ಸ್ವಪ್ನಾ ಲಾಕರ್‌ನಲ್ಲಿ 38 ಕೋಟಿ
Team Udayavani, Oct 2, 2020, 5:45 AM IST
ತಿರುವನಂತಪುರ: ಕೇರಳ ಚಿನ್ನದ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್, ಖಾಸಗಿ ಬ್ಯಾಂಕೊಂದರಲ್ಲಿ 38 ಕೋಟಿ ರೂ. ಹಣ ಜಮೆ ಆಗಿರುವುದನ್ನು ಜಾರಿ ನಿರ್ದೇಶನಾಲಯದ . (ಇ.ಡಿ.) ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಈ ಹಣ ಯುಎಇಯಿಂದ ಆಕೆಗೆ ಬಂದಿರುವುದಾಗಿ ಹೇಳಲಾಗಿದೆ.
ಬ್ಯಾಂಕಿನಿಂದ ಲಾಕರ್ ಸೌಲಭ್ಯವನ್ನು ಪಡೆದು ಅದರಲ್ಲಿ ಈ ದೊಡ್ಡ ಮೊತ್ತದ ಹಣ ಇಡಲಾಗಿದೆ. ಪ್ರಕರಣದ ಮತ್ತೂಬ್ಬ ಆರೋಪಿಯಾದ ಸಂದೀಪ್ ಕೂಡ ಇದೇ ಬ್ಯಾಂಕಿನಲ್ಲಿ ಖಾತೆ ಹೊಂದಿರುವ ವಿಚಾರವೂ ಇದೇ ವೇಳೆ ಬೆಳಕಿಗೆ ಬಂದಿದೆ. ಸ್ವಪ್ನಾರ ಲಾಕರನ್ನು ಇನ್ನೂ ಜಪ್ತಿ ಮಾಡಲಾಗಿಲ್ಲ. ಬ್ಯಾಂಕ್‌ನ ಮ್ಯಾನೇಜರ್‌ರವರನ್ನು ವಿಚಾರಣೆಗೊಳಪಡಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ, ಕುಡುವಲ್ಲಿ ನಗರಸಭಾ ಸದಸ್ಯ ಕಾರಟ್ ಫೈಸಲ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಗುರುವಾರ ಬೆಳಗಿನ ಜಾವ ಅವರ ಮನೆ ಹಾಗೂ ಅದರ ಪಕ್ಕದಲ್ಲಿರುವ ಅವರಿಗೆ ಸಂಬಂಧಿಸಿದ ಕಟ್ಟಡದ ಮೇಲೆ ದಾಳಿ ನಡೆಸಿದ ಕಸ್ಟಮ್ಸ್ ಇಲಾಖೆ ಅಧಿಕಾರಿಗಳು, ಕೆಲವು ಸಾಕ್ಷ್ಯಾಧಾರ ವಶಪಡಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.