ಕ್ವಾರಂಟೈನ್ ನಲ್ಲಿದ್ದ ಯುವಕ ನೆರೆಮನೆಯ ವೃದ್ದೆಗೆ ಕಚ್ಚಿದ: ಚಿಕಿತ್ಸೆ ಫಲಿಸದೆ ಆಕೆ ಸಾವು
Team Udayavani, Mar 29, 2020, 8:33 AM IST
ತಮಿಳುನಾಡು: ಹೋಮ್ ಕ್ವಾರಂಟೈನ್ ನಲ್ಲಿದ್ದ ಯುವಕನೊಬ್ಬ ಏಕಾಏಕಿ ಪಕ್ಕದ ಮನೆಯಲ್ಲಿದ್ದ 80 ವರ್ಷದ ವೃದ್ದೆಗೆ ಕಚ್ಚಿದ ಪರಿಣಾಮವಾಗಿ ಆಕೆ ಸಾವನ್ನಪ್ಪಿದ ಘಟನೆ ತೆನಿ ಜಿಲ್ಲೆಯಲ್ಲಿ ನಡೆದಿದೆ ಎಂದು ಹಿಂದುಸ್ಥಾನ್ ಟೈಮ್ಸ್ ವರದಿ ಮಾಡಿದೆ.
ಈ ಯುವಕ ಇತ್ತೀಚಿಗಷ್ಟೆ ಶ್ರೀಲಂಕಾದಿಂದ ಮರಳಿದ್ದು ತೆನಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಹೋಮ್ ಕ್ವಾರಂಟೈನ್ ನಲ್ಲಿದ್ದ. ಆದರೆ ಶುಕ್ರವಾರ ಮನೆಯಿಂದ ನಗ್ನವಾಗಿ ಹೊರಬಂದು ನೆರೆಮನೆಯಲ್ಲಿದ್ದ ವೃದ್ದೆಯ ಕುತ್ತಿಗೆ ಭಾಗಕ್ಕೆ ತೀವ್ರವಾಗಿ ಕಚ್ಚಿದ್ದಾನೆ. ಇದರಿಂದ ಗಂಭೀರ ಗಾಯಕ್ಕೊಳಗಾದ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಆಕೆ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಬಟ್ಟೆಗಳ ವ್ಯಾಪಾರ ಮಾಡುತ್ತಿದ್ದ ಯುವಕನನ್ನು ಇದೀಗ ಪೊಲೀಸರು ಬಂಧಿಸಿ ತನಿಖೆಗೊಳಪಡಿಸಿದ್ದಾರೆ.
ಶ್ರೀಲಂಕಾದಿಂದ ಹಿಂದಿರುಗಿದ್ದ ಈತನನ್ನು ಕೋವಿಡ್-19 ನಿಯಮದ ಪ್ರಕಾರ ಆರೋಗ್ಯ ಅಧೀಕಾರಿಗಳು ಹೋಮ್ ಕ್ವಾರಂಟೈನ್ ಗೆ ಒಳಪಡಿಸಿದ್ದರು. ಆದರೇ ಶುಕ್ರವಾರ ಏಕಾಏಕಿ ಈತ ಮನೆಯಿಂದ ನಗ್ನವಾಗಿ ಹೊರಬಂದು ಬೀದಿಯಲ್ಲಿ ಓಡಾಡಿದ್ದಾನೆ. ಇದರಿಂದ ಆಘಾತಕ್ಕೊಳಾದ ಕುಟುಂಬಸ್ಥರು ಆತನನ್ನು ಹಿಡಿಯಲು ಶತಪ್ರಯತ್ನ ಮಾಡಿದ್ದಾರೆ. ಈ ವೇಳೆ ನೆರೆಮನೆಯ ವೃದ್ಧೆಯ ಕೈಗೆ ಆತ ಸಿಕ್ಕಿಬಿದ್ದಿದ್ದಾನೆ. ಆದರೇ ರೋಷಾವೇಶದಲ್ಲಿ ಆತ ಕೂಡಲೆ ವೃದ್ದೆಯ ಕತ್ತಿಗೆ ಕಚ್ಚಿದ್ದಾನೆ. ಇದರಿಂದ ಗಂಭೀರ ಗಾಯಕ್ಕೊಳಗಾದ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.