ತಲಾಖ್ ಒಮ್ಮತಕ್ಕೆ ಸರ್ಕಾರದ ಪ್ರಯತ್ನ
Team Udayavani, Jan 29, 2018, 6:00 AM IST
ನವದೆಹಲಿ: ಸಂಸತ್‌ನ ಬಜೆಟ್ ಅಧಿವೇಶನವು ಸೋಮವಾರದಿಂದ ಆರಂಭವಾಗಲಿದ್ದು, ಸುಗಮ ಕಲಾಪಕ್ಕೆ ಅನುಕೂಲವಾಗುವಂತೆ ಭಾನುವಾರ ನವದೆಹಲಿಯ ಸಂಸತ್‌ಭವನದಲ್ಲಿ ಸರ್ವಪಕ್ಷಗಳ ಸಭೆ ನಡೆದಿದೆ. ಬೇರೆ ಬೇರೆ ವಿಚಾರಗಳನ್ನೆತ್ತಿ ಅಧಿವೇಶನದ ವೇಳೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಿದ್ಧತೆ ನಡೆಸಿದ್ದರೆ, ತ್ರಿವಳಿ ತಲಾಖ್‌ನಂಥ ಪ್ರಮುಖ ವಿಧೇಯಕಗಳಿಗೆ ಹೇಗಾದರೂ ಅಂಗೀಕಾರ ಪಡೆಯಲೇಬೇಕು ಎಂಬ ಯತ್ನದಲ್ಲಿ ಸರ್ಕಾರವಿದೆ.
ಸರ್ವಪಕ್ಷ ಸಭೆಯ ಬಳಿಕ ಮಾತನಾಡಿದ ಕೇಂದ್ರ ಸಚಿವ ಅನಂತ್‌ಕುಮಾರ್ ಅವರು ಈ ಕುರಿತು ಸ್ಪಷ್ಟಪಡಿಸಿದ್ದು, “ಸಭೆಯು ಫಲಪ್ರದವಾಗಿದೆ. ತ್ರಿವಳಿ ತಲಾಖ್ ವಿಧೇಯಕಕ್ಕೆ ರಾಜ್ಯಸಭೆಯಲ್ಲಿ ಅಂಗೀಕಾರ ಪಡೆಯಲು ಎಲ್ಲ ಪ್ರಯತ್ನಗಳನ್ನೂ ನಾವು ನಡೆಸುತ್ತಿದ್ದೇವೆ. ಪ್ರತಿಪಕ್ಷಗಳ ಸದಸ್ಯರನ್ನು ಭೇಟಿಯಾಗಿ, ಅವರ ಮನವೊಲಿಸುವ ಕೆಲಸ ಮಾಡುತ್ತೇವೆ. ಈ ವಿಧೇಯಕಕ್ಕೆ ಸಂಬಂಧಿಸಿ ಒಮ್ಮತಕ್ಕೆ ಬರುವುದು ನಮ್ಮ ಉದ್ದೇಶ. ಜಿಎಸ್‌ಟಿ ವಿಧೇಯಕವನ್ನು ಹೇಗೆ ಸರ್ವಸಮ್ಮತವಾಗಿ ಅಂಗೀಕರಿಸಲಾಯಿತೋ, ಅದೇ ರೀತಿಯಾಗಿ ಮುಸ್ಲಿಮರಲ್ಲಿರುವ ತ್ರಿವಳಿ ತಲಾಖ್‌ನಂಥ ಕೆಟ್ಟ ಪದ್ಧತಿಯನ್ನು ಕೊನೆಗಾಣಿಸುವಲ್ಲೂ ಪ್ರತಿಪಕ್ಷಗಳು ಬೆಂಬಲ ನೀಡಲಿವೆ ಎಂಬ ವಿಶ್ವಾಸ ನಮಗಿದೆ. ಎಲ್ಲ ರಾಜಕೀಯ ಪಕ್ಷಗಳ ನಾಯಕರೊಂದಿಗೆ ಚರ್ಚಿಸಿ, ಬೆಂಬಲ ಕೋರಲಾಗುವುದು,’ ಎಂದಿದ್ದಾರೆ.
ಇದೇ ವೇಳೆ, ಕಳೆದ ಅಧಿವೇಶನದಲ್ಲಿ ಪ್ರತಿಪಕ್ಷಗಳು ಈ ವಿಧೇಯಕವನ್ನು ಪರಿಶೀಲನಾ ಸಮಿತಿಗೆ ಒಪ್ಪಿಸಬೇಕೆಂದು ಒತ್ತಾಯಿಸಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ವಿಧೇಯಕವೀಗ ರಾಜ್ಯಸಭೆಯ ಆಸ್ತಿ. ಅದನ್ನು ಸದನವೇ ನಿರ್ಧರಿಸಲಿದೆ ಎಂದಿದ್ದಾರೆ.
ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿ, ಕೇಂದ್ರ ಸಚಿವ ರಾಜನಾಥ್ ಸಿಂಗ್, ಅರುಣ್ ಜೇಟಿÉ, ಅನಂತ್‌ಕುಮಾರ್ ಮತ್ತಿತರ ನಾಯಕರು, ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರತಿಪಕ್ಷಗಳ ನಾಯಕರೂ ಪಾಲ್ಗೊಂಡಿದ್ದರು.
ಇಂದು ಆರ್ಥಿಕ ಸಮೀಕ್ಷೆ ಮಂಡನೆ:ಸೋಮವಾರ ಎರಡೂ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾಷಣ ಮಾಡಿದ ಬೆನ್ನಲ್ಲೇ, ಆರ್ಥಿಕ ಸಮೀಕ್ಷೆಯನ್ನು ಸರ್ಕಾರ ಮಂಡಿಸಲಿದೆ. ಫೆ.1ರಂದು ವಿತ್ತ ಸಚಿವ ಅರುಣ್ ಜೇಟಿÉ ಅವರು ಬಜೆಟ್ ಮಂಡಿಸಲಿದ್ದಾರೆ.
ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜು
ಇನ್ನೊಂದೆಡೆ, ಅತ್ಯಾಚಾರ ಸೇರಿದಂತೆ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು, ಸಂವಿಧಾನ ಮತ್ತು ಸಾಂವಿಧಾನಿಕ ಸಂಸ್ಥೆಗಳ ಮೇಲೆ ನಡೆಯುತ್ತಿರುವ ದಾಳಿ, ವ್ಯಾಪಾರಿಗಳ ಅಳಲು, ಉತ್ತರಪ್ರದೇಶದ ಕೋಮುಗಲಭೆ ಮತ್ತಿತರ ವಿಚಾರಗಳನ್ನು ಇಟ್ಟುಕೊಂಡು ಸರ್ಕಾರದ ಮೇಲೆ ದಾಳಿ ನಡೆಸಲು ಪ್ರತಿಪಕ್ಷಗಳು ಸಜ್ಜಾಗಿವೆ. ಪ್ರತಿಪಕ್ಷಗಳ ನಾಯಕರು ಸೋಮವಾರ ಬೆಳಗ್ಗೆ ಸಭೆ ಸೇರಿ, ತಮ್ಮ ಕಾರ್ಯ ತಂತ್ರಗಳ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ. ಇನ್ನೊಂದೆಡೆ, ಬಿಜೆಪಿ ಸಂಸದೀಯ ಪಕ್ಷದ ಸಭೆಯೂ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ
UV Fusion: ಕರ್ನಾಟಕ: ನಮ್ಮೆಲ್ಲರ ಉಸಿರಾಗಲಿ ಕನ್ನಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.