ತೆರಿಗೆದಾರರಿಗೆ ಇಲ್ಲ ನಗದು
Team Udayavani, Feb 8, 2019, 12:45 AM IST
ಹೊಸದಿಲ್ಲಿ: ಕೇಂದ್ರ ಸರಕಾರ ಈ ಬಾರಿಯ ಬಜೆಟ್‌ನಲ್ಲಿ ಪ್ರಸ್ತಾವಿಸಿದಂತೆ ರೈತರಿಗೆ ವಾರ್ಷಿಕ 6 ಸಾವಿರ ರೂ. ನಗದು ಒದಗಿಸುವ ಯೋಜನೆಯು ಆದಾಯ ತೆರಿಗೆ ಪಾವತಿಸುವವರು, ಹಾಲಿ ಅಥವಾ ನಿವೃತ್ತ ಸರ್ಕಾರಿ ನೌಕರರು, ಹಾಲಿ ಅಥವಾ ಮಾಜಿ ಸಂಸದರು, ಶಾಸಕರು, ಸಚಿವರಿಗೆ ಅನ್ವಯಿಸುವುದಿಲ್ಲ. ಅಷ್ಟೇ ಅಲ್ಲ, ವೈದ್ಯರು, ಇಂಜಿನಿಯರ್, ವಕೀಲರು, ಚಾರ್ಟರ್ಡ್ ಅಕೌಂಟಂಟ್ ಸೇರಿದಂತೆ ಹಲವು ವೃತ್ತಿಪರರಿಗೆ ಹಾಗೂ ಅವರ ಕುಟುಂಬದವರಿಗೆ ಇದು ಲಭ್ಯವಾಗುವುದಿಲ್ಲ. ಕೃಷಿ ಸಚಿವಾಲಯ ಬಿಡುಗಡೆ ಮಾಡಿದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮಾರ್ಗಸೂಚಿಗಳಲ್ಲಿ ಹೀಗೆ ಸ್ಪಷ್ಟಪಡಿಸಲಾಗಿದೆ.
ಪತಿ, ಪತ್ನಿ ಮತ್ತು ಅಪ್ರಾಪ್ತ ವಯಸ್ಸಿನ ಮಕ್ಕಳಿರುವ ಕುಟುಂಬವನ್ನು ಈ ಯೋಜನೆ ಅಡಿಯಲ್ಲಿ ಕುಟುಂಬ ಎಂದು ಪರಿಗಣಿಸಲಾಗುತ್ತದೆ. ಎರಡು ಹೆಕ್ಟೇರ್‌ಗಿಂತ ಕಡಿಮೆ ಭೂಮಿ ಇರುವವರಿಗೆ ಮಾತ್ರ ಈ ಸೌಲಭ್ಯ ಲಭ್ಯವಿದೆ. ಮೊದಲ ಕಂತು ಮಾರ್ಚ್ 31ರಂದು ಬಿಡುಗಡೆಯಾಗಲಿದ್ದು, ಎರಡನೇ ಕಂತು ಪಡೆಯಲು ಆಧಾರ್ ನೀಡುವುದು ಕಡ್ಡಾಯವಾಗಿರಲಿದೆ. ಫಲಾನುಭವಿಗಳ ಅರ್ಹತೆಯನ್ನು ಅಳೆಯಲು ಸ್ವಯಂ ಘೋಷಣೆಯೇ ಮಾನದಂಡವಾಗಿರಲಿದ್ದು, ಸ್ವಯಂ ಘೋಷಣೆ ತಪ್ಪಾಗಿದ್ದರೆ ನೀಡಲಾದ ಹಣವನ್ನು ವಾಪಸ್ ಪಡೆಯಲಾಗುತ್ತದೆ.
ರಾಜ್ಯಗಳಿಗೆ ಪತ್ರ
ಈ ನಡುವೆ, ಕಿಸಾನ್ ಸಮ್ಮಾನ್ ಯೋಜನೆಯನ್ನು ತ್ವರಿತಗತಿಯಲ್ಲಿ ಅನುಷ್ಠಾನ ಮಾಡಲು ಸಹಕಾರ ನೀಡುವಂತೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರು ವುದಾಗಿ ಕೇಂದ್ರ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ತಿಳಿಸಿದ್ದಾರೆ. ಯೋಜನೆಯನ್ನು ಸಮಯಕ್ಕೆ ಸರಿಯಾಗಿ ಜಾರಿ ಮಾಡಬೇಕೆಂದರೆ, ರಾಜ್ಯಮಟ್ಟದ ಆಡಳಿತ ಯಂತ್ರದಿಂದ ಗ್ರಾಮೀಣ ಮಟ್ಟ ದವರೆಗೆ ಎಲ್ಲರ ಒಳಗೊಳ್ಳುವಿಕೆ ಅಗತ್ಯವಾಗಿರುತ್ತದೆ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಸೈಫ್ ಮೇಲೆ ಹಲ್ಲೆಗೆ ಬಳಸಿದ್ದ ಚಾಕುವಿನ ಮೂರನೇ ಭಾಗ ಬಾಂದ್ರಾ ಕೆರೆ ಬಳಿ ಪತ್ತೆ
Holy Dip: ಮಹಾಕುಂಭದಲ್ಲಿ ಸಿಎಂ ಯೋಗಿ ಸಂಪುಟ ಸದಸ್ಯರ ಪವಿತ್ರ ಸ್ನಾನ
Crew Module: ಗಗನಯಾನಕ್ಕೆ ಮಾನವರ ಕರೆದೊಯ್ಯುವ ನೌಕೆ ಶ್ರೀಹರಿಕೋಟಾಕ್ಕೆ ರವಾನೆ
Mosque Survey: ಮಥುರಾ ಮಸೀದಿ ಸಮೀಕ್ಷೆ… ಸುಪ್ರೀಂ ತಡೆಯಾಜ್ಞೆ ಮುಂದುವರಿಕೆ
ನಮ್ಮ ಪಕ್ಷಕ್ಕೆ ಮಾನ್ಯತೆ ಸಿಗುತ್ತಿಲ್ಲ, ಸಚಿವ ಸ್ಥಾನ ತೊರೆವೆ: ಮಾಂಜಿ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
Donald Trump: ಚೀನಾ ಆಮದು ಮೇಲೆ ಶೇ.10 ಸುಂಕ… ನೂತನ ಅಧ್ಯಕ್ಷ ಟ್ರಂಪ್