ತೂತುಕುಡಿ :ಪೊಲೀಸರ ಗೋಲಿಬಾರ್‌ 9 ಬಲಿ

Team Udayavani, May 23, 2018, 6:00 AM IST

49.jpg

ಚೆನ್ನೈ/ತೂತುಕುಡಿ: ತಮಿಳುನಾಡಿನ ತೂತುಕುಡಿಯಲ್ಲಿ ವೇದಾಂತ ಕಂಪೆನಿ ಸ್ಟಲೈಟ್‌ ತ್ರಾಮ ಉತ್ಪಾದನಾ ಘಟಕ ಮುಚ್ಚುವಂತೆ ನಡೆದ ಪ್ರತಿಭಟನೆ ವೇಳೆ ಪೊಲೀಸರ ಗುಂಡಿನ ದಾಳಿಗೆ 9 ಮಂದಿ ಅಸುನೀಗಿದ್ದಾರೆ. 20 ಮಂದಿ ಗಾಯಗೊಂಡಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಘಟನೆ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶ ನೀಡಿದ್ದಾರೆ. ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಸಹಿತ ಪ್ರಮುಖ ರಾಜಕೀಯ ನಾಯಕರು ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳೀಯವಾಗಿ ಇರುವ ನೀರಿನ ಮೂಲಗಳನ್ನು ಕಲುಷಿತ ಗೊಳಿಸುತ್ತಿರುವ  ವೇದಾಂತ ಕಂಪೆನಿ ಸ್ಟಲೈìಟ್‌ ತಾಮ್ರ ಉತ್ಪಾದನಾ ಘಟಕ ಮುಚ್ಚಬೇಕೆಂದು 100 ದಿನಗಳಿಂದ ಟ್ಯುಟಿಕಾರಿನ್‌ನ ಜನರು ಪ್ರತಿಭಟನೆ ನಡೆಸುತ್ತಿದ್ದು. ಮಂಗಳವಾರ ಸ್ಥಳೀಯರೆಲ್ಲರೂ ಜಿಲ್ಲಾಧಿಕಾರಿ ಕಚೇರಿಯತ್ತ ಪ್ರತಿಭಟನ ಮೆರವಣಿಗೆ ನಡೆಸಲು ಸ್ಥಳೀಯ ಚರ್ಚ್‌ ಮುಂಭಾಗದಲ್ಲಿ ಸೇರಿದ್ದರು. ಪೊಲೀಸರು ಅದಕ್ಕೆ ಅನುಮತಿ ನೀಡದೆ ಸೆಕ್ಷನ್‌ ಜಾರಿ ಮಾಡಿದ್ದರು. ಇದರ ಹೊರತಾಗಿಯೂ 5 ಸಾವಿರಕ್ಕೂ ಹೆಚ್ಚು ಮಂದಿ ಜಿಲ್ಲಾಧಿಕಾರಿ ಕಚೇರಿಯತ್ತ ಧಾವಿಸಿದರು. ಮೊದಲು  ತಳ್ಳಾಟ ಶುರುವಾಯಿತು. ಬಳಿಕ ಜನರ ಗುಂಪಿನಿಂದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಯಿತು. ಗುಂಪೊಂದು ಪೊಲೀಸ್‌ ವಾಹನವನ್ನು ಎತ್ತಿ ಬುಡಮೇಲು ಮಾಡಿತು. ಪೊಲೀಸರು ಈ ಘಟನೆಗಳೆಲ್ಲ ತಡೆಯಲು ಲಾಠಿ ಪ್ರಹಾರ, ಅಶ್ರುವಾಯು ಸಿಡಿಸಿದರೂ ಪ್ರಯೋಜನವಾಗಲಿಲ್ಲ. ಪರಿಸ್ಥಿತಿ ಕೈಮೀರಿ ಹೋಗುತ್ತಿದ್ದಂತೆ ಹಲವಾರು ಮಂದಿ ಸಾರ್ವಜನಿಕ ಆಸ್ತಿಗೆ ಬೆಂಕಿ ಹಚ್ಚಿ ದಾಂಧಲೆ ಎಬ್ಬಿಸಿದರು. ಹೀಗಾಗಿ ಪೊಲೀಸರು ಗುಂಡು ಹಾರಿಸಿದ್ದರಿಂದ 9 ಮಂದಿ ಸಾವಿಗೀಡಾಗಿ, 20 ಮಂದಿಗೆ ಗಾಯಗಳಾಗಿವೆ.

ನ್ಯಾಯಾಂಗ ತನಿಖೆ: ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ ಮುಖ್ಯಮಂತ್ರಿ ಪಳನಿಸ್ವಾಮಿ, ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸುವ ಘೋಷಣೆ ಮಾಡಿದ್ದಾರೆ. ಅಸುನೀಗಿದ ವ್ಯಕ್ತಿಗಳ ಕುಟುಂಬ ಸದಸ್ಯರಿಗೆ 10 ಲಕ್ಷ ರೂ. ಜತೆಗೆ ಶೈಕ್ಷಣಿಕ ಅರ್ಹತೆಗೆ ಅನುಸಾರವಾಗಿ ಸರ್ಕಾರಿ ಉದ್ಯೋಗ, ಗಂಭೀರ ಗಾಯಗೊಂಡವರಿಗೆ 3 ಲಕ್ಷ ರೂ., ಅಲ್ಪಪ್ರಮಾಣದಲ್ಲಿ ಗಾಯಗೊಂಡವರಿಗೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಹೇಳಿದ್ದಾರೆ.

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.