ಪ್ರಧಾನಿ ಮೋದಿ ಸಲಹೆಗಾರರಾಗಿ ತರಣ್ ಕಪೂರ್ ನೇಮಕ ; ಕೇಂದ್ರ ಸಂಪುಟ ಸಮಿತಿ ಅನುಮೋದನೆ
ಜ್ಞಾನೇಶ್ ಕುಮಾರ್ ಸಹಕಾರ ಕಾರ್ಯದರ್ಶಿ
Team Udayavani, May 2, 2022, 6:52 PM IST
ನವದೆಹಲಿ:ಕೇಂದ್ರ ಪೆಟ್ರೋಲಿಯಂ ಖಾತೆಯ ನಿವೃತ್ತ ಕಾರ್ಯದರ್ಶಿ ತರುಣ್ ಕಪೂರ್ ಅವರನ್ನು ಪ್ರಧಾನಮಂತ್ರಿಗಳ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ.
ನೇಮಕಗಳಿಗಾಗಿನ ಕೇಂದ್ರ ಸಂಪುಟ ಸಮಿತಿ ಒಪ್ಪಿಗೆಯ ಮೇರೆಗೆ ಸಿಬ್ಬಂದಿ ಮತ್ತು ತರಬೇತಿ ಸಚಿವಾಲಯ ಸೋಮವಾರ ಆದೇಶ ಹೊರಡಿಸಿದೆ.
ಹಿಮಾಚಲ ಪ್ರದೇಶ ಕೇಡರ್‌ನ 1987ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಅವರು, 2021 ನ.30ರಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿ ನಿವೃತ್ತಿಯಾಗಿದ್ದಾರೆ. ಅವರು ಕರ್ತವ್ಯಕ್ಕೆ ಸೇರಿದ ದಿನದಿಂದ ಎರಡು ವರ್ಷಗಳ ಕಾಲ ಹುದ್ದೆಯಲ್ಲಿ ಇರಲಿದ್ದಾರೆ.
ಇನ್ನೂ ಇಬ್ಬರು:
1994ನೇ ಬ್ಯಾಚ್‌ನ ಮಧ್ಯಪ್ರದೇಶ ಕೇಡರ್‌ನ ಐಎಎಸ್ ಅಧಿಕಾರಿಯಾಗಿರುವ ಹರಿ ರಂಜನ್ ರಾವ್ ಅವರನ್ನು ಪ್ರಧಾನಮಂತ್ರಿಗಳ ಕಚೇರಿಯಲ್ಲಿ ಹೆಚ್ಚುವರಿ ಕಾರ್ಯದರ್ಶಿಗಳನ್ನಾಗಿ ನೇಮಿಸಲಾಗಿದೆ. ಸದ್ಯ ಅವರು, ದೂರಸಂಪರ್ಕ ಸಚಿವಾಲಯದಲ್ಲಿದ್ದಾರೆ. ಇದಲ್ಲದೆ ಮತ್ತೊಬ್ಬ ಹಿರಿಯ ಐಎಎಸ್ ಅಧಿಕಾರಿ ಆಶಿಶ್ ಚಂದ್ರ ಅವರನ್ನೂ ಅದೇ ಹುದ್ದೆಗೆ ನೇಮಿಸಲಾಗಿದೆ.
ಇದನ್ನೂ ಓದಿ:ಕುಂಬಳಕಾಯಿ ಕಳ್ಳ ಅಂದ್ರೆ ಅಶ್ವತ್ಥ್ ನಾರಾಯಣ್ ಹೆಗಲು ಮುಟ್ಟಿಕೊಂಡಿದ್ದೇಕೆ? : ಡಿಕೆಶಿ
ವರ್ಗಾವಣೆ:
ಸಹಕಾರ ಸಚಿವಾಲಯಕ್ಕೆ ಹಿರಿಯ ಐಎಎಸ್ ಅಧಿಕಾರಿ ಜ್ಞಾನೇಶ್ ಕುಮಾರ್ ಅವನ್ನು ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಅವರು 1988ನೇ ಬ್ಯಾಚ್‌ನ ಕೇರಳ ಕೇಡರ್ ಅಧಿಕಾರಿ. ಹಾಲಿ ಕಾರ್ಯದರ್ಶಿ ದೇವೇಂದ್ರ ಕುಮಾರ್ ಸಿಂಗ್ ಅವರನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.
ಕೇಂದ್ರ ಸಂಪುಟ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿರುವ ಅಲ್ಕೇಶ್ ಕುಮಾರ್ ಶರ್ಮಾರನ್ನು ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ, ಸಿಬ್ಬಂದಿ ಮತ್ತು ತರಬೇತಿ ನಿರ್ದೇಶನಾಲಯದ ಕಾರ್ಯದರ್ಶಿ ಪ್ರದೀಪ್ ಕುಮಾರ್ ಅವರನ್ನು ಅಲ್ಕೇಶ್ ಸ್ಥಾನಕ್ಕೆ ನೇಮಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.