ತಮಿಳುನಾಡು; ಕುರಂಗಣಿ ಬೆಟ್ಟ ಕಾಡ್ಗಿಚ್ಚಿನಲ್ಲಿ 9 ಚಾರಣಿಗರ ಸಜೀವ ದಹನ
Team Udayavani, Mar 12, 2018, 11:08 AM IST
ಥೇಣಿ. ಚೆನ್ನೈ : ತಮಿಳು ನಾಡಿನ ಥೇಣಿ ಜಲ್ಲೆಯ ಕುರಂಗಣಿ ಬೆಟ್ಟ ಪ್ರದೇಶದಲ್ಲಿ ಉಂಟಾಗಿರುವ ಕಾಡಿನ ಬೆಂಕಿಗೆ ನಿನ್ನೆ ಭಾನುವಾರ 9 ಮಂದಿ ಬಲಿಯಾಗಿದ್ದಾರೆ. ಇನ್ನೂ ಕೆಲವರು ಬೆಂಕಿಯಿಂದ ಆವೃತರಾಗಿ ಪ್ರಾಣಾಪಾಯಕ್ಕೆ ಸಿಲುಕಿದ್ದಾರೆ.
ಕಾಡಿನ ಬೆಂಕಿಯಲ್ಲಿ ಮೃತಪಟ್ಟವರಲ್ಲಿ ನಾಲ್ವರು ಮಹಿಳೆಯರು,ನಾಲ್ವರು ಪುರುಷರು ಮತ್ತು ಒಂದು ಮಗು ಸೇರಿದೆ. ಒಟ್ಟು 27 ಮಂದಿಯನ್ನು ಕಾಡಿನ ಬೆಂಕಿಯಿಂದ ರಕ್ಷಿಸಲಾಗಿದೆ; ಇವರಲ್ಲಿ 10 ಮಂದಿ ಗಾಯಾಳುಗಳಾಗಿದ್ದಾರೆ; ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಿದೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಕಾಡಿನ ಬೆಂಕಿಯಲ್ಲಿ ಸಿಲುಕಿಕೊಂಡ ಚಾರಣಿಗರು 8ರಿಂದ 30ರ ವಯೋಮಾನದವರು. ಇವರಲ್ಲಿ 9 ಮಂದಿ ಸುಟ್ಟು ಕರಕಲಾಗಿದ್ದಾರೆ. ತೀವ್ರವಾಗಿ ಹಬ್ಬುತ್ತಿರುವ ಕಾಡಿನ ಬೆಂಕಿಯಿಂದಾಗಿ ರಕ್ಷಣಾ ಕಾರ್ಯಕರ್ತರಿಗೆ ಅವರನ್ನು ತಲುಪಲು ಸಾಧ್ಯವಾಗುತ್ತಿಲ್ಲ ಎಂದು ವರದಿಯಾಗಿದೆ.
ಇಂದು ಸೋಮವಾರ ರಕ್ಷಣಾ ಕಾರ್ಯಾಚರಣೆಯಲ್ಲಿ ಗರುಡ ಕಮಾಂಡೋ ದಳದ ಆರು ಕಮಾಂಡೋಗಳನ್ನು, ಭಾರತೀಯ ವಾಯು ಪಡೆಯ ಮೂರು ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲಾಗಿದೆ. ಐಎಎಫ್ ನ ಇನ್ನೊಂದು ಹೆಲಿಕಾಪ್ಟರ್ ಈಗಾಗಲೇ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದೆ.
ಈ ವರೆಗೆ 27 ಮಂದಿಯನ್ನು ರಕ್ಷಿಸಲಾಗಿದೆ; ಗಾಯಾಳುಗಳಿಗೆ ವೈದ್ಯಕೀಯ ನೆರವನ್ನು ಒದಗಿಸಲಾಗಿದೆ ಎಂದು ರಾಜ್ಯದ ಆರೋಗ್ಯ ಸಚಿವ ಸಿ ವಿಜಯನಾಸ್ಕರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.