![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 14, 2023, 3:46 PM IST
ಚೆನ್ನೈ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ನಿರಂತರವಾಗಿ ಕಲ್ಲು ತೂರಾಟ ಘಟನೆಗಳು ವರದಿಯಾಗುತ್ತಿವೆ. ಇದೀಗ ಮತ್ತೊಂದು ಘಟನೆ ಇಂದು (ಜು.4) ತಮಿಳುನಾಡಿನಲ್ಲಿ ನಡೆದಿದೆ.
ಚೆನ್ನೈ ಸೆಂಟ್ರಲ್ ರೈಲು ನಿಲ್ದಾಣದ ಪಕ್ಕದಲ್ಲಿರುವ ಬೇಸಿನ್ ಬ್ರಿಡ್ಜ್ ನಿಲ್ದಾಣದ ಬಳಿ ಮೈಸೂರು-ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ತೂರಾಟ ನಡೆಸಿದ್ದರಿಂದ ರೈಲಿನ ಎರಡು ಕಿಟಕಿಗಳಿಗೆ ಹಾನಿಯಾಗಿದೆ. ಎಕ್ಸ್‌ಪ್ರೆಸ್ ರೈಲು ಮೈಸೂರಿನಿಂದ ಚೆನ್ನೈಗೆ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಈ ವರ್ಷದ ಫೆಬ್ರವರಿಯಲ್ಲಿ ಬೆಂಗಳೂರಿನ ಕಂಟೋನ್ಮೆಂಟ್ ಸ್ಟೇಷನ್ ಬಳಿ ವಂದೇ ಭಾರತ್ ರೈಲಿನ ಮೇಲೆ ದುಷ್ಕರ್ಮಿಗಳು ಇದೇ ರೀತಿಯ ಕಲ್ಲು ತೂರಾಟ ನಡೆಸಿದ್ದರು.
ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್ಪ್ರೆಸ್ನ್ನು ಕಳೆದ ವರ್ಷ ನವೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಹಸಿರು ನಿಶಾನೆ ತೋರಿಸಿದರು. ಇದು ದಕ್ಷಿಣ ಭಾರತದ ಮೊದಲ ವಂದೇ ಭಾರತ್ ರೈಲು ಎಂಬ ಪ್ರಶಂಸೆಗೆ ಪಾತ್ರವಾಗಿತ್ತು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.