ತಮಿಳುನಾಡು ವಿಧಾನಸಭೆಯಲ್ಲಿ ಸಿಯುಇಟಿ ವಿರುದ್ಧ ನಿರ್ಣಯ ಅಂಗೀಕಾರ
Team Udayavani, Apr 11, 2022, 9:30 PM IST
ಚೆನ್ನೈ: ಕೇಂದ್ರೀಯ ವಿಶ್ವವಿದ್ಯಾಲಯಗಳ ಪದವಿ ಕೋರ್ಸ್‌ಗಳ ಪ್ರವೇಶಕ್ಕಾಗಿ ರಾಷ್ಟ್ರಮಟ್ಟದಲ್ಲಿ ನಡೆಸಲು ಉದ್ದೇಶಿಸಲಾಗಿರುವ ವಿಶ್ವವಿದ್ಯಾಲಯಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಯುಇಟಿ)ಯಿಂದ ತಮಿಳುನಾಡು ವಿಮುಖವಾಗಲು ನಿರ್ಧರಿಸಿದೆ.
ಈ ಕುರಿತಂತೆ, ತಮಿಳುನಾಡು ವಿಧಾನಸಭೆಯಲ್ಲಿ ಮಂಡಿಸಲಾಗಿದ್ದ ಗೊತ್ತುವಳಿಗೆ ಸದನದ ಅಂಗೀಕಾರ ಸಿಕ್ಕಿದೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮಂಡಿಸಿದ್ದ ನಿರ್ಣಯ ವಿರೋಧಿಸಿದ ಬಿಜೆಪಿ ಸಭಾತ್ಯಾಗ ನಡೆಸಿದ್ದು, ಪ್ರಮುಖ ವಿಪಕ್ಷವಾದ ಎಐಎಡಿಎಂಕೆ, ಕಾಂಗ್ರೆಸ್ ಸೇರಿದಂತೆ ಎಲ್ಲಾ ಪಕ್ಷಗಳ ಸದಸ್ಯರು ಪಕ್ಷಭೇದ ಮರೆತು ನಿರ್ಣಯದ ಪರ ಮತಚಲಾಯಿಸಿದ್ದಾರೆ.
ಕಾರಣವೇನು?:
ಸಿಯುಇಟಿ ಪರಿಕಲ್ಪನೆಯಡಿ, ರಾಷ್ಟ್ರೀಯ ಪರೀûಾ ಪ್ರಾಧಿಕಾರ ನಡೆಸುವ ರಾಷ್ಟ್ರೀಯ ಪ್ರವೇಶ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಪಡೆಯುವ ಅಂಕಗಳ ಆಧಾರದ ಮೇಲೆ ರಾಜ್ಯಗಳ ಕೇಂದ್ರೀಯ ವಿವಿಗಳಲ್ಲಿ ಪ್ರವೇಶ ಕಲ್ಪಿಸಲು ಕೇಂದ್ರ ಸರ್ಕಾರ ಉದ್ದೇಶಿಸಿದೆ. ಸಿಯುಇಟಿ ಪರೀಕ್ಷೆಗೆ ಸಮ್ಮತಿಸುವ ರಾಜ್ಯಗಳ ಸರ್ಕಾರಿ ಅಥವಾ ಖಾಸಗಿ ವಿಶ್ವವಿದ್ಯಾಲಯಗಳು ತಮ್ಮಲ್ಲಿನ ಪ್ರವೇಶಕ್ಕೂ ಸಿಯುಇಟಿ ಅಂಕಗಳ ಮಾನದಂಡವನ್ನೇ ಬಳಸಬಹುದು ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಅದನ್ನು ತಮ್ಮ ರಾಜ್ಯದಲ್ಲಿ ಅಳವಡಿಸದಿರಲು ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.