ಕರ್ನಾಟಕ V/S ತಮಿಳುನಾಡು : ಮೇಕೆದಾಟು ಯೋಜನೆಯ ವಿರುದ್ಧ ತಮಿಳುನಾಡಿನ 13 ಪಕ್ಷಗಳು ಒಗ್ಗಟ್ಟು
Team Udayavani, Jul 12, 2021, 9:51 PM IST
ಚೆನ್ನೈ : ಕರ್ನಾಟಕ ಸರ್ಕಾರ ನಿರ್ಮಿಸಲು ಹೊರಟಿರುವ ಮೇಕೆದಾಟು ಅಣೆಕಟ್ಟು ಯೋಜನೆಗೆ ಅನುಮತಿ ನೀಡಬಾರದು ಎಂದು ತಮಿಳುನಾಡಿನ ಸರ್ವಪಕ್ಷಗಳ ಸಭೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದು, ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿದೆ.
ತಮಿಳುನಾಡಿನ ಮುಖ್ಯಮಂತ್ರಿ ಎಮ್ ಕೆ. ಸ್ಟ್ಯಾಲಿನ್ ಇಂದು(ಸೋಮವಾರ, ಜುಲೈ 12) ಕರೆದಿದ್ದ ಸರ್ವ ಪಕ್ಷಗಳ ಸಭೆಯಲ್ಲಿ, ತಮಿಳುನಾಡಿನ 13 ಪಕ್ಷಗಳ ಮ್ರಮುಖ ನಾಯಕರು ಒಮ್ಮತದ ನಿಲುವಿಗೆ ಬಂದಿದ್ದಾರೆ. ಮೇಕೆದಾಟು ಅಣೆಕಟ್ಟು ಯೋಜನೆಯನ್ನು ತಡೆಹಿಡಿಯುವ ಉದ್ದೆಶದಿಂದ ತಮಿಳುನಾಡಿನ ಸರ್ವ ಪಕ್ಷಗಳು ಒಗ್ಗೂಡಿವೆ.
ಯೋಜನೆಯನ್ನು ತಡಯುವಲ್ಲಿ ತಮಿಳುನಾಡಿನ ಆಡಳಿತ ಸರ್ಕಾರದೊಂದಿಗೆ ಕೈ ಜೋಡಿಸಲಿದ್ದಾರೆ ಎಂದು 13 ಪಕ್ಷಗಳ ಮುಖಂಡರು ಹೇಳಿದ್ದಾರೆ.
ಇದನ್ನೂ ಓದಿ : ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದಲ್ಲಿ ಬಂಧನಕ್ಕೊಳಗಾಗಿದ್ದ ಮೆಹುಲ್ ಚೋಕ್ಸಿಗೆ ಜಾಮೀನು
ಮೇಕೆದಾಟು ಯೋಜನೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತರದಂತೆ ತಡೆಯಲು ಸರ್ವೋಚ್ಛ ನ್ಯಾಯಾಲಯದ ಮೆಟ್ಟಿಲೇರುವುದನ್ನು ಒಳಗೊಂಡಂತೆ, ಈ ಸಂಬಂಧಿ ಎಲ್ಲಾ ಕಾನೂನಿನ ಕ್ರಮಕ್ಕೆ ಒಮ್ಮತದ ನಿಲುವಿನಿಂದ ಹೋರಾಡಲು ನಿರ್ಧರಿಸಲಾಯಿತು.
ಇನ್ನು, ತಮಿಳುನಾಡು ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಲು ನವದೆಹಲಿಗೆ ಸರ್ವಪಕ್ಷಗಳ ನಿಯೋಗವು ತೆರಳಿ ನಿರ್ಣಯದ ಪ್ರತಿಯನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ನೀಡಲು ನಿರ್ಧರಿಸಿದೆ.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸ್ಟ್ಯಾಲಿನ್, ‘ಕಾವೇರಿ ನದಿ ಪಾತ್ರದಲ್ಲಿ ನಿರ್ಮಾಣ ಚಟುವಟಿಕೆ ಕೈಗೊಳ್ಳಬಾರದು ಎಂಬುದು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಸ್ಪಷ್ಟಪಡಿಸದೆಯಾದರೂ, ಅಣೆಕಟ್ಟು ನಿರ್ಮಿಸಲು ಕರ್ನಾಟಕ ಮುಂದಾಗಿದೆ. ಕರ್ನಾಟಕ ಸರ್ಕಾರದ ಈ ಧೋರಣೆ ಸಾಂವಿಧಾನಿಕ ಕಾಯ್ದೆಗಳಿಗೆ ಸವಾಲು ಹಾಕುವಂತದ್ದಾಗಿದೆ. ಅಣೆಕಟ್ಟು ನಿರ್ಮಿಸಲು ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ ಎಂದಿದ್ದಾರೆ.
ಕರ್ನಾಟರ ಸರ್ಕಾರ ಉದ್ದೇಶಿಸಿದಂತೆ ಅಣೆಕಟ್ಟು ನಿರ್ಮಾಣ ಮಾಡಿದರೆ ತಮಿಳುನಾಡಿನ ಜನರು, ರೈತರು ಸಂಕಷ್ಟಕ್ಕೀಡಾಗುತ್ತಾರೆ. ತಮಿಳುನಾಡಿಗೆ ಆಗುವ ಧಕ್ಕೆಯ ಕಾರಣದಿಂದಾಗಿ ಕಂದ್ರ ಸರ್ಕಾರ ಯಾವುದೇ ರೀತಿಯಲ್ಲಿಯೂ ಕರ್ನಾಟಕ ಸರ್ಕಾರದ ಯೋಜನೆಗೆ ಅನುಮೋದನೆ ನೀಡಬಾರದು ಎಂಬ ನಿರ್ಣಯ ಪ್ರತಿಯನ್ನು ಓದಿ ವಿವರಿಸಿದರು.
ಕಾವೇರಿ ನದಿ ಕರ್ನಾಟಕ್ಕೆ ಮಾತ್ರ ಸೇರಿದ್ದಲ್ಲ. ಕಾವೇರಿ ತಮಿಳುನಾಡಿನ ಪಾಲನ್ನು ಕೂಡ ಹೊಂದಿದೆ. ತಮಿಳು ನಾಡಿನ ಮೂಲಕವೇ ಹೆಚ್ಚು ದೂರ ಕಾವೇರಿ ನದಿ ಹರಿಯುತ್ತದೆ ಎಂದು ಅವರು ಹೇಳಿದರು.
ಇದನ್ನೂ ಓದಿ : ಅದೊಂದು ಬಣ್ಣಿಸಲಾಗದ ಅನುಭೂತಿ : ಬಾಹ್ಯಾಕಾಶ ಪಯಣದ ಬಗ್ಗೆ ಶಿರಿಷಾ ಮಾತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.