Rajya Sabha Member,ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಮೋದಿ ನಿಧನ
Team Udayavani, May 13, 2024, 11:04 PM IST
ನವದೆಹಲಿ: ಬಿಜೆಪಿಯ ಹಿರಿಯ ನಾಯಕ, ರಾಜ್ಯಸಭಾ ಸಂಸದ, ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಮೋದಿ(72) ಅವರು ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಸುಶೀಲ್ ಮೋದಿ ಅವರು ಕ್ಯಾನ್ಸರ್ನಿಂದ ಬಳಲುತ್ತಿದ್ದು, ಕಳೆದ ಒಂದು ತಿಂಗಳಿನಿಂದ ಏಮ್ಸ್ನ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದರು.
ಆರೋಗ್ಯದ ದೃಷ್ಟಿಯಿಂದ ಅವರು ರಾಜಕೀಯದಿಂದ ದೂರ ಉಳಿದಿದ್ದರು.ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಫರ್ಧೆಯಿಂದ ಹಿಂದೆ ಸರಿದಿದ್ದರು.
ಸುಶೀಲ್ ಮೋದಿ ಅವರು ಜನವರಿ 5, 1952 ರಂದು ಪಾಟ್ನಾದಲ್ಲಿ ಜನಿಸಿದರು. ಬಿಹಾರದ ಮೂರನೇ ಉಪಮುಖ್ಯಮಂತ್ರಿ ಮತ್ತು ಹಣಕಾಸು ಸಚಿವರೂ ಆಗಿ ಸೇವೆ ಸಲ್ಲಿಸಿದ್ದರು.
ಮಂಗಳವಾರ ಪಾಟ್ನಾದಲ್ಲಿ ಅವರ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.
ಸುಶೀಲ್ ಮೋದಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಬಿಹಾರ ಸಿಎಂ ನಿತೀಶ್ ಕುಮಾರ್, ಡಿಸಿಎಂಗಳಾದ ಸಾಮ್ರಾಟ್ ಚೌಧರಿ ಮತ್ತು ವಿಜಯ ಕುಮಾರ್ ಸೇರಿದಂತೆ ಪ್ರಮುಖರು ಶೋಕ ವ್ಯಕ್ತಪಡಿಸಿದ್ದಾರೆ.
ಸದ್ಯ ಅವರು ರಾಜ್ಯಸಭೆ ಸದಸ್ಯರೂ ಆಗಿದ್ದರು. ಆರ್ಥಿಕ ವಿಚಾರಗಳಲ್ಲಿ ಪರಿಣತಿ ಹೊಂದಿದ್ದ ಅವರು ಜಿಎಸ್ಟಿಯ ಉನ್ನತಾಧಿಕಾರದ ಸಮಿತಿಯ ಮುಖ್ಯಸ್ಥರೂ ಆಗಿ ಕರ್ತವ್ಯ ನಿರ್ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.