IT Raid: ನಾಸಿಕ್‌ನ ಸುರಾನಾ ಜ್ಯುವೆಲ್ಲರ್ಸ್ ಮೇಲೆ ಐಟಿ ದಾಳಿ, 26 ಕೋಟಿ ಮೌಲ್ಯದ ನಗದು ವಶ
Team Udayavani, May 27, 2024, 8:56 AM IST
ಮಹಾರಾಷ್ಟ್ರ: ಮಹಾರಾಷ್ಟ್ರದ ನಾಸಿಕ್ ಜಿಲ್ಲೆ ಮೂಲದ ಆಭರಣ ಕಂಪನಿಯೊಂದರ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಸುಮಾರು 26 ಕೋಟಿ ರೂಪಾಯಿ ನಗದು ಮತ್ತು 90 ಕೋಟಿ ರೂಪಾಯಿ ಮೌಲ್ಯದ ಲೆಕ್ಕಕ್ಕೆ ಸಿಗದ ಸಂಪತ್ತಿನ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನಾಸಿಕ್ ಮೂಲದ ಆಭರಣ ಕಂಪೆನಿಯಾದ ಸುರಾನಾ ಜ್ಯುವೆಲರ್ಸ್ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಈ ವೇಳೆ ಕಂತೆ ಕಂತೆ ಹಣಗಳು ಪತ್ತೆಯಾಗಿವೆ ಅಲ್ಲದೆ ಈ ಹಣಗಳನ್ನು ಲೆಕ್ಕ ಹಾಕಲು ಅಧಿಕಾರಿಗಳಿಗೆ ಹದಿನಾಲ್ಕು ಗಂಟೆಗಳು ಬೇಕಾಯಿತು ಎಂದು ಹೇಳಲಾಗಿದೆ, ಸುರಾನಾ ಜ್ಯುವೆಲರ್ಸ್ ಕಂಪೆನಿ ಹಾಗೂ ಮಾಲೀಕರ ಮನೆಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ತಂಡ ಸುಮಾರು ಮೂವತ್ತು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ದಾಖಲೆ ಇಲ್ಲದ ಕೋಟಿಗಟ್ಟಲೆ ಹಣಗಳನ್ನು ವಶಕ್ಕೆ ಪಡೆದುಕೊಂಡಿದೆ.
ಆಭರಣ ಮಳಿಗೆ ಮಾಲೀಕರ ಬಳಿ ಇಷ್ಟೊಂದು ಮೊತ್ತದ ಹಣ ಹಾಗೂ ದಾಖಲೆ ಪತ್ರಗಳು ಪತ್ತೆಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ.
ಕಳೆದ ಕೆಲ ದಿನಗಳಿಂದ ಆದಾಯ ತೆರಿಗೆ ಅಧಿಕಾರಿಗಳು ಮಹಾರಾಷ್ಟ್ರದಲ್ಲೇ ಬೀಡು ಬಿಟ್ಟಿದ್ದು ಹಲವು ಉದ್ಯಮಿಗಳ ಕಂಪೆನಿ, ನಿವಾಸಗಳ ಮೇಲೆ ದಾಳಿ ನಡೆಸಿ ಕೋಟಿಗಟ್ಟಲೆ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ, ಇತ್ತೀಚಿಗೆ ನಾಂದೇಡ್‌ನಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ ಸುಮಾರು 170 ಕೋಟಿ ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದರು ಇದಾದ ಬಳಿಕ ಇದೀಗ ನಾಸಿಕ್ ನಲ್ಲಿರುವ ಆಭರಣ ಮಳಿಗೆಯ ಮಾಲೀಕರ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆಸಿ ಕೋಟಿಗಟ್ಟಲೆ ಹಣ ಹಾಗೂ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದುಕೊಂಡಿದೆ.
#WATCH | The Income Tax Department launched a raid on Surana Jewellers in Nashik, in response to alleged undisclosed transactions by the proprietor. About Rs 26 crore in cash and documents of unaccounted wealth worth Rs 90 crore have been seized in raids carried out by the Income… pic.twitter.com/lnv9wAGi3N
— ANI (@ANI) May 26, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.