Tamil Nadu ಬಂಧಿತ ಸಚಿವ ಸೆಂಥಿಲ್ ಬಾಲಾಜಿಯನ್ನು ಸಂಪುಟದಿಂದ ವಜಾ ಮಾಡಿದ ರಾಜ್ಯಪಾಲರು
ತನಿಖೆಯ ಮೇಲೆ ಪ್ರಭಾವ.... ಕಾನೂನು ಮತ್ತು ನ್ಯಾಯದ ಪ್ರಕ್ರಿಯೆಗೆ ಅಡ್ಡಿ...
Team Udayavani, Jun 29, 2023, 8:15 PM IST
ಚೆನ್ನೈ: ಬಂಧಿತ ವಿದ್ಯುತ್ ಸಚಿವ ವಿ. ಸೆಂಥಿಲ್ ಬಾಲಾಜಿ ಅವರನ್ನು ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಗುರುವಾರ ರಾಜ್ಯ ಸಚಿವ ಸಂಪುಟದಿಂದ ವಜಾಗೊಳಿಸಿದ್ದಾರೆ.
“ಸಚಿವ ಸೆಂಥಿಲ್ ಬಾಲಾಜಿ ಅವರು ಉದ್ಯೋಗಕ್ಕಾಗಿ ನಗದು ತೆಗೆದುಕೊಳ್ಳುವುದು ಮತ್ತು ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವಾರು ಭ್ರಷ್ಟಾಚಾರದ ಪ್ರಕರಣಗಳಲ್ಲಿ ಗಂಭೀರ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ. ಸಚಿವ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ತನಿಖೆಯ ಮೇಲೆ ಪ್ರಭಾವ ಬೀರುತ್ತಿದ್ದಾರೆ ಮತ್ತು ಕಾನೂನು ಮತ್ತು ನ್ಯಾಯದ ಪ್ರಕ್ರಿಯೆಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ರಾಜ್ಯಪಾಲರು ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.
ಸಂಪುಟದಲ್ಲಿ ಸೆಂಥಿಲ್ ಬಾಲಾಜಿ ಅವರ ಮುಂದುವರಿಕೆ ನ್ಯಾಯಯುತ ತನಿಖೆ ಸೇರಿದಂತೆ ಕಾನೂನು ಪ್ರಕ್ರಿಯೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಮತ್ತು ಅಂತಿಮವಾಗಿ ರಾಜ್ಯದಲ್ಲಿ ಸಾಂವಿಧಾನಿಕ ಯಂತ್ರದ ಕುಸಿತಕ್ಕೆ ಕಾರಣವಾಗಬಹುದು ಎಂಬ ಸಮಂಜಸವಾದ ಆತಂಕಗಳಿವೆ ಎಂದು ಅವರು ಹೇಳಿದರು.
ಪ್ರಸ್ತುತ ಸೆಂಥಿಲ್ ಬಾಲಾಜಿ ಇಡಿ ತನಿಖೆ ನಡೆಸುತ್ತಿರುವ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಇನ್ನೂ ಕೆಲವು ಕ್ರಿಮಿನಲ್ ಪ್ರಕರಣಗಳನ್ನು ರಾಜ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.