ತೆರಿಗೆ ವಂಚನೆ: ನಟ ವಿಜಯ್ ಸಹಿತ ಹಲವರಿಗೆ ಸಂಕಟ ; 77 ಕೋಟಿ ರೂ. ವಶ
Team Udayavani, Feb 6, 2020, 10:14 PM IST
ನವದೆಹಲಿ: ತೆರಿಗೆ ವಂಚನೆ ಪ್ರಕರಣ ತಮಿಳು ಚಿತ್ರರಂಗದ ಜನಪ್ರಿಯ ನಟ ವಿಜಯ್ ಅವರಿಗೆ ಸುತ್ತಿಕೊಳ್ಳುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ವಿಜಯ್ ಸಹಿತ ತಮಿಳು ಚಿತ್ರರಂಗದ ಓರ್ವ ನಿರ್ಮಾಪಕ, ವಿತರಕ ಮತ್ತು ಫೈನಾನ್ಷಿಯರ್ ಈ ತೆರಿಗೆ ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆದಾಯ ತೆರಿಗೆ ಅಧಿಕಾರಿಗಳು ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಇದುವರೆಗೆ ಒಟ್ಟಾರೆಯಾಗಿ 77 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂಬ ಮಾಹಿತಿಯನ್ನೂ ಸಹ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ನೀಡಿದ್ದಾರೆ.
ಫೈನಾನ್ಷಿಯರ್ ಅವರಿಗೆ ಸೇರಿರುವ ಚೆನ್ನೈ ಮತ್ತು ಮಧುರೈನಲ್ಲಿರುವ ಗುಪ್ತ ಸ್ಥಳಗಳಲ್ಲಿ ಲೆಕ್ಕಕ್ಕೆ ಸಿಗದ ನಗದು ಪತ್ತೆಯಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಇಂದು ಹೊರಡಿಸಿರುವ ಹೇಳಿಕೆಯಲ್ಲಿ ತಿಳಿಸಿದೆ.
ಮತ್ತು ಈ ಪ್ರಕರಣದಲ್ಲಿ ಕೇಳಿಬಂದಿರುವ ನಟನ ಹೆಸರು ವಿಜಯ್ ಅವರದ್ದೇ ಆಗಿದೆ ಎಂದು ಹೆಸರು ಬಹಿರಂಗಪಡಿಸಲು ನಿರಾಕರಿಸಿರುವ ಆದಾಯ ತೆರಿಗೆ ಇಲಾಖೆಯ ಅಧಿಕಾರಿಯೊಬ್ಬರು ಲೈವ್ ಮಿಂಟ್ ವೆಬ್ ಸೈಟ್ ಗೆ ಮಾಹಿತಿ ನೀಡಿದ್ದಾರೆ. ಆದರೆ ನಟ ವಿಜಯ್ ಅವರಿಗೆ ಸಂಬಂಧಿಸಿದ ಯಾರೊಬ್ಬರೂ ಈ ವಿಷಯದ ಕುರಿತಾಗಿ ಪ್ರತಿಕ್ರಿಯಿಸಲು ಲಭ್ಯರಾಗಿಲ್ಲ ಎಂದು ವೆಬ್ ಸೈಟ್ ತಿಳಿಸಿದೆ.
ನಟ ವಿಜಯ್ ಅವರಿಗೆ ಸೇರಿರುವ ಚರಾಸ್ತಿಗಳು ಮತ್ತು ನಿರ್ಮಾಪಕರಿಂದ ಅವರು ಪಡೆದುಕೊಂಡಿರುವ ಸಂಭಾವನೆಗಳನ್ನು ತನಿಖೆಗೊಳಪಡಿಸಲಾಗುತ್ತಿದೆ ಎಂದು ಸಿಬಿಡಿಟಿ ಹೇಳಿಕೆ ಖಚಿತಪಡಿಸಿದೆ.
ಈ ದಾಳಿಯ ಸಂದರ್ಭದಲ್ಲಿ ಚೆನ್ನೈ ಹಾಗೂ ಮಧುರೈಗಳನ್ನು ಕೇಂದ್ರವಾಗಿರಿಸಿಕೊಂಡು ಸುತ್ತಮುತ್ತ ಒಟ್ಟು 38 ಕಡೆಗಳಲ್ಲಿ ಪತ್ತೆಕಾರ್ಯಗಳನ್ನು ನಡೆಸಲಾಗಿದೆ. ಮತ್ತು ಈ ತಪಾಸಣಾ ಕಾರ್ಯ ಇನ್ನೂ ನಡೆಯುತ್ತಿದೆ ಎಂದು ಇಲಾಖೆಯ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.