸಿದ್ದು, ತನಗೆ ಹಾಗೂ ತನ್ನ ಕುಟುಂಬಕ್ಕೆ ರಕ್ಷಣೆ ಕೊಡಬೇಕೆಂದು ಮಾಧ್ಯಮಗಳಿಗೆ ನೀಡಿದ್ದ ಸಂದರ್ಶನದಲ್ಲಿ ರಿಯಾ ಮನವಿ ಮಾಡಿಕೊಂಡಿದ್ದರು.
ಈ ಹಿನ್ನೆಲೆಯಲ್ಲಿ ಶನಿವಾರ ಮುಂಬೈ ಪೊಲೀಸರು ರಿಯಾ ನಿವಾಸಕ್ಕೆ ಆಗಮಿಸಿದ್ದು, ಡಿಆರ್ ಡಿಒ ಕಚೇರಿಗೆ ವಿಚಾರಣೆಗೆ ಆಗಮಿಸಿದ ವೇಳೆ ಪೂರ್ಣ ಭದ್ರತೆ ನೀಡಿರುವುದಾಗಿ ವರದಿ ತಿಳಿಸಿದೆ. ಈಗಾಗಲೇ ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 28ರಂದು ಸಿಬಿಐ ಸುಮಾರು ಹತ್ತು ಗಂಟೆಗಳ ಕಾಲ ರಿಯಾ ಚಕ್ರವರ್ತಿಯನ್ನು ತನಿಖೆಗೆ ಒಳಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!
Order: ಬಾಕಿ ಹಣ ಕೊಡದ್ದಕ್ಕೆ ದಿಲ್ಲಿಯ ಹಿಮಾಚಲ ಭವನ ಹರಾಜು: ʼಕೈʼ ಸರಕಾರಕ್ಕೆ ಹಿನ್ನಡೆ
TTD: ತಿರುಪತಿ ದರ್ಶನ ಕಾಯುವಿಕೆ ಅವಧಿ ಇಳಿಕೆಗೆ ಕೃತಕ ಬುದ್ಧಿಮತ್ತೆ ಬಳಕೆ?
Pilot: ಕೆಲಸದ ಟೈಂ ಮುಗೀತು ಎಂದು ವಿಮಾನ ಹಾರಿಸದ ಏರ್ ಇಂಡಿಯಾ ಪೈಲಟ್!
Nanded: ಸಂಗಾತಿಯ ಅರಸುತ್ತಾ 300 ಕಿ.ಮೀ. ಸಂಚರಿಸಿದ “ಜಾನಿ’ ಎಂಬ ಹುಲಿ!
MUST WATCH
ಹೊಸ ಸೇರ್ಪಡೆ
Hike Price: ಮಾರುಕಟ್ಟೆಯಲ್ಲಿ ಡಬ್ಬಲ್ ಚೋಲ್ ಚಾಲಿ ಅಡಿಕೆ ಧಾರಣೆ ಏರಿಕೆ
Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…
History: ನಕ್ಸಲ್ ಚಳವಳಿಯ ರಕ್ತಸಿಕ್ತ ಇತಿಹಾಸ; ಸಾವಿನೊಂದಿಗೆ ಪೊಲೀಸ್-ನಕ್ಸಲ್ ಮುಖಾಮುಖಿ
TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!
Naxal Vikram Gowda: ಮೂರು ಬಾರಿ ತಪ್ಪಿಸಿಕೊಂಡವ ಹುಟ್ಟೂರಲ್ಲೇ ಪ್ರಾಣ ತೆತ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.