ಚಿನ್ನ ಕಳ್ಳಸಾಗಾಣಿಕೆ ಪ್ರಕರಣ: 16 ತಿಂಗಳ ಬಳಿಕ ಜೈಲಿನಿಂದ ಹೊರಬಂದ ಸ್ವಪ್ನ ಸುರೇಶ್
Team Udayavani, Nov 6, 2021, 12:24 PM IST
ತಿರುವನಂತಪುರಂ: ಕೇರಳ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ ಎಬ್ಬಿಸಿದ್ದ ಚಿನ್ನ ಕಳ್ಳಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ಸ್ವಪ್ನ ಸುರೇಶ್ ಗೆ ಜಾಮೀನು ನೀಡಲಾಗಿದೆ. ಬಂಧನವಾಗಿ 16 ತಿಂಗಳ ಬಳಿಕ ಇಂದು ಸ್ವಪ್ನ ಸುರೇಶ್ ಗೆ ಜೈಲಿನಿಂದ ಹೊರಬಂದಿದ್ದಾರೆ.
ಯುಎಪಿಎ ಪ್ರಕರಣದಲ್ಲಿ ಸುರೇಶ್ ಮತ್ತು ಇತರ 7 ಮಂದಿಗೆ ಕೇರಳ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಅವರು ವಿರುದ್ಧ ಆರೋಪಿಸಿದಂತೆ ಯಾವುದೇ ಭಯೋತ್ಪಾದಕ ಕೃತ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿಲ್ಲ ಎಂದು ಹೇಳಿದ್ದಾರೆ.
25 ಲಕ್ಷ ರೂಪಾಯಿ ಜಾಮೀನು ಬಾಂಡ್ ಮತ್ತು ಎರಡು ಶ್ಯೂರಿಟಿಗಳ ಮೇಲೆ ಯುಎಪಿಎ ಅಡಿಯಲ್ಲಿ ಎನ್ಐಎ ದಾಖಲಿಸಿದ ಪ್ರಕರಣದಲ್ಲಿ ಕೇರಳ ಹೈಕೋರ್ಟ್ ನವೆಂಬರ್ 2 ರಂದು ಆಕೆಗೆ ಜಾಮೀನು ನೀಡಿದೆ. ಇಂದು ಜೈಲಿನಿಂದ ಬಿಡುಗಡೆಯಾದರು.
ಇದನ್ನೂ ಓದಿ:ನಿಷೇಧದ ನಡುವೆಯೂ ಪಟಾಕಿ : ದೆಹಲಿಯಲ್ಲಿ 281 ಜನರ ಬಂಧನ
ನ್ಯಾಯಮೂರ್ತಿಗಳಾದ ಕೆ ವಿನೋದ್ ಚಂದ್ರನ್ ಮತ್ತು ಸಿ ಜಯಚಂದ್ರನ್ ಅವರ ಪೀಠವು ಪ್ರಕರಣದ ವಿಚಾರಣೆ ನಡೆಸಿ, ಎರ್ನಾಕುಲಂ ಎನ್ಐಎ ಪೀಠವು ಜಾಮೀನು ಅರ್ಜಿ ತಿರಸ್ಕರಿಸಿ ನೀಡಿದ್ದ ಆದೇಶವನ್ನು ರದ್ದುಗೊಳಿಸಿ ಜಾಮೀನು ನೀಡಿದೆ.
ಅಕ್ರಮ ಹಣವರ್ಗಾವಣೆ, ರಾಜತಾಂತ್ರಿಕ ಮಾರ್ಗದ ಮೂಲಕ ಚಿನ್ನ ಕಳ್ಳಸಾಗಣೆ, ಕಾನೂನು ಬಾಹಿರ ಆರ್ಥಿಕ ವ್ಯವಹಾರ ಮುಂತಾದ ಆರೋಪಗಳನ್ನು ಹೊತ್ತುಕೊಂಡಿರುವ ಸ್ವಪ್ನ ಸುರೇಶ್ ಹಾಗೂ ಇತರೆ ಆರೋಪಿಗಳನ್ನು ಜಾರಿ ನಿರ್ದೇಶನಾಲಯವು ಕಳೆದ ವರ್ಷ ಜುಲೈನಲ್ಲಿ ಬಂಧಿಸಿತ್ತು. ಕಾನೂನು ಬಾಹಿರ ಆರ್ಥಿಕ ವ್ಯವಹಾರ UAPA ಕಾಯ್ದೆ ಉಲ್ಲಂಘನೆ ಮಾಡಿದ್ದ ಆರೋಪದ ಮೇಲೆ ಸೆಕ್ಷನ್ 16, 17, 18 ಹಾಗೂ 20ರ ಅಡಿ ಪ್ರಕರಣ ದಾಖಲಾಗಿತ್ತು.
ರಾಜತಾಂತ್ರಿಕ ರಕ್ಷಣೆ ಹೊಂದಿರುವ ”ಡಿಪ್ಲೊಮ್ಯಾಟಿಕ್ ಬ್ಯಾಗೇಜ್” ನಲ್ಲಿದ್ದ 30 ಕೆಜಿ ಚಿನ್ನವನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶ ಪಡಿಸಿಕೊಂಡಿದ್ದರು. ಆ ವೇಳೆ ಪ್ರಕರಣ ಬೆಳಕಿಗೆ ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.