ಜಮ್ಮು-ಕಾಶ್ಮೀರ; ತ್ರಾಲ್ ಪ್ರದೇಶದ ಇಬ್ಬರನ್ನು ಅಪಹರಿಸಿ ಹತ್ಯೆಗೈದ ಉಗ್ರರು
Team Udayavani, Aug 27, 2019, 11:40 AM IST
ಜಮ್ಮು-ಕಾಶ್ಮೀರ: ಶಂಕಿತ ಉಗ್ರರು ಇಬ್ಬರನ್ನು ಅಪಹರಿಸಿ ಹತ್ಯೆಗೈದಿರುವ ಘಟನೆ ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.
ಆಗಸ್ಟ್ 19-20ರಂದು ಅಪರಿಚಿತ ಉಗ್ರರು ಇಬ್ಬರನ್ನು ಅಪಹರಿಸಿದ್ದರು. ಸೋಮವಾರ ಒಬ್ಬ ವ್ಯಕ್ತಿಯ ಶವ ಅರಣ್ಯಪ್ರದೇಶದಲ್ಲಿ ಪತ್ತೆಯಾಗಿರುವುದಾಗಿ ವರದಿ ಹೇಳಿದೆ.
ಉತ್ತರ ತ್ರಾಲ್ ಸಮೀಪದ ಮನ್ಸಾರ್ ಭಾಯ್ಕ್ ನ ಪರ್ವತಶ್ರೇಣಿ ತಪ್ಪಲಲ್ಲಿ ಈ ಘಟನೆ ನಡೆದಿದೆ. ಲಾಚಿಟಾಪ್ ನ ಬೇಹಾಕ್ ನ ನಿವಾಸಿ ಹಾಗೂ ಮನ್ಸಾರ್ ಬೇಹಾಕ್ ನ ನಿವಾಸಿಯನ್ನು ನಾಗ್ ಬೆಹ್ರಾನ್ ಅರಣ್ಯದಲ್ಲಿ ಅಪಹರಿಸಿಕೊಂಡು ಹೋಗಿರುವುದಾಗಿ ವರದಿ ವಿವರಿಸಿದೆ. ಶೋಧ ಕಾರ್ಯಾಚರಣೆಯ ಬಳಿಕ ಮತ್ತೊಬ್ಬ ವ್ಯಕ್ತಿಯ ಶವ ಪತ್ತೆಯಾಗಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ಕೇಂದ್ರ ಸರಕಾರ ರದ್ದುಗೊಳಿಸಿದ ನಂತರ ನಡೆದ ಕಣಿವೆ ರಾಜ್ಯದಲ್ಲಿ ನಡೆದ ಉಗ್ರರ ಮೊದಲ ದಾಳಿಯಾಗಿದೆ ಎಂದು ವರದಿ ತಿಳಿಸಿದೆ.
ಮತ್ತೊಂದು ಘಟನೆಯಲ್ಲಿ ಡೇಲಿನಾ ಚೌಕ್ ಪ್ರದೇಶದಲ್ಲಿ ಜಮ್ಮು-ಕಾಶ್ಮೀರ ಪೊಲೀಸ್ ಹಾಗೂ ಸೇನೆಯ ಜಂಟಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸುತ್ತಿದ್ದ ವೇಳೆ ಟ್ರಕ್ ಮೇಲೆ ಗುಂಡಿನ ದಾಳಿ ನಡೆಸಿದ್ದ ಉಗ್ರನೊಬ್ಬನನ್ನು ಬಂಧಿಸಲಾಗಿದೆ. ಮತ್ತೊಬ್ಬ ಉಗ್ರ ಈ ಪ್ರದೇಶದೊಳಗೆ ನುಸುಳಿದ್ದು, ಆತನಿಗಾಗಿ ಕೂಂಬಿಂಗ್ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.