ತಾಜ್‌ಮಹಲ್ ಗೂ ತಟ್ಟಿದ ತೆರಿಗೆ ಬಿಸಿ: ಕೋಟಿ ತೆರಿಗೆ ಕಟ್ಟಲು 15 ದಿನ ಗಡುವು, ತಪ್ಪಿದರೆ ಜಪ್ತಿ
Team Udayavani, Dec 20, 2022, 7:14 PM IST
ಆಗ್ರಾ: ಯುಪಿಯ ಆಗ್ರಾದಲ್ಲಿರುವ ತಾಜ್ ಮಹಲ್ ಪ್ರಪಂಚದಾದ್ಯಂತದ ಪ್ರವಾಸಿಗರಿಗೆ ಆಕರ್ಷಣೆಯ ಕೇಂದ್ರವಾಗಿದೆ. ಪ್ರತಿನಿತ್ಯ ಲಕ್ಷಾಂತರ ಪ್ರವಾಸಿಗರು ಇಲ್ಲಿಗೆ ಬರುತ್ತಾರೆ. ಆದರೆ ಪ್ರೀತಿಯ ಸಂಕೇತವೆಂದೇ ಪ್ರಸಿದ್ದಿ ಪಡೆದ ತಾಜ್‌ಮಹಲ್‌ಗೆ ತೆರಿಗೆಯ ಬಿಸಿ ಎದುರಾಗಿದೆ. ನೀರು ಮತ್ತು ಆಸ್ತಿ ತೆರಿಗೆ ಕಟ್ಟದ ಕಾರಣ ಆಗ್ರಾ ಮುನ್ಸಿಪಲ್ ಕಾರ್ಪೊರೇಷನ್ ನೋಟಿಸ್ ನೀಡಿದೆ.
ಆಗ್ರಾ ಮುನ್ಸಿಪಲ್ ಕಾರ್ಪೊರೇಷನ್ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ನೋಟಿಸ್ ಜಾರಿ ಮಾಡಿದ್ದು, ತಾಜ್ ಮಹಲ್ ನೀರಿನ ತೆರಿಗೆಯಾಗಿ 1.9 ಕೋಟಿ ಮತ್ತು ಆಸ್ತಿ ತೆರಿಗೆಯಾಗಿ 1.5 ಲಕ್ಷ ರೂಪಾಯಿಗಳನ್ನು ಪಾವತಿಸಬೇಕಾಗಿದೆ ಎಂದು ಹೇಳಿದೆ.
ನೋಟಿಸ್‌ನಲ್ಲಿ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ತನ್ನ ಬಾಕಿ ತೆರಿಗೆಯನ್ನು ಪಾವತಿಸಲು 15 ದಿನಗಳ ಗಡುವು ನೀಡಿದ್ದು ತೆರಿಗೆ ಕಟ್ಟಲು ತಪ್ಪಿದ್ದಲ್ಲಿ ಆಸ್ತಿಯನ್ನು (ತಾಜ್ ಮಹಲ್) ಜಪ್ತಿ ಮಾಡಲಾಗುವುದು ಎಂದು ನೋಟೀಸ್ ಜಾರಿ ಮಾಡಿದ್ದಾರೆ.
ಮತ್ತೊಂದೆಡೆ, ಈ ವಿಷಯದ ಬಗ್ಗೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಅಧೀಕ್ಷಕ ಮತ್ತು ಪುರಾತತ್ವಶಾಸ್ತ್ರಜ್ಞ ರಾಜ್ ಕುಮಾರ್ ಪಟೇಲ್ ಅವರು, ‘ಸ್ಮಾರಕಗಳಿಗೆ ಆಸ್ತಿ ತೆರಿಗೆ ಅನ್ವಯಿಸುವುದಿಲ್ಲ. ವಾಣಿಜ್ಯ ಬಳಕೆ ಇಲ್ಲದ ಕಾರಣ ನಾವು ನೀರಿಗೆ ತೆರಿಗೆ ಪಾವತಿಸುವ ಹೊಣೆಗಾರಿಕೆಯೂ ಇರುವುದಿಲ್ಲ ಎಂದು ಹೇಳಿಕೊಂಡಿದ್ದಾರೆ.
ಇದನ್ನೂ ಓದಿ: ಬಾಬರ್ ಒಬ್ಬ ದೊಡ್ಡ ಜೀರೋ, ಕೊಹ್ಲಿ ಜತೆ ಹೋಲಿಕೆ ಮಾಡಬೇಡಿ ಎಂದ ಮಾಜಿ ಪಾಕ್ ಆಟಗಾರ
Uttar Pradesh | A notice for water tax and one for property tax has been issued. The property tax is around Rs 1.40 Lakhs and the water tax is around Rs 1 Crore: ASI's Superintending Archaeologist (Agra circle) Raj Kumar Patel to ANI on tax notices for Taj Mahal pic.twitter.com/wuIhVxTXkR
— ANI UP/Uttarakhand (@ANINewsUP) December 20, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.